ಜಾನಪದದ ಮಹತ್ವ ಅರಿವು ಅಗತ್ಯ
Team Udayavani, Aug 28, 2022, 5:21 PM IST
ರಾಮನಗರ: ವಿದ್ಯಾರ್ಥಿಗಳು ಜಾನಪದ ಮತ್ತು ಅದರ ಮಹತ್ವ ಅರ್ಥ ಮಾಡಿಕೊಳ್ಳಬೇಕಾದ ತುರ್ತು ಹಿಂದೆಂದಿ ಗಿಂತಲೂ ಈಗ ಅಗತ್ಯವಿದೆ. ಅವರಿಗೆ ಅರಿವು ಮೂಡಿಸು ವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ತಿಳಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಿಡದಿ ಜ್ಞಾನವಿಕಾಸ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಹಾಗೂ ಬಿಡದಿ ಹೋಬಳಿ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪದ ಜನರ ಬಾಯಿಂದ ಬಾಯಿಗೆ ಹರಿದು ಬಂದದ್ದು, ಅದರ ನಾಶ ಆಗೋದು ಅಷ್ಟೊಂದು ಸುಲಭವಲ್ಲ. ನಮ್ಮ ಸಮೂಹ ಎಲ್ಲರೂ ಜವಾಬ್ದಾರಿ ವಹಿಸಿ ಜನಪದದ ಉಳಿವಿಗೆ ಶ್ರಮಿಸಬೇಕಿದೆ. ಆಧುನಿಕ ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತಿರುವ ಜಾನಪದ ಸಾಹಿತ್ಯ ಸಂಸ್ಕೃತಿಯ ಎಲ್ಲ ನೆಲೆಗಳಲ್ಲೂ ವ್ಯಾಪಿಸುವ ಅವಶ್ಯಕತೆಯಿದೆ ಎಂದರು.
ಕಲಾವಿದರನ್ನು ಗುರುತಿಸಿ ಪ್ರೊತ್ಸಾಹ: ರಾಮನಗರ ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ. ನಾಗೇಶ್ ಮಾತನಾಡಿ, ಸಮಾಜದ ಪ್ರತಿಯೊಬ್ಬರಲ್ಲೂ ಜಾನಪದ ಸಾಹಿತ್ಯದ ಪ್ರೀತಿ ಹುಟ್ಟಿಸುವ ಕಾರ್ಯವಾಗಬೇಕಾಗಿದೆ. ಆ ಕೆಲಸವನ್ನು ಪರಿಷತ್ತು ನಿರ್ವಹಿಸುವ ಗುರುತರ ಹೊಣೆಗಾರಿಕೆ ಹೊಂದಿದೆ ಎಂದ ಅವರು, ಜಾನಪದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ ಕೂಡ ಅದರ ಉಳಿವಿಗೆ ಯೋಜನೆಗಳನ್ನ ರೂಪಿಸಿ ಕಾರ್ಯಕ್ರಮಗಳ ಮುಖಾಂತರ ಕಲಾವಿದರನ್ನ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಜಾನಪದ ವಿದ್ವಾಂಸ ಭೈರೇಗೌಡ ಮಾತನಾಡಿ, ಎಲ್ಲಾ ಪ್ರಕ್ರಿಯೆಗಳಿಗೂ ತಾಯಿ ಬೇರೆನಿ ಸಿಕೊಂಡಿರುವ ಜಾನಪದಕ್ಕೊಂದು ದಿನ ವಿಶ್ವ ಜಾನಪದ ದಿನಾಚರಣೆಯಾದರೆ ಅದಕಿನ್ನೂ ಯುನೆಸ್ಕೋ ಮತ್ತು ವಿಶ್ವಸಂಸ್ಥೆಯ ಅನುಮೋದನೆ ದೊರೆಯದಿರುವುದು ವಿಷಾದದ ಸಂಗತಿ ಎಂದರು.
ನೇಮಕಾತಿ ಪತ್ರ ವಿತರಣೆ: ಬಿಡದಿ ಹೋಬಳಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಮತ್ತು ಕಾರ್ಯದರ್ಶಿಗಳನ್ನಾಗಿ ಮಾದೇಶ್ ಮತ್ತು ಕೆ.ಟಿ ರವಿಕುಮಾರ್‌ಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು. ಕಸಾಪ ಕೋಶಾಧ್ಯಕ್ಷ ನಂಜುಂಡಿ ಬಾನಂದೂರು, ಬಿಡದಿ ಹೋಬಳಿ ಘಟಕದ ನಿ.ಪೂ. ಅಧ್ಯಕ್ಷ ಯೋಗಾನಂದ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಮಹದೇವ್ ಲಕ್ಕಸಂದ್ರ, ಜೆವಿಐಟಿ ಸಂಸ್ಥೆ ನಿರ್ದೇಶಕ ಗಂಗಣ್ಣ, ರಾಮನಗರ ತಾ.ಕಸಾಪ ಸಂಚಾಲಕ ಗಿರೀಶ್ ರಾಮನಹಳ್ಳಿ, ಕೆ. ಲೋಕೇಶ್, ಬಿ.ಟಿ.ರಾಜೇಂದ್ರ ಹಾಗೂ ಮತ್ತಿತರರು ಇದ್ದರು.
ಜಾನಪದ ನಮ್ಮ ಪೂರ್ವಿಕರು ನಮಗೆ ಬಳುವಳಿಯಾಗಿ ನೀಡಿರುವ ಸಂಪತ್ತು. ಜಾನಪದ ಉಳಿಸುವ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಹಲವು ಯೋಜನೆಗೆ ಚಿಂತಿಸುತ್ತಿದ್ದು, ಕಲಾವಿದರನ್ನ ಪ್ರೋತ್ಸಾಹಿಸಿ ಉತ್ತೇಜನ ನೀಡುವ ಮೂಲಕ ಜನಪದದ ಉಳುವಿಗೆ ಶ್ರಮಿಸುತ್ತೇನೆ. –ಬಿ.ಟಿ ನಾಗೇಶ್, ಕಸಾಪ ಜಿಲ್ಲಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.