ಕನಕಪುರ ಬೆಂಗಳೂರಿಗೆ ಸೇರುತ್ತದೆ, ಬೆಂಗಳೂರಿಗರಿಗೆ ಭೂಮಿ ಮಾರಾಟ ಮಾಡಬೇಡಿ: ಡಿ.ಕೆ.ಶಿವಕುಮಾರ್
Team Udayavani, Oct 24, 2023, 11:53 AM IST
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು.
ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನು ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು.
ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗಿಯೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ, ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.
ಹಿಂದೂ ಧರ್ಮದಲ್ಲಿ ಸಾವಿರಾರು ದೇವರುಗಳನ್ನು ಪೂಜಿಸಿಕೊಂಡು ಬರುತ್ತಿರುವ ವಿಚಿತ್ರ ಆಚರಣೆ, ನಂಬಿಕೆ ಮಾಡಿಕೊಂಡು ಬಂದಿದ್ದೇವೆ. ಬೇರೆಯವರೆಲ್ಲಾ ಒಂದೇ ದೇವರು ಪೂಜಿಸುತ್ತಾರೆ. ಭಕ್ತಿಗೆ ಯಾವುದೇ ದೇವರಿಲ್ಲ ಎಂದು ನುಡಿದರು.
ಇದನ್ನೂ ಓದಿ:Viral Video: ಚಹಾ ಮಾರುವ ರಜಿನಿಕಾಂತ್ ಅವರನ್ನು ನೋಡಿ ದಂಗಾದ ಫ್ಯಾನ್ಸ್.!
ವೀರಭದ್ರ ಶಿವನ ಸ್ವರೂಪ, ದೇವರುಗಳನ್ನೇ ಕಾಪಾಡುವ ದೇವರು ಈತ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ನಾವು ನಡೆಯಬೇಕು ಎಂದು ತಿಳಿಸಿದರು.
ವೀರಭದ್ರ ದೇವಸ್ಥಾನ ಉಳಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಸಂಸದ ಡಿ.ಕೆ.ಸುರೇಶ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತನಾಡಿದರು, ಯೋಜನಾ ನಕ್ಷೆ ಬದಲಾಯಿಸಲು ಆಗಲಿಲ್ಲ. ಈಗ ಆ ದೇವರ ಅನುಗ್ರಹದಿಂದ ಹೊಸ ದೇವಸ್ಥಾನ ನಿರ್ಮಾಣವಾಗುತ್ತಿದೆ ಎಂದರು.
ಎಲ್ಲರ ಕೈಗಳು ಇರುವುದು ಕಾಯಕ ಮಾಡಲು, ದಾನಮಾಡಲು. ಡಿ.ಕೆ.ಶಿವಕುಮಾರ್, ಪಿ.ಜಿ.ಆರ್.ಸಿಂಧ್ಯಾ ಎಲ್ಲರ ಕೈಗಳು ಇರುವುದೇ ದಾನ ಮಾಡಲು. ದೇವರ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಕನಕಪುರ ತಾಲೂಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಹೊಸ ರೂಪ ಕೊಟ್ಟಿದ್ದೇವೆ. ನಾವು ಈ ಕ್ಷೇತ್ರದ ಪ್ರತಿನಿಧಿಯಾದ ಮೇಲೆ ಎಷ್ಟು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿರುವ ಕುರಿತು ಪುಸ್ತಕವನ್ನೇ ಬರೆಯಬಹುದು ಎಂದರು.
ಪ್ರಸ್ತುತ ವೀರಭದ್ರನ ದೇವಸ್ಥಾನಕ್ಕೆ ಎಷ್ಟು ಸಹಾಯ ಮಾಡುತ್ತೇನೆ ಎಂದು ಸಾರ್ವಜನಿಕವಾಗಿ ಹೇಳುವುದಿಲ್ಲ. ನಂತರ ಅದನ್ನೇ ಒಂದು ದೊಡ್ಡ ಸುದ್ದಿ ಮಾಡುತ್ತಾರೆ. ನಮಗೆ ವಿಚಾರ, ಆಚಾರ ಮುಖ್ಯ. ಪ್ರಚಾರವಲ್ಲ, ಈ ದೇವಸ್ಥಾನದಲ್ಲಿ ಪ್ರತಿ ಕುಟುಂಬದ ಹಣವಿರಬೇಕು ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಸ್ಥಾನ ಬೆಂಗಳೂರಿಗೆ ಸೀಮಿತಿ. ಇದು ನನ್ನ ಊರಿನ ಕೆಲಸ. ನಮ್ಮ ಕ್ಷೇತ್ರದ ಯಾವುದೇ ಕೆಲಸ ಇದ್ದರು ನಾವು ಹಿಂಜರಿಯುವುದಿಲ್ಲ, ಆದ ಕಾರಣ ಮೈಸೂರಿನಲ್ಲಿ ಪ್ರಮುಖ ಕೆಲಸವಿದ್ದರೂ ನಾನು ನಮ್ಮ ಕ್ಷೇತ್ರಕ್ಕೆ ಬಂದೆ ಎಂದು ಹೇಳಿದರು.
8 ನೇ ಬಾರಿ ಗೆದ್ದ ನಂತರ ನನ್ನ ಮೊದಲ ಬಾರಿಗೆ ಧಾರ್ಮಿಕ ಕೆಲಸಕ್ಕೆ ಬಂದಿದ್ದೇನೆ. ಹೆಚ್ಚು ಕೆಲಸ ಮಾಡುವ ಶಕ್ತಿ ಆ ದೇವರು, ನಮಗೆ, ನಿಮಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಉದಾರ ಮನಸ್ಸಿನಿಂದ ಈ ದೇವಸ್ಥಾನ ಕಟ್ಟಲು ಎಲ್ಲರೂ ಸಹಾಯ ಮಾಡಬೇಕು ಎಂದರು.
ಕಬ್ಬಾಳಮ್ಮನ ದೇವಸ್ಥಾನ ಜೀರ್ಣೋದ್ಧಾರ ಮಾಡುವ ವೇಳೆ, ಒಂದಷ್ಟು ಜನ ದೇವಿಯನ್ನು ಮುಟ್ಟಬೇಡ, ಸುಟ್ಟು ಹೋಗುವೆ ಎಂದರು. ನಂತರ, ನಾನು ನೊಣವಿನಕೆರೆ ಸ್ವಾಮೀಜಿಗಳ ಬಳಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಒಬ್ಬರ ಹೆಸರು ಸೂಚಿಸಿ ಇವರ ಕಡೆಯಿಂದ ನೆರವೇರಿ ಭಿನ್ನ ಮಾಡು ಎಂದರು. ಈಗ ಅದ್ಭುತವಾದ ದೇವಸ್ಥಾನ ನಿರ್ಮಾಣವಾಗಿದೆ ಎಂದರು.
ನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ, ನಂಬಿಗೆಯಿಂದಧಿಕ ಗುಣವಿಲ್ಲ, ದೈವವುಂ ಶುಭವಿಂದಿಲ್ಲ ಸರ್ವಜ್ಞ ಎನ್ನುವ ಮಾತಿನಂತೆ ಶಿವನಿಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ದೇವರಿಲ್ಲ, ಆದ ಕಾರಣ ಎಲ್ಲರೂ ನಂಬಿಕೆಯಿಟ್ಟು ಕೆಲಸ ಮಾಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Ramanagara: ಡ್ರೋನ್ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಕಣ್ವ ಜಲಾಶಯದಲ್ಲಿ ಪತ್ನಿಯೊಂದಿಗೆ ವಾಟರ್ ಬೋಟಿಂಗ್ ನಡೆಸಿದ ಯೋಗೇಶ್ವರ್
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Kottigehara: ಸ್ವೀಟ್ ಬಾಕ್ಸ್‌ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರ ಸೆರೆ
Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?
ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ
Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.