Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ
Team Udayavani, Sep 29, 2023, 9:55 AM IST
ರಾಮನಗರ: ತಮಿಳು ನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ರಾಮನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಸಂಸದರ ಫೋಟೊ ಹಿಡಿದುಕೊಂಡು, ನಾಲಾಯಕ್ ಸಂಸದರು ಎಂದು ಧಿಕ್ಕಾರ ಕೂಗಲಾಗುತ್ತಿದೆ,
ರಾಮನಗರದ ಐಜೂರು ವೃತ್ತದಲ್ಲಿ ಕನ್ನಡ ಪರ ಮತ್ತು ರೈತ ಸಂಘಟನೆಗಳು, ‘ಕಾವೇರಿ ನೀರಿನ ಬಗ್ಗೆ ಧ್ವನಿ ಎತ್ತದ ನಾಲಾಯಕ್ ಸಂಸದರು’ ಎಂದು ಘೋಷಣೆ ಕೂಗುತ್ತಿದ್ದಾರೆ.
ಖಾಲಿ ಮಡಕೆ ತೋರಿಸಿ ‘ನಮ್ಮಲ್ಲಿ ನೀರಿಲ್ಲ’ ಎಂದು ಘೋಷಣೆ ಕೂಗುತ್ತಿದ್ದು, ‘ಇಂದು ಸಭೆ ಕರೆದಿದ್ದೀರಿ ನಿಮಗೆ ಮಾನ ಮರ್ಯಾದೆ ಇದೆಯಾ’ ಎಂದು ಸರ್ಕಾರಕ್ಕೆ ಪ್ರಶ್ನೆ ಹಾಕುತ್ತಿದ್ದಾರೆ. ‘ಸಂಜೆಯೊಳಗೆ ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದಾರೆ. ರಾಮನಗರ ಸಂಸದ ತಮಿಳುನಾಡಿಗೆ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಘೋಷಣೆ ಕೂಗುತ್ತಿದ್ದಾರೆ.
ಇದನ್ನೂ ಓದಿ:Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ
ಎಮ್ಮೆ ಕೊರಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾವಚಿತ್ರ ಹಾಕಿ ಮೆರವಣಿಗೆ ಮಾಡುತ್ತಿದ್ದಾರೆ. ಕನ್ನಡ, ರೈತ ಪರ ಸಂಘಟನೆಗಳು ನಗರದ ಕೆಂಪೇಗೌಡ ವೃತ್ತದಿಂದ ಐಜೂರು ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.