ರೈತರಿಗೆ ಕಿಸಾನ್ ಸಮ್ಮಾನ್ ಮಾಹಿತಿ
Team Udayavani, Aug 10, 2020, 9:12 AM IST
ಮಾಗಡಿ: ತಾಲೂಕಿನ ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6ನೇ ಕಂತಿನ ನಗದು ವರ್ಗಾವಣೆ ಮತ್ತು ಕೃಷಿ ಮೂಲ ಸೌಲಭ್ಯ ನಿಧಿಯ ಉದ್ಘಾಟನೆ ಕುರಿತು ನೇರ ವೀಕ್ಷಣೆ ಮಾಡಲಾಯಿತು.
ಕೇಂದ್ರದ ತೋಟಗಾರಿಕಾ ವಿಜ್ಞಾನಿ ವಿಕಾಸ್ ಅವರು ನೇರ ಪ್ರಸಾರದ ಮುಖ್ಯ ಉದ್ದೇಶಗಳನ್ನು ಕನ್ನಡಕ್ಕೆ ಅನುವಾದಿಸಿ ರೈತರಿಗೆ ಮಾಹಿತಿ ನೀಡಿದರು. ಹಲವಾರು ರಾಜ್ಯಗಳ ಸಂಘ ಸಂಸ್ಥೆಗಳ ಜತೆ ನೇರ ಸಂವಾದದಲ್ಲಿ ರೈತರಿಗೆ ಸೂಕ್ತ ಸಮಯದಲ್ಲಿ ಕೃಷಿ ಮೂಲ ಸೌಕರ್ಯ ಒದಗಿಸಬೇಕು, ಮೌಲ್ಯವರ್ಧಿತ ಉತ್ಪನ್ನಗಳ ಮಹತ್ವದ ಕುರಿತು ತಿಳಿಸಿಕೊಟ್ಟರು. ಕೇಂದ್ರದ ಮತ್ತೋರ್ವ ಕೃಷಿ ವಿಸ್ತರಣೆ ವಿಜ್ಞಾನಿ ಚೈತ್ರಾ ಮಾತನಾಡಿ, ಈ ಯೋಜನೆಯಿಂದ ರೈತರಿಗೆ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಖರೀದಿಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು.
ಕೇಂದ್ರದ ವಿಷಯ ತಜ್ಞರಾದ ಶಾಂತಾಬಲಗೊಂಡ, ಕ್ಷೇತ್ರ ವ್ಯವಸ್ಥಾಪಕ ರಂಜಿತ್‌ಕುಮಾರ್, ಸುಮಾರು 22 ರೈತ, ರೈತ ಮಹಿಳೆಯರು ಭಾಗವಹಿಸಿದ್ದರು. ಈ ವೇಳೆ ಕೆವಿಕೆಯ 45 ರೈತರ ವಾಟ್ಸಪ್ ಗುಂಪುಗಳಿಗೆ ಲಿಂಕ್ ಕಳುಹಿಸಿ ನೋಡಲು ಅನುವು ಮಾಡಿಕೊಡಲಾಯತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.