ಪೌತಿ ಖಾತೆ ಆಂದೋಲನ ಆರಂಭ
Team Udayavani, Dec 21, 2019, 3:47 PM IST
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಹುಣಸನಹಳ್ಳಿ, ಕೈಲಾಂಚ, ಹುಲಿಕೆರೆ-ಗುನ್ನೂರು, ಬನ್ನಿಕುಪ್ಪೆ, ವಿಭೂತಿಕೆರೆ ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಪೌತಿ ಖಾತೆ ಆಂದೋಲನ ಆರಂಭವಾಗಿದೆ.
ಸರ್ಕಾರದ ನಿರ್ದೇಶನದ ಮೇರೆಗೆ ರಾಮನಗರ ಜಿಲ್ಲಾಡಳಿತ ಪೌತಿ ಖಾತಾ ಆಂದೋಲನ ಜಾರಿ ಮಾಡಿದೆ. ಉಪ ತಹಶೀಲ್ದಾರ್ ವಿಲಿಯಂ ನೇತೃತ್ವದಲ್ಲಿ ಆಂದೋಲನ ನಡೆದಿದ್ದು, ಈ ಭಾಗದ ರೈತರಿಂದ ಕಂದಾಯ ಇಲಾಖೆ ಅಧಿಕಾರಿಗಳು ಅರ್ಜಿ ಸ್ವೀಕರಿಸಲಾರಂಭಿಸಿದ್ದಾರೆ. ಕೈಲಾಂಚ ಗ್ರಾಪಂ ಕಚೇರಿ ಆವರಣದಲ್ಲಿ ಉಪ ತಹಶೀಲ್ದಾರ್ ವಿಲಿಯಂ, ರಾಜಸ್ವ ನಿರೀಕ್ಷಕರಾದ ಟಿ.ಎನ್. ಬಸವರಾಜು, ಸ್ವಾಮಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಗಳ ನೇತೃತ್ವದಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಿದರು.
ಉಪಯುಕ್ತ ಆಂದೋಲನ: ಆಂದೋಲನದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ತಹಸೀಲ್ದಾರ್ ವಿಲಿಯಂ, ಪೌತಿ ಖಾತೆ ಆಂದೋಲನದಿಂದ ಜಿಲ್ಲೆಯ ನೂರಾರು ರೈತ ಕುಟುಂಬಗಳಿಗೆ ಸಹಕಾರಿಯಾಗಲಿದೆ. ತಮ್ಮ ಮೃತ ಪಟ್ಟ ಹಿರಿಯರ ಹೆಸರಿನಲ್ಲಿರುವ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಖಾತೆ ಮಾಡಿಕೊಳ್ಳಲು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ವರ್ಷಗಳು ಉರುಳಿದರು ಖಾತೆ ಬದಲಾವಣೆಯಾಗಿರಲಿಲ್ಲ. ಹೀಗಾಗಿ ರೈತರಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು, ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ, ಬೆಳೆ ಪರಿಹಾರ ಮುಂತಾದ ಅನೇಕ ಯೋಜನೆಗಳು, ಪರಿಹಾರ ಕಾರ್ಯದಿಂದ ವಂಚಿತರಾಗಿದ್ದರು.
ಇದೀಗ ಸರ್ಕಾರದ ಆದೇಶದ ಮೇರೆಗೆ ಆಂದೋಲನ ಹಮ್ಮಿಕೊಂಡಿದ್ದು, ಪೌತಿ ಖಾತೆ ಆಗಬೇಕಾಗಿರುವ ರೈತ ಕುಟುಂಬಗಳು ಈ ಅವಕಾಶವನ್ನು ಪಡೆಯಬೇಕು ಎಂದು ಕರೆ ನೀಡಿದ್ದಾರೆ. ಪೌತಿ ಖಾತೆ ಆಂದೋಲನ 2020ರ ಮಾರ್ಚ್ 31ರವರೆಗೆ ನಡೆಯಲಿದೆ. ಆದರೆ ರೈತರು ಕೊನೆ ದಿನಾಂಕದವರೆಗೆ ಕಾಯದೆ. ಪೌತಿ ಖಾತೆ ಮಾಡಿಸಿಕೊಳ್ಳಿ ಎಂದರು.
ರಾಜಸ್ವ ನಿರೀಕ್ಷಕರಾದ ಟಿ.ಎನ್. ಬಸವ ರಾಜು, ಸ್ವಾಮಿ, ಗ್ರಾಮ ಲೆಕ್ಕಿಗರಾದ ರಾಜ ಶೇಖರ್, ಶಿವಣ್ಣ, ಕೃಷ್ಣಪ್ಪ, ಕಾವ್ಯ, ಸುಕನ್ಯ, ಕೃಷಿ ಇಲಾಖೆ ಅಧಿಕಾರಿಗಳಾದ ಪ್ರದೀಪ್, ಪರಶುರಾಮ್, ಪಿಡಿಓ ಸತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.