ಹಳ್ಳ ಮುಚ್ಚಿ ಲೇಔಟ್‌ ನಿರ್ಮಾಣ: ಆರೋಪ

Team Udayavani, Feb 6, 2021, 5:11 PM IST

layout

ರಾಮನಗರ: ಮಳೆ ನೀರು ಹರಿದು ಹೋಗುವ ದೊಡ್ಡ ಹಳ್ಳವನ್ನು ಅಕ್ರಮವಾಗಿ ಮುಚ್ಚಿ ಲೇಔಟ್‌ ನಿರ್ಮಿಸಲಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ಪಾಲಾ ಬೋವಿ ದೊಡ್ಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳ್ಳದಲ್ಲಿ ಹರಿಯುವ ನೀರಿಗೆ ಅಡ್ಡಲಾಗಿ ಚೆಕ್‌ ಡ್ಯಾಂ ನಿರ್ಮಿಸಿದ್ದರಿಂದ ರೈತರ ಬೆಳೆಗೆ ನೀರು ಸಿಗುತ್ತಿತ್ತು. ಕೆಲವರು ಸರ್ಕಾರಿ ಭೂಮಿಯಲ್ಲಿರುವ ಹಳ್ಳಮುಚ್ಚಿ ಲೇಔಟ್‌ ನಿರ್ಮಿಸಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ಕೊಟ್ಟರು ಪ್ರಯೋಜನವಾಗಿಲ್ಲ ಎಂದು ಬೇಸರಿಸಿದ್ದಾರೆ.

ತಾಲೂಕಿನ ಬಿಳಗುಂಬ ಬಳಿಯ ಜಲಸಿದ್ಧೇಶ್ವರ ಬೆಟ್ಟದಿಂದ ಆರಂಭವಾಗುವ ದೊಡ್ಡ ಹಳ್ಳ, ಹಳ್ಳಿಮಾಳ ಗ್ರಾಮದ (ಸರ್ವೆ ನಂ.66-ಹೊಸ ಸಂ.256/2, 256/3) ಮೂಲಕ ಹರಿದು ಅರ್ಕಾವತಿ ನದಿ ಸೇರುತ್ತದೆ. ಪಾಲಾ ಬೋವಿ ದೊಡ್ಡಿಯಲ್ಲಿ ಹಳ್ಳಕ್ಕೆ ಮೂರ್‍ನಾಲ್ಕು ಚೆಕ್‌ ಡ್ಯಾಂ ನಿರ್ಮಿಸಿಕೊಳ್ಳಲಾಗಿದೆ. ಡ್ಯಾಂನಲ್ಲಿ ಶೇಖರಣೆಯಾದ ನೀರು ಬಳಸಿ ಮುಂಗಾರು ಬೆಳೆಯಾಧಾರಿತ ಬೆಳೆ ಬೆಳೆಯುತ್ತಿ ದ್ದೇವೆ. ದನ-ಕರು,ಪ್ರಾಣಿ-ಪಕ್ಷಿಗೆ ಕುಡಿಯಲು ನೀರು ಸಿಗುತ್ತಿತ್ತು ಎಂದು ಗ್ರಾಮಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ವೆಂಕಟಗಿರಿಯಯ್ಯ ಮತ್ತು ಭಾಗ್ಯಮ್ಮ (ಸರ್ವೆ ನಂ.256/2, 256/3) ಗೋಮಾಳ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿದ್ದಾರೆ. ಈ ಭೂಮಿಯ ಖರಾಬಿನಲ್ಲಿ ಸರ್ಕಾರಿ ಹಳ್ಳವಿದೆ. ಹಳ್ಳವನ್ನು ಮುಚ್ಚಿ ಲೇಔಟ್‌ ಮಾಡಿದ್ದಾರೆ. ಪರಿಣಾಮ ಮುಂಗಾರು ಮಳೆ ನೀರು ಸಂಗ್ರಹಣೆಗೆ ತೊಂದರೆಯಾಗಿದೆ ಎಂದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಅಧಿಕಾರಿಗಳ ಶಾಮೀಲು ಆರೋಪ: ಹಳ್ಳ ಮುಚ್ಚಿ ಲೇಔಟ್‌ ನಿರ್ಮಿಸುತ್ತಿರುವ ಅಕ್ರಮದಲ್ಲಿ ಕಂದಾಯ ಅಧಿಕಾರಿಗಳು ಭಾಗಿಯಾಗಿ ದ್ದಾರೆ. ತಮಗಾಗುತ್ತಿರುವ ಅನ್ಯಾಯದ ಬಗ್ಗೆ ಲೇಔಟ್‌ ನಿರ್ಮಿಸುತ್ತಿರುವ ಮಾಲೀಕನನ್ನು ಪ್ರಶ್ನಿಸಿದಾಗ ತಮಗೆ ರಾಜಕೀಯ ಬೆಂಬಲವಿದೆ. ಪ್ರಶ್ನೆ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸ್ಪಂದಿಸದ ಅಧಿಕಾರಿಗಳು: ಗ್ರಾಮಸ್ಥರು ತಮಗಾದ ಸಮಸ್ಯೆ ಬಗ್ಗೆ ಈಗಾಗಲೇ ಹರೀಸಂದ್ರ ಗ್ರಾಪಂ,ತಹಶೀಲ್ದಾರ್‌, ಉಪವಿಭಾ ಗಾಧಿಕಾರಿ, ಜಿಲ್ಲಾಧಿಕಾರಿ, ಭ್ರಷ್ಟಾಚಾರ ನಿಗ್ರಹ ದಳ ಮತ್ತು ಸಂಬಂಧಿಸಿದ ಇಲಾಖೆಗೆ ತಿಂಗಳ ಹಿಂದೆಯೇ ದೂರು ನೀಡಲಾಗಿದೆ. ಈವರೆಗೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಬೇಸರಿಸಿದ್ದಾರೆ.

 ಇದನ್ನೂ ಓದಿ :ಅಧಿಕಾರಿಗಳಿಂದ ಕಲ್ಲು ಕ್ವಾರಿ ಪರಿಶೀಲನೆ

ಜಿಲ್ಲಾಡಳಿತ ತಮ್ಮ ಮನವಿ ಪುರಸ್ಕರಿಸಿ ಹಳ್ಳದ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರಾದ ಶಿವರಮಯ್ಯ, ಲಿಂಗರಾಜು, ಗೌರಮ್ಮ, ಲಿಂಗರಾಜು, ಭವಾನಿ, ನಾಗ, ಚಿಕ್ಕಳಮ್ಮ,ಚಲುವಮ್ಮ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.