ಸ್ಥಳೀಯ ಅಧಿಕಾರಕ್ಕೆ ರಾಜಕೀಯ ಲೆಕ್ಕಾಚಾರ
ಕನಕಪುರ ನಗರಸಭೆ, ಮಾಗಡಿ ಪುರಸಭೆ ಅಧಿಕಾರಕ್ಕಾಗಿ ಲಾಭಿ!
Team Udayavani, Oct 13, 2020, 1:15 PM IST
ರಾಮನಗರ: ಕಳೆದ ವಾರ ಜಿಲ್ಲೆಯ ಮೂರು ನಗರಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಹೊಸದಾಗಿ ಮೀಸಲಾತಿ ನಿಗದಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ 19 ಸೋಂಕು ಕಾರಣ ರಾಜಕೀಯ ಚಟುವಟಿಕೆಗಳು ತಣ್ಣಗಿತ್ತು. ಗ್ರಾಮಪಂಚಾಯ್ತಿಗಳಚುನಾವಣೆಗೆಚುನಾವಣಾಆಯೋಗ ತಯಾರಿ ಆರಂಭಿಸಿದೊಡನೆ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಗರಿಗೆದರಿತ್ತು. ಇದೀಗ ನಗರ ಸಂಸ್ಥೆಗಳ ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೋಷಣೆಯಾಗಿರುವುದರಿಂದ ನಗರ ಪ್ರದೇಶಗಳಲ್ಲೂ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ.
ಎಲ್ಲೆಲ್ಲಿ ಚುನಾವಣೆ?: ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆಗಳಲ್ಲಿ 11 ತಿಂಗಳ ಹಿಂದೆಯೇ ಚುನಾವಣೆಗಳು ನಡೆದಿವೆ. ಆದರೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಯಾಗದ ಕಾರಣದಿಂದ ಪ್ರಜಾಪ್ರತಿ ನಿಧಿಗಳ ಅಧಿಕಾರಕೈಗೆ ಸಿಕ್ಕಿರಲಿಲ್ಲ. ಬಿಡದಿ ಪುರಸಭೆಯಲ್ಲಿ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಿಗೆ ಚುನಾವಣೆಯೇ ನಡೆ ಯದಕಾರಣಇಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದ ಆದೇಶದ ಪ್ರಕಾರ ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸ್ಥಾನ ಪರಿ ಶಿಷ್ಠ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಕನಕಪುರ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಠ ವರ್ಗಕ್ಕೆ ಮೀಸಲಾಗಿದೆ. ರಾಮನಗರ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನಪರಿಶಿಷ್ಟ ಜಾತಿಗೆ ಮೀಸಲುಗೊಳಿಸಿ ಆದೇಶ ಹೊರೆಡಿಸಿದ್ದಾರೆ.
2ನೇ ಅವಧಿಗೆ ಚುನಾವಣೆ ಯಾವಾಗ :
ರಾಮನಗರ: 2016ರಲ್ಲಿ ಗ್ರಾಮ ಪಂಚಾಯ್ತಿಯಾಗಿದ್ದಬಿಡದಿ ಸ್ಥಳೀಯ ಸಂಸ್ಥೆ ಪುರಸಭೆಯಾಗಿ ಬಡ್ತಿ ಪಡೆದುಕೊಂಡಿದೆ. ಅದೇ ವರ್ಷ ಬಿಡದಿ ಪುರಸಭೆ ಅಸ್ತಿತ್ವಕ್ಕೆ ಬಂದಿದೆ. ಮೊದಲ ಅವಧಿ ಪೂರ್ಣಗೊಂಡು 22 ತಿಂಗಳುಕಳೆದು ಹೋಗಿದೆ. ಎರಡನೇ ಅವಧಿಗೆ ಈ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.
ವಿಳಂಬ ಏಕೆ?: ಬಿಡದಿ ಪುರಸಭೆ ಎರಡನೇ ಅವದಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೋಷಣೆಯಾಗಿ ಹೆಲವಾರು ತಿಂಗಳಾಗಿವೆ. ಪ್ರಥಮ ಅವಧಿಯಲ್ಲಿ ಅಧ್ಯಕ್ಷಸ್ಥಾನಪರಿಶಿಷ್ಟಜಾತಿಮಹಿಳೆಗೆಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನದಲ್ಲಿ ವೆಂಕಟೇಶಮ್ಮ ರಾಮಕೃಷ್ಣಯ್ಯ, ಉಪಾಧ್ಯಕ್ಷ ಸ್ಥಾನದಲ್ಲಿ ವೈಶಾಲಿ ಮತ್ತು ಲಕ್ಷ್ಮೀ ದೇವಿ ಅಧಿಕಾರ ಚಲಾಯಿಸಿದ್ದಾರೆ. ಮೊದಲ ಅವಧಿ ಮುಗಿದು 2018ರ ಡಿಸೆಂಬರ್‌ನಲ್ಲಿ ಮೊದಲ ಅವಧಿ ಮುಕ್ತಾಯವಾಗಿದೆ.
ಬಿಡದಿ ಸೇರಿದಂತೆ ರಾಜ್ಯದ ಇನ್ನು ಕೆಲವು ಪುರಸಭೆ, ನಗರಸಭೆಗಳಿಗೆ ಮೀಸಲಾತಿ ನಿಗದಿಪಡಿಸಿತು. ಆದರೆ ಈಮೀಸಲಾತಿಪ್ರಶ್ನಿಸಿ ರಾಜ್ಯದ ಬೇರೆಡೆ ನ್ಯಾಯಾಲಯದ ಮೆಟ್ಟಿಲೇರಿರಿಂದ್ದರಿಂದ ಬಿಡದಿ ಪುರಸಭೆಯ ಮೀಸಲಾತಿ ನೆನೆಗುದಿಗೆ ಬಿತ್ತು. 2019ರ ಡಿಸೆಂಬರ್‌ನಲ್ಲಿ ಸರ್ಕಾರ ಮೀಸಲು ಮರು ನಿಗದಿಯಾಗಿ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಬಿಸಿಎಂ(ಎ) ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು ನಿಗಧಿಯಾಗಿದೆ. ಆದರೆ
ಇನ್ನು ಚುನಾವಣೆ ನಿಗದಿಯಾಗಿಲ್ಲ. ರಾಜ್ಯ ಸರ್ಕಾರ ಕೆಲವು ನಗರಸಭೆಗಳ 9ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಹೊರೆಡಿಸಿದೆ. ಚುನಾವಣಾ ಆಯೋಗಇನ್ನಷ್ಟೇಈ ಸಂಸ್ಥೆಗಳಿಗೆ ಚುನಾವಣೆ ದಿನ ನಿಗದಿ ಮಾಡಬೇಕಿದೆ. ಇದೇ ಸಂದರ್ಭ ದಲ್ಲಿ ಬಿಡದಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಆಡಲಿತದಚುಕ್ಕಾಣಿ ಪುನಃ ಜನಪ್ರತಿನಿಧಿಗಳಿಗೆ ಕೈಗೆ ಬರಲಿದೆ ಎಂದು ನಾಗರಿಕರು ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.