Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯ, ಕುದುರೆ ಸ್ಥಳದಲ್ಲೇ ಸಾವು
Team Udayavani, May 17, 2024, 4:00 PM IST
ರಾಮನಗರ: ಕಾರಿಗೆ ಕುದುರೆ ಅಡ್ಡ ಬಂದ ಪರಿಣಾಮ ವಾಹನಗಳ ಸರಣಿ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರ ಗಾಯಗೊಂಡ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಕುದುರೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿಯ ಮಾಚೋಹಳ್ಳಿ ಗೇಟ್ನಲ್ಲಿ ಘಟನೆ ನಡೆದಿದೆ.
ಕುದುರೆಗೆ ಡಿಕ್ಕಿ ಹೊಡೆದ ಕಾರು ಗ್ಯಾಸ್ ಟ್ಯಾಂಕರ್ ಲಾರಿಗೆ ಗುದ್ದಿದೆ. ಅಷ್ಟೇ ಅಲ್ಲದೆ ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಕೆಎಸ್ಆರ್ಟಿಸಿ ಬಸ್ ಬಂದು ಡಿಕ್ಕಿಯಾಗಿದೆ. ಬಸ್ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.