ಸರ್ಕಾರಿ ಶಾಲೆಯಲ್ಲಿ ಶಿಕ್ಷಣಕ್ಕೆ ಸಂಕಲ್ಪ ಮಾಡಿ

ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರು ಮನವಿ

Team Udayavani, Aug 28, 2019, 1:33 PM IST

rn-tdy-2

ಚನ್ನಪಟ್ಟಣ ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಚನ್ನಪಟ್ಟಣ: ಗ್ರಾಮೀಣ ಭಾಗದ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ಓದಿಸುವ ದೃಢ ಸಂಕಲ್ಪ ಮಾಡಬೇಕು ಎಂದು ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರು ಮನವಿ ಮಾಡಿದರು.

ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕೊರತೆಯಿಂದ ಕರ್ನಾಟಕದ ವಿವಿಧೆಡೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಹಳ್ಳಿಗಾಡಿನಲ್ಲಿಯೂ ಖಾಸಗಿ ಶಾಲೆಗಳ ಭರಾಟೆ ಹೆಚ್ಚಾಗುತ್ತಿದೆ. ಕೆಲವು ಪೋಷಕರು ಉಳ್ಳವರನ್ನು ಅನುಕರಣೆ ಮಾಡಲೋ, ಪ್ರತಿಷ್ಟೆಗಾಗಿಯೋ ಅಥವಾ ಖಾಸಗಿ ಶಾಲೆಗಳ ಅಬ್ಬರದ ಪ್ರಚಾರಕ್ಕೆ ಮರುಳಾಗಿಯೋ ತಮ್ಮ ಮಕ್ಕಳನ್ನು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಾರೆ. ಆನಂತರ ತಮ್ಮ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ಭರಿಸಲು ಇನ್ನಿಲ್ಲದ ಪರದಾಟ ಮಾಡುವುದನ್ನು ಕಾಣುತ್ತಿದ್ದೇವೆ. ಯಾವ ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳು ಕಡಿಮೆಯಲ್ಲ. ವಿದ್ಯಾರ್ಥಿಗಳ ಅಭಿವೃದ್ಧಿಗೆ ಬೇಕಾದ ಎಲ್ಲಾ ಅನುಕೂಲಗಳು ಇಂದು ಸರ್ಕಾರಿ ಶಾಲೆಗಳಲ್ಲಿ ಇವೆ ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.

ಗ್ರಾಮೀಣರಲ್ಲಿ ತಪ್ಪು ಕಲ್ಪನೆ ಬೇಡ: ನಿವೃತ್ತ ಸರ್ಕಾರಿ ಅಧಿಕಾರಿ ದೊಡ್ಡಕೆಂಪೇಗೌಡ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಓದಿದ ಮಕ್ಕಳು ದೊಡ್ಡ ವ್ಯಕ್ತಿಗಳಾಗುತ್ತಾರೆ. ಉಳಿದವರು ಹಿಂದುಳಿಯುತ್ತಾರೆ ಎಂಬ ತಪ್ಪು ಕಲ್ಪನೆ ನಮ್ಮ ಗ್ರಾಮೀಣ ಭಾಗದಲ್ಲಿಯೂ ಇಂದು ಹೆಚ್ಚಾಗುತ್ತಿದೆ. ಇದರ ಪರಿಣಾಮ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ವಾಸ್ತವ ಸ್ಥಿತಿಯೇ ಬೇರೆಯೇ ಇದೆ. ನಾವು ಸರ್ಕಾರಿ ಶಾಲೆಗಳಲ್ಲಿಯೇ ಓದಿ, ಹುದ್ದೆಗಳನ್ನು ಪಡೆದುಕೊಂಡು ನಿಮ್ಮ ಕಣ್ಣ ಮುಂದೆಯೇ ಉತ್ತಮ ಉದಾಹರಣೆಗಳಾಗಿ ನಿಂತಿದ್ದೇವೆ ಎಂಬುದನ್ನು ನಮ್ಮ ಗ್ರಾಮೀಣ ಪೋಷಕರು ಮನಗಾಣಬೇಕು ಎಂದು ತಿಳಿಸಿದರು.

ಪರಿಶ್ರಮದಿಂದ ಶೈಕ್ಷಣಿಕ ಸಾಧನೆ ಸಾಧ್ಯ: ಉಪನ್ಯಾಸಕ ಎನ್‌.ಟಿ.ರಾಮಚಂದ್ರ ಮಾತನಾಡಿ, ಕಳೆದ ಸಾಲಿನ ಎಸ್‌ಎಸ್‌ಎಲ್ಸಿಯಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಶ್ರದ್ಧೆ, ಸರ್ಕಾರಿ ಶಾಲಾ ಶಿಕ್ಷಕರ ಅರ್ಪಣಾಭಾವ, ಅಧಿಕಾರಿ ವರ್ಗದವರ ಸಹಕಾರ, ಪೋಷಕರ ಪ್ರೋತ್ಸಾಹ ಹಾಗೂ ಇಡೀ ಜಿಲ್ಲಾಡಳಿತದ ಪರಿಶ್ರಮದ ಫಲವಾಗಿ ರಾಮನಗರ ಜಿಲ್ಲೆ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.

ಈ ವೇಳೆ ಎಂಪಿಸಿಎಸ್‌ ಅಧ್ಯಕ್ಷ ಚಂದ್ರು, ಕಾರ್ಯದರ್ಶಿ ನಾಗರಾಜು, ಎಸ್‌ಡಿಎಂಸಿ ಅಧ್ಯಕ್ಷ ನಿಂಗಾಚಾರಿ ಹಾಗೂ ಸದಸ್ಯರು, ಕ್ಷೇತ್ರ ಸಮನ್ವಯಾಧಿಕಾರಿ ಕುಸುಮ ಲತಾ, ಸಿಆರ್‌ಪಿ ಕೆ.ವೆಂಕಟೇಶ್‌, ಮುಖ್ಯ ಶಿಕ್ಷಕಿ ಪಾರ್ವತಮ್ಮ, ಸಹ ಶಿಕ್ಷಕಿ ಲಕ್ಷೀದೇವಮ್ಮ, ಗ್ರಾಪಂ ಸದಸ್ಯ ಎನ್‌.ಆರ್‌. ರವಿ, ಮಾಜಿ ಸದಸ್ಯ ಎನ್‌.ಎಲ್.ಶಿವಕುಮಾರ್‌, ಮುಖಂಡ ಪೊಲೀಸ್‌ ಕೃಷ್ಣೇಗೌಡ, ಹಾರೋಕೊಪ್ಪ ಕ್ಲಸ್ಟರ್‌ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.