ಮಾವು ಮೇಳಕ್ಕೆ ಚಾಲನೆ

Team Udayavani, May 11, 2019, 11:42 AM IST

r-1

ರಾಮನಗರ: ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳನ್ನು ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಮತ್ತು ದಲ್ಲಾಳಿಗಳ ಹಾವಳಿ ಯನ್ನು ತಪ್ಪಿಸಿ ಬೆಳೆಗಾರರಿಗೆ ನ್ಯಾಯ ಬೆಲೆ ದೊರಕಿಸಿ ಕೊಡುವ ಉದ್ದೇಶದಿಂದ ಮಾವಿನ ಮೇಳವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಜಾನಪದ ಲೋಕದ ಮುಂಭಾಗ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಜಿಲ್ಲಾ ಪಂಚಾಯತ್‌ ತೋಟಗಾರಿಕೆ ಇಲಾಖೆ ಏರ್ಪಡಿಸಿರುವ ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಕರಸಿರಿ’ ಬ್ರಾಂಡ್‌ ಮೂಲಕ ಮಾರಾಟ: ಜಿಲ್ಲೆಯ ಪ್ರಮುಖವಾದ ಬೆಳೆ ಮಾವು. ಸುಮಾರು 23,350 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಪ್ರಮುಖವಾಗಿ ಬಾದಾಮಿ, ರಸಪುರಿ, ಸೇಂದೂರು, ತೋತಾ ಪುರಿ, ಮಲ್ಲಿಕಾ ಮುಂತಾದ ಥ‌ಳಿಗಳಿದ್ದು, ವಾರ್ಷಿಕ ಸುಮಾರು 2 ಲಕ್ಷ ಮೆಟ್ರಿಕ್‌ ಟನ್‌ ಮಾವನ್ನು ಉತ್ಪಾದಿಸಲಾಗುತ್ತದೆ. ರಾಜ್ಯದಲ್ಲಿ ಬೆಳೆಯುವ ಮಾವಿಗೆ ಕರಸಿರಿ ಎಂಬ ಬ್ರಾಂಡ್‌ ನಿಗದಿ ಮಾಡಲಾಗಿದೆ. ಇದೇ ಬ್ರಾಂಡ್‌ನಿಂದ ರಾಜ್ಯದ ಮಾವಿನ ಹಣ್ಣುಗಳು ದೇಶ, ವಿದೇಶಗಳಲ್ಲಿ ಮಾರಾಟವಾಗಲಿದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ. ರಾಜೇಂದ್ರ ಮಾತನಾಡಿ, ಮಾವು ಬೆಳೆಗಾರರಿಗೆ ಗ್ರಾಹಕರ ನೇರ ಮಾರುಕಟ್ಟೆ ಒದಗಿಸುವು ಉದ್ದೇಶ ದಿಂದಲೇ ಮೇಳವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆಯ ಈ ಪ್ರಯತ್ನ ಶ್ಲಾಘನೀಯ. ಬೆಳೆಗಾರರು ಸಹ ಗ್ರಾಹಕರಿಗೆ ಉತ್ಕೃಷ್ಟ ಮಾವಿನ ಹಣ್ಣುಗಳನ್ನು ತಲುಪಿಸ ಬೇಕು ಎಂದು ಸಲಹೆ ನೀಡಿದರು.

ಜನನಿಬಿಡ ಸ್ಥಳದಲ್ಲಿ ಮೇಳ ಆಯೋಜಿಸಲು ಸಲಹೆ: ಇದೇ ವೇಳೆ ರೈತ ಮುಖಂಡ ಲಕ್ಷ್ಮಣಸ್ವಾಮಿ, ಅಧಿಕಾರಿಗಳೊಂದಿಗೆ ಮಾತನಾಡಿ, ಒಂದೇ ಕಡೆ 20 ಮಳಿಗೆಗಳನ್ನು ಹಾಕುವುದಕ್ಕಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಳಿಗೆಗಳನ್ನು ಹಾಕುವುದಕ್ಕೆ ಯೋಜನೆ ರೂಪಿಸಿ ಎಂದು ಸಲಹೆ ನೀಡಿದರು.ಜಿಪಂ ಸಿಇಒ ಮುಲ್ಲೈ ಮುಹಿಲನ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ್‌, ಜಿಲ್ಲಾ ಮಟ್ಟದ ಅಧಿಕಾರಿಗಳು, ತೋಟಗಾರಿಕೆ ಸಂಘ, ಮಾವು ಬೆಳೆಗಾರರ ಸಂಘದ ಪದಾಧಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.