ಮೇಕೆದಾಟು: ತಮಿಳುನಾಡು ಸರ್ಕಾರ ಅಡ್ಡಿಗೆ ವಿರೋಧ

Team Udayavani, Jul 6, 2021, 11:46 AM IST

ಮೇಕೆದಾಟು: ತಮಿಳುನಾಡು ಸರ್ಕಾರ ಅಡ್ಡಿಗೆ ವಿರೋಧ

ಚನ್ನಪಟ್ಟಣ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸಬಾರದು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಈ ವಿಚಾರದಲ್ಲಿ ಪ್ರಬುದ್ಧತೆ ಮೆರೆಯಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಆಗ್ರಹಿಸಿದರು.

ಪಟ್ಟಣದ ಗುರುವಪ್ಪ ವೃತ್ತದಲ್ಲಿ ಮೇಕೆದಾಟು ಯೋಜನೆಗೆ ನಮ್ಮ ಮನವಿ ಎಂಬ ವಿನೂತನ ಪ್ರತಿಭಟನೆ ನಡೆಸಿ ಮಾತನಾಡಿ, ತಮಿಳುನಾಡು ಮತ್ತು ನಮ್ಮ ರಾಜ್ಯದ ನಡುವೆ ಈ ಹಿಂದಿನಿಂದಲೂ ನೀರು ಹಾಗೂ ಗಡಿವಿವಾದಕ್ಕೆ ಸಂಬಂಧಿಸಿದಂತೆ ವ್ಯಾಜ್ಯಗಳು ನಡೆಯುತ್ತಿದೆ. ಜಯಲಲಿತಾ ಮತ್ತು ಕರುಣಾನಿಧಿಯ ತನಕ ಎರಡು ರಾಜ್ಯಗಳ ನಡುವೆ ಬಾಂಧವ್ಯವೇ ವೃದ್ಧಿಯಾಗಲಿಲ್ಲ. ಮುಂದಾದರೂ ಎರಡು ರಾಜ್ಯಗಳನಡುವಿನ ದ್ವೇಷಮಯ ವಾತಾವರಣ ತಿಳಿಯಾಗ ಬೇಕಿದೆ. ಇದಕ್ಕೆ ಮೇಕೆದಾಟು ಯೋಜನೆ ನಾಂದಿಯಾಗಬೇಕಿದೆ ಎಂದು ಹೇಳಿದರು.

ಕಾವೇರಿ ಹೋರಾಟದಿಂದ ನಷ್ಟ: ಕಾವೇರಿ ಹೋರಾಟದಿಂದ ಉಂಟಾದ ನಷ್ಟ, ಸಾವುನೋವುಗಳು ನಮ್ಮ ಕಣ್ಣ ಮುಂದಿವೆ. ಯುವ ಉತ್ಸಾಹಿ ನಾಯಕರಾಗಿರುವತಮಿಳುನಾಡಿನ ಸಿಎಂ ಸ್ಟಾಲಿನ್‌ ಮೇಕೆದಾಟು ಯೋಜನೆಗೆ ಅಡ್ಡಿಯುಂಟು ಮಾಡುವ ಕೆಲಸಕ್ಕೆ ಕೈಹಾಕಬಾ ರದು. ಎರಡು ರಾಜ್ಯಗಳ ನಡುವೆ ಮುಂದಿನ ದಿನಗಳಲ್ಲಾದರೂ, ಭಾಂದವ್ಯ ವೃದ್ಧಿಯಾಗಲು ಅವರು ಶ್ರಮಿಸಬೇಕು ಎಂದು ಮನವಿ ಮಾಡಿದರು.

2 ರಾಜ್ಯಕ್ಕೆ ಉಪಯೋಗ: ಮೇಕೆದಾಟು ಯೋಜನೆ ಆರಂಭವಾದರೆ ಇದು ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಉಪಯೋಗವಾಗುವುದಿಲ್ಲ. ತಮಿಳುನಾಡಿಗೂ ಇದು ಸಾಕಷ್ಟು ಅನುಕೂಲವಾಗಲಿದೆ. ಕೇವಲ ರಾಜಕೀಯ ಕಾರಣಕ್ಕಾಗಿ ಬಹುಪಯೋಗಿ ಈ ಯೋಜನೆಗೆ ಯಾವುದೇ ಅಡ್ಡಿ ಮಾಡಬಾರದು. ಈ ಯೋಜನೆಯನ್ನು ಶೀಘ್ರವಾಗಿ ಆರಂಭಿಸಬೇಕು ಎಂದು ಆಗ್ರಹಿಸಿದರು. ಯೋಜನೆಅನುಷ್ಠಾನವಾಗಲಿ:ಯೋಜನೆ ಶೀಘ್ರವಾಗಿಅನುಷ್ಠಾನವಾಗಲೇಬೇಕು. ಈ ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಅವಶ್ಯಕತೆಯಿದೆ. ಈ ಕಾರಣಕ್ಕಾಗಿ ನಮ್ಮ ರಾಜ್ಯದ ಮುತ್ಸದ್ದಿ ರಾಜಕಾರಣಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಎಲ್ಲಾಪಕ್ಷಗಳ ನಾಯಕರು ಹಾಗೂ ಸಂಘಟನೆಗಳ ಮುಖಂಡರು ಹಾಗೂ ರೈತರ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿ ಮಾಡಬೇಕು. ಡಿಸಿಎಂ ಡಾ. ಅಶ್ವಥ್‌ನಾರಾಯಣ್‌, ಎಚ್‌ಡಿಕೆ ಹಾಗೂ ಡಿಕೆಶಿ ಈ ವಿಚಾರವಾಗಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಬೇವೂರು ಯೋಗೇಶ್‌ ಗೌಡ, ಮುಖಂಡರಾದ ಎಂಟಿಆರ್‌ ತಿಮ್ಮರಾಜು, ಮುದಗೆರೆ ಜಯಕುಮಾರ್‌(ಜೆಕೆ), ಸುಣ್ಣಘಟ್ಟ ಅಶ್ವಥ್‌, ಬಾಬ್‌ಜಾನ್‌, ರಮೇಶ್‌, ಪುನೀತ್‌, ಸುರೇಶ್‌ (ರ್‍ಯಾಂಬೋ) ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.