ಕಾರ್ಯಕರ್ತರಿಗೆ ಎಂದೂ ಅಧಿಕಾರ ನೀಡದ ಕುಮಾರಸ್ವಾಮಿ

ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ವಾಗ್ದಾಳಿ

Team Udayavani, Feb 26, 2021, 5:58 PM IST

Minister CP Yogeshwar

ಚನ್ನಪಟ್ಟಣ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ನೀಡುತ್ತಿರುವ ಹೊಡೆತ ಪಾಠ ಕಲಿಸಿದೆ. ಇದರಿಂದ ತಮ್ಮ ಬುಡವನ್ನು ಭದ್ರಗೊಳಿಸಿಕೊಳ್ಳಲು ಜನರ ಮುಂದೆ ಬಂದು ನಿಲ್ಲುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ವಾಗ್ಧಾಳಿ ನಡೆಸಿದರು.

ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಆರ್‌.ಎಂ.ಮಲವೇಗೌಡ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ತಾಲೂಕಿಗೆ ಯಾವುದೇ ಕೊಡುಗೆ ನೀಡಿಲ್ಲ. ಬಂಗಾರದ ಮನುಷ್ಯನ ತರ ರಾಮನಗರ ಜಿಲ್ಲೆಯಲ್ಲಿ ಬೇವು ಬಿತ್ತಿ ಮಾವು ಬೆಳೆದೆ ಎಂದು ಹೇಳಿಕೊಳ್ಳುತ್ತಿರುವ ಅವರು, ಈ ಜಿಲ್ಲೆಯಲ್ಲಿ ಮಾಡಿರುವ ಅಭಿವೃದ್ಧಿ ಏನೂ ನನಗೆ ಕಾಣಿಸುತ್ತಿಲ್ಲ ಎಂದು ಲೇವಡಿ ಮಾಡಿದರು.

ಅಧಿಕಾರ ನೀಡಲಿಲ್ಲ: ಪಕ್ಷ ಎಂದು ಓಡಾಡುವ ಯಾವುದೇ ಮುಖಂಡರಿಗೆ ಒಂದೇ ಒಂದು ಅಧಿಕಾರ ನೀಡಲಿಲ್ಲ. ಈ ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿದ್ದಾಗಲೂ ಯಾವುದೇ ಮುಖಂಡನಿಗೆ ಅಧಿಕಾರ ನೀಡಲಿಲ್ಲ. ತಾಲೂಕಿನ ಒಬ್ಬ ಜೆಡಿಎಸ್‌ ಮುಖಂಡನೂ ವಿಧಾನಸೌಧದ ಮೆಟ್ಟಿಲು ಹತ್ತಲು ಬಿಡಲಿಲ್ಲ. ಎಚ್‌ಡಿಕೆ ಹಿಂದೆ ಹೋಗುವವರಿಗೆ ಅರಿವಾಗಬೇಕು ಎಂದರು.

ಅಕ್ರಮವಾಗಿ ನಿವೇಶನ ನಿರ್ಮಾಣ: ನಗರದಲ್ಲಿ ರವಿನ್ಯೂ ಭೂಮಿಯಲ್ಲಿ ಅಕ್ರಮವಾಗಿ ನಿವೇಶನ ನಿರ್ಮಿಸಿದ್ದು, ಪ್ರಾಧಿಕಾರದ ಯಾವುದೇ ನಿಯಮವನ್ನು ಪಾಲಿಸದ ಕಾರಣ ಇಡೀ ಚನ್ನಪಟ್ಟಣ ನಗರದಲ್ಲಿ ಹೊಸ ಬಡಾವಣೆಗಳು ಅವ್ಯವಸ್ಥೆಯ ಆಗರವಾಗಿವೆ. ಎಲ್ಲಿಂದಲೋ ಬಂದು ಇಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮ ಮಾಡುತ್ತಿರುವ ಒಂದಿಬ್ಬರು ವ್ಯಕ್ತಿಗಳು ಇಡೀ ನಗರಕ್ಕೆ ಶಾಪವಾಗಿ ಪರಿಣಮಿಸಿದ್ದಾರೆ ಎಂದರು.

ಅಭಿವೃದ್ಧಿ ಕೆಲಸ ಕೈಗೊಳ್ಳಿ: ಯೋಜನಾ ಪ್ರಾಧಿಕಾರ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳ  ಬೇಕಿದ್ದು, ಭವಿಷ್ಯದ ದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡು ನಗರದ ಅಭಿವೃದ್ಧಿಗೆ ಸಮರ್ಪಕ ಯೋಜನೆಯನ್ನು ರೂಪಿಸುವ ಹೊಣೆಗಾರಿಕೆ ಈ ಪ್ರಾಧಿಕಾರಕ್ಕೆ ಇದೆ. ಯಾವುದೇ ಮರ್ಜಿಗೆ ಒಳಗಾಗದೆ ಕಾನೂನು ಪಾಲಿಸುವ ಕೆಲಸವನ್ನು ನೂತನ ಅಧ್ಯಕ್ಷರು ಮತ್ತು ಸದಸ್ಯರು ಮಾಡಿ ನಿಮಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು  ಭರವಸೆ ನೀಡಿದರು.

ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್‌.ಎಂ. ಮಲವೇಗೌಡ, ಸದಸ್ಯ ಸಿ.ವಿ.ಮಂಜುನಾಥ್‌,ಬಸವರಾಜು, ಚಕ್ಕಲೂರು ಚೌಡಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ತಾಪಂ ಅಧ್ಯಕ್ಷ ಹರೂರು ರಾಜಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ.ಜಯರಾಮು, ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್‌, ರಾಮನಗರ ಪ್ರಾಧಿಕಾರದ ಅಧ್ಯಕ್ಷ ಮುರುಳಿ, ಕನಕಪುರ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್‌ ಇದ್ದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.