ರೇಷ್ಮೆ ಗೂಡಿನ ಧಾರಣೆ ಕುಸಿಯಲು ಬಿಡಲ್ಲ: ಸಚಿವ ಡಾ.ನಾರಾಯಣಗೌಡ
Team Udayavani, Apr 26, 2022, 2:50 PM IST
ರಾಮನಗರ: ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಡಾ.ನಾರಾಯಣಗೌಡ ಸೋಮವಾರ ನಗರದ ಇಲ್ಲಿನ ರೇಷ್ಮೆ ಮಾರುಕಟ್ಟೆಗೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ತಮ್ಮ ಭೇಟಿಯ ವೇಳೆ ಸಚಿವರು ಮಾರುಕಟ್ಟೆಯಲ್ಲಿದ್ದ ರೇಷ್ಮೆ ಬೆಳೆಗಾರರು, ರೀಲರ್‌ಗಳ ಬಳಿ ವಿವಿಧ ವಿಚಾರಗಳಲ್ಲಿ ಮಾಹಿತಿ ಸಂಗ್ರಹಿಸಿದರು. ಹರಾಜು ಮೊತ್ತದ ಪಾವತಿ, ಗೂಡಿನ ತೂದ ವ್ಯವಸ್ಥೆ ಇತ್ಯಾದಿ ಬಗ್ಗೆ ಸ್ವತಃ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರೇಷ್ಮೆ ಬೆಳೆಗಾರರು ಮತ್ತು ರೀಲರ್‌ಗಳ ಬಳಿಯೂ ಇದೇ ವಿಚಾರದಲ್ಲಿ ಮಾತನಾಡಿದರು. ಸ್ವತಃ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಾವು ಸಹ ರೈತರ ಮಗನಾಗಿದ್ದು, ತಾವು ಚಿಕ್ಕವನಿದ್ದಾಗ, ತಮ್ಮ ಕುಟುಂಬ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾಗಿ ತಿಳಿಸಿದರು.
ರೇಷ್ಮೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಅರಿವಿದೆ. ಸಮಸ್ಯೆಗಳ ಕಾರಣ ರೈತರಿಗೆ ಅನ್ಯಾಯವಾಗಲು ತಾವು ಬಿಡುವುದಿಲ್ಲ ಎಂದರು.
ಕಠಿಣ ಕ್ರಮದ ಎಚ್ಚರಿಕೆ: ಹರಾಜು ಮೊತ್ತ ಪಾವತಿಗೆ ವಿಳಂಬವಾಗುತ್ತಿರುವ ಬಗ್ಗೆ ರೈತರು ದೂರಿದರು. ರೇಷ್ಮೆ ಗೂಡು ಮಾರಾಟ ಮಾಡಿ ಗಂಟೆಗಟ್ಟಲೆ ಕಾಯಬೇಕಾಗಿದೆ. ಈ ವಿಚಾರದಲ್ಲಿ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು. ರೇಷ್ಮೆ ಗೂಡು ತೂಕ ಹಾಕಿದ ಕೂಡಲೇ ಹರಾಜು ಮೊತ್ತ ಪಾವತಿಯಾಗಬೇಕು ಎಂದು ಸೂಚನೆ ಕೊಟ್ಟರು. ಅಧಿಕಾರಿಗಳು ಮತ್ತು ರೀಲರ್‌ಗಳ ನಡುವೆ ಹೊಂದಾಣಿಕೆ ಕಡಿಮೆ ಇರುವ ಕಾರಣ ಹರಾಜು ಮೊತ್ತ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂಬ ದೂರು ಬಂದರೆ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದರು.
ರೇಷ್ಮೆ ಬೆಲೆ ಕುಸಿಯಲು ಅವಕಾಶ ಕೊಡಲ್ಲ: ರೇಷ್ಮೆ ಗೂಡಿಗೆ ಸದ್ಯ ಉತ್ತಮ ಬೆಲೆ ಸಿಗುತ್ತಿದೆ. ದಾಖಲೆ ಮಟ್ಟದಲ್ಲಿ ಬೆಲೆ ಸಿಗುತ್ತಿದೆ. ರೇಷ್ಮೆ ಬೆಳೆಗಾರರು ಖುಷಿಯಾಗಿದ್ದಾರೆ. ಇದು ಹೀಗೆ ಮುಂದುವರೆಯ ಬೇಕು. ಒಂದು ಕೆ.ಜಿ. ರೇಷ್ಮೆಗೂಡು 600 ರೂ.ಗಿಂತ ಕಡಿಮೆಯಾಗಲು ಬಿಡುವುದಿಲ್ಲ ಎಂದು ರೇಷ್ಮೆ ಬೆಳೆಗಾರರಿಗೆ ಸಚಿವ ಡಾ.ನಾರಾಯಣಗೌಡ ಅವರು ಅಭಯ ನೀಡಿದರು.
ಹೈಟೆಕ್ ರೇಷ್ಮೆ ಮಾರುಕಟ್ಟೆ: ಶೀಘ್ರದಲ್ಲೇ ಟೆಂಡರ್ ಆಹ್ವಾನ: ರಾಮನಗರ ಮತ್ತು ಚನ್ನಪಟ್ಟಣ ಗಡಿಯಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯ ನಿರ್ಮಾಣಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಬೇಕಾಗಿದೆ. ಇನ್ನು ಎರಡು ತಿಂಗಳಲ್ಲಿ ಭೂಮಿ ಪೂಜೆ ನಡೆಯುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿ ದರು. ಈ ವೇಳೆ ಗೂಡು ಮಾರುಕಟ್ಟೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.