ಎಲೆಂದರಲ್ಲಿ ವಿಷಯುಕ್ತ ತಾಜ್ಯ ವಿಲೇವಾರಿ


Team Udayavani, Dec 23, 2021, 1:12 PM IST

waste mis management

ಕನಕಪುರ: ಕೈಗಾರಿಕೆಗಳಲ್ಲಿ ಉತ್ಪತ್ತಿಯಾಗುವ ವಿಷಯುಕ್ತ ತ್ಯಾಜ್ಯವನ್ನು ನಿಯಮ ಬಾಹಿರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ವಿಲೇವಾರಿ ಮಾಡಿರುವುದು ರಸ್ತೆ ಜಕ್ಕಸಂದ್ರ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಬೃಹದಾ ಕಾರ ವಾಗಿ ಬೆಳೆದಂತೆಲ್ಲಾ ಸುತ್ತಮುತ್ತಲ ಗ್ರಾಮಗಳ ಜನರಿಗೆ ಅಷ್ಟೆ ಆತಂಕವೂ ಎದುರಾಗುತ್ತಿದೆ.

ಏಷ್ಯಖಂಡ ದಲ್ಲೇ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಪಡೆದಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕೈಗಾರಿಕೆಗಳು ವಿಷಯುಕ್ತ ತ್ಯಾಜ್ಯ ವನ್ನು ನಿಯಮ ಬಾಹಿರವಾಗಿ ಕದ್ದುಮುಚ್ಚಿ ಎಲ್ಲೆಂದರಲ್ಲಿ ವಿಲೇ ವಾರಿ ಮಾಡುತ್ತಿದ್ದಾರೆ. ಇದರಿಂದ ಹಾರೋಹಳ್ಳಿ ಸುತ್ತಮುತ್ತಲ ವಾತಾವರಣ ಹದಗೆಟ್ಟಿದ್ದು ಕೈಗಾರಿಕೆಗಳ ಸ್ಥಾಪನೆ ವರವೋ? ಶಾಪವೋ? ಎಂಬ ಅನುಮಾನ ಸ್ಥಳೀಯ ಜನರನ್ನು ಕಾಡುತ್ತಿದೆ.

ವಾತಾವರಣ ಮಲಿನ: ತಾಲೂಕಿನ ಮರಳವಾಡಿಯ ಚೀಲೂರು ಗ್ರಾಪಂ ವ್ಯಾಪ್ತಿಯ ರಸ್ತೆ ಜಕ್ಕಸಂದ್ರ ಬಳಿಯ ಕತಾ ಫಾರಂ ಹೌಸ್‌ ಬಳಿ ಕಿಡಿಗೇಡಿಗಳು ವೈದ್ಯಕೀಯ ತ್ಯಾಜ್ಯ ಹಾಗೂ ರಾಸಾಯನಿಕಯುಕ್ತ ತ್ಯಾಜ್ಯ ವಿಲೇವಾರಿ ಮಾಡಿದ್ದಾರೆ. ಇದರಿಂದ ಸುತ್ತ ಮುತ್ತಲು ಗಬ್ಬುವಾಸನೆ ಬೀರುತ್ತಿದ್ದು ವಾತಾವರಣ ಕಲುಷಿತವಾಗುತ್ತಿದೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಲಿ ಜಾಗಗಳಲ್ಲಿ ಔಷಧಿಗಳಲ್ಲಿ ಬಳಸುವ ತ್ಯಾಜ್ಯ ತಂದು ಸುರಿದಿರುವ ಅನೇಕ ಉದಾಹರಣೆಗಳಿವೆ. ಇಂತಹ ಕೃತ್ಯಗಳಿಗೆ ಸಂಬಂಧಪಟ್ಟ ಪರಿಸರ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕುವುದರಲ್ಲಿ ವಿಫ‌ಲವಾಗಿದ್ದಾರೆ ಎಂಬುದು ಸ್ಥಳೀಯರ ದೂರು.

ಕಾರ್ಖಾನೆಗಳ ಕರ್ಮಕಾಂಡ: ಯಾವುದೇ ಕಾರ್ಖಾನೆ ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂಬ ನಿಯಮ ಇದೆ. ಕೈಗಾರಿಕೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕೆಲವು ಏಜೆನ್ಸಿಗಳು ಕಾರ್ಯ ನಿರ್ವಹಿಸುತ್ತಿವೆ. ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕೈಗಾರಿಕೆ ಗಳು ತ್ಯಾಜ್ಯವನ್ನು ವೈಜ್ಞಾನಿಕ ವಿಲೇವಾರಿ ಮಾಡುವಂತೆ ಖಾಸಗಿ ಏಜೆನ್ಸಿಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ.

ಇನ್ನು ಕೆಲವು ಕೈಗಾರಿಗಳು ಹಣ ಉಳಿಸಲು ಯಾವುದೇ ಒಪ್ಪಂದ ಮಾಡಿಕೊಳ್ಳದೆ ಕದ್ದುಮುಚ್ಚಿ ರಾತ್ರೋರಾತ್ರಿ ಎಲ್ಲೆಂದರಲ್ಲಿ ವಿಷಯುಕ್ತ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಒಂದೆಡೆಯಾದರೆ ಮತ್ತೂಂದೆಡೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವುದಾಗಿ ಕೈಗಾರಿಕೆ ಗಳಿಂದ ಹಣ ಪಡೆದ ಕೆಲವು ಖಾಸಗಿ ಏಜೆನ್ಸಿಗಳು ವೈಜ್ಞಾ ನಿಕ ವಿಲೇವಾರಿಗೆ ತಗಲುವ ವೆಚ್ಚವನ್ನು ಉಳಿಸಿಕೊಳ್ಳಲು ಸಾರ್ವಜನಿಕ ಸ್ಥಳಗಳಲ್ಲಿ ವಿಷಯುಕ್ತ ತ್ಯಾಜ್ಯವನ್ನು ಸುರಿದು ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂಬ ಆಕ್ರೋಶ ಸ್ಥಳೀಯರದ್ದು.

ಮೇಲುಸ್ತುವಾರಿ ಯಾರಿಗೆ? ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆಯುವ ನಿಯಮ ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣಿಡಲು ಕೈಗಾರಿಕಾ ಇಲಾಖೆಯು ವಾಚರ್‌ಗಳನ್ನು ನೇಮಕ ಮಾಡಿದೆಯಂತೆ.ಆದರೆ ಈವರೆಗೂ ಇಂತಹ ಕೃತ್ಯಗಳನ್ನು ಪತ್ತೆ ಹಚ್ಚಿ ಸಂಬಂಧ ಪಟ್ಟ ಅಧಿಕಾರಿಗಳ ಗಮ ನಕ್ಕೆ ತಂದು ಕಡಿವಾಣ ಹಾಕುವ ಉದಾಹರಣೆಗಳಿಲ್ಲ. ವಾಚರ್‌ಗ ಳಾಗಿ ಎಷ್ಟು ಮತ್ತು ಯಾರು ಕಾರ್ಯನಿರ್ವಹಿಸುತ್ತಿದ್ದಾರೆ ಎಂಬು ದರ ಮಾಹಿತಿ ಜನರಿಗಿಲ್ಲ. ವಾಚರ್‌ಗಳು ಹಣದಾಸೆಗೆ ಕೈಗಾರಿಕೆಗಳ ಜೊತೆ ಶಾಮಿಲಾಗಿರ ಬಹುದು ಎಂಬ ಶಂಕೆ ಜನರಲ್ಲಿದೆ.

ಮಲಿನಗೊಂಡ ಅಂತರ್ಜಲ: ಹಾರೋಹಳ್ಳಿಯಲ್ಲಿ ಕೈಗಾರಿಕೆಗಳು ತಲೆ ಎತ್ತಿದ ನಂತರ ಕೈಗಾರಿಕಾ ಪ್ರದೇಶದ ಸುತ್ತಮುತ್ತಲ ಜಕ್ಕಸಂದ್ರ, ಚೀಲೂರು, ಕಾಳೇಗೌಡನ ದೊಡ್ಡಿ, ಹೆಬ್ಬಿದಿರುಮೆಟ್ಟಿಲು.ದೇವರ ಕಗ್ಗಲಹಳ್ಳಿ, ಬನ್ನಿಕುಪ್ಪೆ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಕೆರೆಗಳಿಗೆ ವಿಷಯುಕ್ತ ತ್ಯಾಜ್ಯಸೇರಿ ಅಂತರ್ಜಲ ಮಲಿನಗೊಂಡಿದೆ.

ಕೊಳವೆ ಬಾವಿಗಳ ನೀರು ಕುಡಿಯ ಲು ಯೋಗ್ಯ ವಲ್ಲ ಎಂದು ವಿದೇಶಿ ಖಾಸಗಿ ಸಂಸ್ಥೆ ಯೊಂದು ವರದಿ ಬಹಿರಂಗಪಡಿಸಿದೆ. ಇದೇ ನೀರನ್ನು ಬಳಸುವ ಜನರು ಆನೇಕ ಕಾಯಿಲೆಗಳಿಗೆ ತುತ್ತಾ ಗುತ್ತಿದ್ದಾರೆ. ಅಲ್ಲದೆ ಸುತ್ತ ಮುತ್ತಲ ರೈತರ ಕೃಷಿ ಬೆಳೆಗಳ ಇಳುವರಿ ಕುಂಠಿತಗೊಂಡು ಕೆರೆ ಕಟ್ಟೆಗಳಲಿದ್ದ ಜಲಚರಗಳು ಪ್ರಾಣಬಿಟ್ಟಿವೆ.

ಕೆರೆ ನೀರು ಕುಡಿದ ಪ್ರಾಣಿ ಪಕ್ಷಿಗಳು ಹಸು, ಕುರಿ, ಮೇಕೆ, ಸಾಕು ಪ್ರಾಣಿಗಳು ಆನಾ ರೋಗ್ಯಕ್ಕೂ ತುತ್ತಾಗಿವೆ. ಇದರಲ್ಲಿ ಕೆಲವು ಮೃತಪಟ್ಟಿರುವ ಉದಾಹರಣೆಗಳು ಇವೆ. ಆನೇಕ ರೈತರು ನಷ್ಟಕ್ಕೀಡಾಗಿದ್ದಾರೆ.

ಇಷ್ಟೆಲ್ಲ ಅನಾಹುತ ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿಯಮ ಉಲ್ಲಂ ಸಿ ವಿಷಯುಕ್ತ ತ್ಯಾಜ್ಯ ಸಾರ್ವಜನಿಕ ವಾಗಿ ವಿಲೇವಾರಿ ಮಾಡಿ ಮೊಂಡುತನ ಪ್ರದರ್ಶನ ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಪರವಾಗಿ ರದ್ದು ಮಾಡಿ ಬಿಸಿ ಮುಟ್ಟಿಸುವ ಕೆಲಸಕ್ಕೆ ಮಾತ್ರ ಮುಂದಾಗದಿ ರುವುದು ಮಾತ್ರ ವಿಪರ್ಯಾಸ.

ಮಾಲಿನ್ಯ ನಿಯಂತ್ರಣ ಮಂಡಳಿ ಪಾರದರ್ಶಕವಾಗಿರಬೇಕು

ಜಲಕಾಯ್ದೆ ಸೆಕ್ಷನ್‌ 6ರ ಪ್ರಕಾರ ಮಾಲಿನ್ಯ ಮಂಡಳಿ ಅಧ್ಯಕ್ಷರಾಗುವವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮಂಡಳಿಯೊಂದಿಗೆ ಸಂಬಂಧ ಹೊಂದಿರಬಾರದು ಎಂದು ಹೇಳಲಾಗಿದೆ. ಜೊತೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವವರಿಗೂ ಮಾಲಿನ್ಯ ಉಂಟು ಮಾಡುವ ಕಂಪನಿಗಳಿಗೂ ಸಂಬಂಧವಿರಬಾರದೆಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೇ ಇತ್ತೀಚಿಗೆ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವವರು ಮಾಲಿನ್ಯವುಂಟು ಮಾಡುವ ಹಲವು ಕಂಪನಿಗಳ ಸಲಹೆಗಾರರಾಗಿದ್ದರು. ಹಾಗೂ ಸ್ವತಃ ಹಲವು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ನೇಮಕಕ್ಕೂ ಮುನ್ನಾ 2 ತಿಂಗಳ ಹಿಂದಷ್ಟೇ ರಾಜೀನಾಮೆ ಸಲ್ಲಿಸಿದ್ದರು. ನೇಮಕಾತಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತು.

ಕಾನೂನು ಕ್ರಮಕ್ಕೆ ಆಗ್ರಹ

ಕೈಗಾರಿಕೆಗಳಲ್ಲಿ ಉತ್ಪತ್ತಿಯಾಗುವ ವಿಷಯುಕ್ತ ತ್ಯಾಜ್ಯವನ್ನು ಕೆಲವು ಕೈಗಾರಿಕೆಗಳು ನಿಯಮ ಬಾಹಿರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕದ್ದುಮುಚ್ಚಿ ವಿಲೇವಾರಿ ಮಾಡಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಚೀಲೂರು ಗ್ರಾಪಂ ವ್ಯಾಪ್ತಿಯ ರಸ್ತೆ ಜಕ್ಕಸಂದ್ರ ಬಳಿ ಇರುವ ಕತಾ ಫಾರಂಹೌಸ್‌ ಬಳಿ ಕಿಡಿಗೇಡಿಗಳು ರಾಸಾಯನಿಕಯುಕ್ತ ತ್ಯಾಜ್ಯಗಳನ್ನು ಸುರಿದು ಹೋಗಿದ್ದು ಸುತ್ತ ಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಚೀಲೂರು ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.

ಟಾಪ್ ನ್ಯೂಸ್

Temple rights belong to Tantris, not the government: Kerala Minister

Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ

Abujhmad: Four Naxalites killed in gunfight; one policeman martyred

Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

Isro grows cowpea seeds sprout in space in just four days

ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temple rights belong to Tantris, not the government: Kerala Minister

Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ

Abujhmad: Four Naxalites killed in gunfight; one policeman martyred

Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

Isro grows cowpea seeds sprout in space in just four days

ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.