ಇಂದು ರಾಮನಗರಕ್ಕೆ ಶಾಸಕ ಗಣೇಶ್‌


Team Udayavani, Feb 21, 2019, 10:23 AM IST

ram-1.jpg

ರಾಮನಗರ: ತಾಲೂಕಿನ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಜ.19ರ ರಾತ್ರಿ ವಿಜಯನಗರ ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್‌ ಅವರನ್ನು ಜಿಲ್ಲಾ ಪೊಲೀಸರು ಗುಜರಾತ್‌ನ ಸೋಮನಾಥದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಬಂಧಿಸಿದ್ದು, ರಾತ್ರಿ ರಾಮನಗರಕ್ಕೆ ಬರುವ ಸಾಧ್ಯತೆ ಎಂದು ಎಸ್ಪಿ ಬಿ.ರಮೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪೊಲೀಸರ ತಂಡಕ್ಕೆ ಸಿಕ್ಕಿ ಬಿದ್ದಿರುವ ಆರೋಪಿ ಶಾಸಕ ಗಣೇಶ್‌ರನ್ನು ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಸಿವಿಲ್‌ ಏವಿಯೇಷನ್‌ ಅನುಮತಿ ಸಿಕ್ಕರೆ ವಿಮಾನದಲ್ಲಿ ಅಥವಾ ರಸ್ತೆ ಮೂಲಕವೇ ಕರೆತರುವ ಸಾಧ್ಯತೆಗಳಿವೆ. ಗಣೇಶ್‌ ಅವರನ್ನು 24 ಗಂಟೆಗೂ ಮುನ್ನ ರಾಮನಗರದ ಸಿಜಿಎಂ ನ್ಯಾಯಾಲಯದಲ್ಲಿ ಹಾಜರು ಪಡಿಸಬೇಕಾಗಿದೆ. ಕರೆತರುವಲ್ಲಿ ವಿಳಂಬವಾದರೆ ಅಲ್ಲಿನ ಸ್ಥಳೀಯ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಿ ಕರೆತರಲಾಗುತ್ತದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ ಅವರು, ಬಂಧನದ ಕಾರ್ಯ ವಿಧಾನಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಪೊಲೀಸರಿಗೆ ಗೊತ್ತಾಗಿದ್ದು ಯಾವಾಗ?: ಮೂರು ದಿನಗಳ ಹಿಂದೆ ಆರೋಪಿ ಶಾಸಕ ಗಣೇಶ್‌ ಅವರು ಗುಜುರಾತ್‌ನ ಸೋಮನಾಥದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ 2 ಸಿಪಿಐಗಳು 2 ಎಸ್‌ಐ ಹಾಗೂ 12 ಮಂದಿ ಸಿಬ್ಬಂದಿ ಗುಜರಾತ್‌ಗೆ ತೆರಳಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆಗೆ ಸೋಮನಾಥ ದೇವಾಲಯಕ್ಕೆ ಕಾರಿನಲ್ಲಿ ಹೋಗುವ ವೇಳೆ ಅಲ್ಲಿದ್ದ ಸುಖಸಾಗರ ಹೋಟೆಲ್‌ನಲ್ಲಿ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ. 

ಗಣೇಶ್‌ ಜೊತೆ ಮೂವರು ಇದ್ದರು: ಶಾಸಕ ಗಣೇಶ್‌ ಜೊತೆಯಲ್ಲಿ ಅವರ ಸ್ನೇಹಿತರು ಎನ್ನಲಾದ ಕರ್ನಾಟದವರು ಇಬ್ಬರು ಹಾಗೂ ಸೋಮನಾಥದ ಸ್ಥಳೀಯ ರೊಬ್ಬರು ಚಾಲಕನ ಜೊತೆಯಲ್ಲಿದ್ದರು. ಅವರನ್ನೂ ರಾಮನಗರಕ್ಕೆ ಕರೆತರಲಾಗುತ್ತಿದೆ. ಆ ಮೂವರ ವಿವರಗಳು ತಮಗೂ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಗಣೇಶ್‌ ವಿಚಾರಣೆ ವೇಳೆ ತನಿಖಾಧಿಕಾರಿಗೆ ಬೇಕಾದ ಎಲ್ಲಾ ಮಾಹಿತಿಗಳು ಲಭ್ಯವಾದರೆ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದರು. ಸದ್ಯ ಗಣೇಶ್‌ ಪೊಲೀಸರೊಂದಿಗೆ ಸಹಕರಿಸುತ್ತಿದ್ದಾರೆ ಎಂದು ವಿವರಿಸಿದರು.

ಮುಂಬೈ ಪೊಲೀಸರು ಸಹಕರಿಸಲಿಲ್ಲ: ಗಣೇಶ್‌ ಮುಂಬೈನಲ್ಲಿ ಇದ್ದ ವೇಳೆ ಬಂಧಿಸುವ ಸಾಧ್ಯತೆ ಇತ್ತಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂಬೈನಲ್ಲಿ ಅಲ್ಲಿನ ಸ್ಥಳೀಯ ಪೊಲೀಸರ ಸಹಕಾರ ದೊರೆಯಲಿಲ್ಲ ಎಂದರು. 

ರಾಜಕೀಯ ಒತ್ತಡವೂ ಜಿಲ್ಲಾ ಪೊಲೀಸರ ಮೇಲೆ ಇರಲಿಲ್ಲ. ಆದರೆ, ಶಾಸಕ ಗಣೇಶ್‌ ಬೇರೆ ಬೇರೆ ಕಡೆ ಇದ್ದ ಬಗ್ಗೆ ಮಾಹಿತಿ ಲಭ್ಯವಾಗುತ್ತಿತ್ತು. ಮಹಾರಾಷ್ಟ್ರ, ತಮಿಳುನಾಡು, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಿಗೆ ನಮ್ಮ ತಂಡಗಳು ಭೇಟಿ ನೀಡಿವೆ ಎಂದರು.

ಶಾಸಕ ಗಣೇಶ್‌ ಅವರು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಆಂಟಿಸಿಪೇಟರಿ ಬೇಲ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರು ಅದನ್ನು ವಾಪಸ್ಸು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಬಿಡದಿ ಪೊಲೀಸ್‌ ಠಾಣೆ ರಾಮನಗರ ಸಿಜಿಎಂ ನ್ಯಾಯಾಲಯದ ವ್ಯಾಪ್ತಿಗೆ ಬರುವುದರಿಂದ ಬಂಧಿತ ಗಣೇಶ್‌ರನ್ನು ಇಲ್ಲೆ ಹಾಜರು ಪಡಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಸಕನ ಬಂಧನದ ಹಿನ್ನೆಲೆ ಏನು? ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು ವಾಸ್ತವ್ಯವಿದ್ದ ವೇಳೆ ಜ.19ರ ರಾತ್ರಿ ಶಾಸಕ ಆನಂದ್‌ಸಿಂಗ್‌ ಮತ್ತು ಶಾಸಕ ಗಣೇಶ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಶಾಸಕ ಗಣೇಶ್‌ ಆನಂದ್‌ ಸಿಂಗ್‌ರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾಸಕ ಆನಂದ್‌ ಸಿಂಗ್‌, ಬೆಂಗಳೂರಿನ ಅಪಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಜ.21ರಂದು ಅಪಲೋ ಆಸ್ಪತ್ರೆಯಲ್ಲೇ ಪೊಲೀಸರಿಗೆ ಅವರು ಹೇಳಿಕೆ ನೀಡಿದ್ದರು. ಹೇಳಿಕೆ ಪಡೆದ ಬಿಡದಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಕಲಂ 323, 324, 307, 504, 506, 504, 506 ಅನ್ವಯ ಎಫ್ಐಆರ್‌ ದಾಖಲಿಸಿದ್ದರು. ದೂರು ದಾಖಲಾದ ಬೆನ್ನಲ್ಲೆ ಆರೋಪಿ ಶಾಸಕ ಕಂಪ್ಲಿ ಗಣೇಶ್‌ ತಲೆ ಮೆರೆಸಿಕೊಂಡಿದ್ದರು. ಜಿಲ್ಲಾ ಪೊಲೀಸರು 4 ತಂಡಗಳನ್ನು ರಚಿಸಿಕೊಂಡು ಆರೋಪಿ ಶಾಸಕರಿಗಾಗಿ ಹುಡುಕಾಟ ನಡೆಸಿದ್ದರು. ತಮಿಳುನಾಡು, ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪಗಳು, ಮುಂಬೈ ಮುಂತಾದ ಸ್ಥಳಗಳಲ್ಲಿ ವಿವಿಧ ಮಾಹಿತಿಗಳನ್ನಾಧರಿಸಿ ಹುಡುಕಾಟ ನಡೆಸಿದ್ದರು. ಆದರೆ, ಆರೋಪಿ ಶಾಸಕರು ಲಭ್ಯವಾಗಿರಲಿಲ್ಲ.  

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.