ಬಾಲಕನ ಚಿಕಿತ್ಸಾ ವೆಚ್ಚ ಭರಿಸಿದ ನಗರ ಸಭೆ
Team Udayavani, Apr 2, 2022, 12:38 PM IST
ಕನಕಪುರ: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಚಿಕಿತ್ಸೆಗೆ ನಗರ ಸಭೆ ವತಿಯಿಂದ ಸಹಾಯ ಧನವನ್ನು ನಗರ ಸಭೆ ಅಧ್ಯಕ್ಷ ವೆಂಕಟೇಶ್ ವಿತರಿಸಿದರು.
ನಗರದ ಬಾಣಂತ ಮಾರಮ್ಮ ಬಡಾವಣೆಯ ಸುದರ್ಶನ್ ಎಂಬ ಏಳು ವರ್ಷದ ಬಾಲಕನಿಗೆ ಕಳೆದ 26ರಂದು ನಾಲ್ಕೈದು ಬೀದಿ ನಾಯಿಗಳು ದಾಳಿ ಮಾಡಿ ಬಾಲಕನ ಮೊಣಕಾಲು ತೊಡೆಯ ಭಾಗದಲ್ಲಿ ಕಚ್ಚಿ ಗಂಭಿರವಾಗಿ ಗಾಯಗೊಳಿಸಿದ್ದವು. ಗಾಯಗೊಂಡ ಬಾಲಕನನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಬೀದಿ ನಾಯಿ ಸಂತತಿಗೆ ನಗರ ಸಭೆ ಅಧಿಕಾರಿಗಳು ಕಡಿವಾಣ ಹಾಕದಿರುವುದೇ ಈ ಘಟನೆಗೆ ಕಾರಣ ಎಂದು ನಗರದ ಸಾರ್ವಜನಿಕರು ನಗರ ಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಅದೇ ವಾರ್ಡಿನ ನಗರ ಸಭಾ ಸದಸ್ಯ ಸ್ಟುಡಿಯೋ ಚಂದ್ರು ಬೀದಿ ನಾಯಿ ಸಂತತಿಗೆ ಕಡಿವಾಣ ಹಾಕುವಂತೆ ನಗರ ಸಭೆ ಅಧ್ಯಕ್ಷರು ಮತ್ತು ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದರು. ಗಾಯಗೊಂಡಿರುವ ಬಾಲಕನ ಪೋಷಕರದ್ದು ಬಡ ಕುಟುಂಬ. ಬಾಲಕನ ಚಿಕಿತ್ಸಾ ವೆಚ್ಚವನ್ನು ನಗರ ಸಭೆಯಿಂದ ಭರಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಬಾಲಕನ ಚಿಕಿತ್ಸಾ ವೆಚ್ಚ ಭರಿಸಲು ನಗರ ಸಭೆ ಅಧ್ಯಕ್ಷರು ಮತ್ತು ಅಧಿಕಾರಿಗಳು ತೀರ್ಮಾನಿಸಿ ಬೀದಿ ನಾಯಿ ದಾಳಿಗೆ ಒಳಗಾಗಿದ್ದ ಸುದರ್ಶನ್ ಪೋಷಕರಿಗೆ ನಗರ ಸಭೆ ಅಧ್ಯಕ್ಷ ವೆಂಕಟೇಶ್ 10 ಸಾವಿರ ರೂ. ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ರಾಮ ದುರ್ಗಯ್ಯ, ಪೌರಾಯುಕ್ತೆ ಶುಭಾ, ಸದಸ್ಯ ಸ್ಟೂಡಿಯೋ ಚಂದ್ರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್ ಇರಾನಿವರೆಗೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.