ಮೋದಿ ಸುಳ್ಳಿನ ಸೌಧ ಕಟ್ಟಿದ್ದಾರೆ: ಸಂಸದ
Team Udayavani, Jun 1, 2020, 7:58 AM IST
ಚನ್ನಪಟ್ಟಣ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಸುಳ್ಳುಗಾರ. ಸುಸ್ಥಿರ ದೇಶ ಕಟ್ಟುವ ಬದಲು ಸುಳ್ಳಿನ ಸೌಧ ಕಟ್ಟಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ತಾಲೂಕಿನ ತಿಟ್ಟಮಾನಹಳ್ಳಿಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದರು. ಕೋವಿಡ್ 19 ಬರುವ ಮುನ್ನವೂ ದೇಶ ದುರಾಡಳಿತದಿಂದ ಆರ್ಥಿಕವಾಗಿ ಪಾತಾಳಕ್ಕೆ ಕುಸಿದಿತ್ತು.
ಈಗ ಕೋವಿಡ್ 19ದಿಂದಲೇ ಆಗಿದೆ ಎಂದು ಮಹಾಸುಳ್ಳು ಹೇಳಿದ್ದಾರೆ. ಬಡವರ ಖಾತೆಗೆ 15 ಲಕ್ಷ ರೂ., ಹಾಕುತ್ತೇನೆ ಎಂಬುದರಿಂದ ಆರಂಭವಾದ ಸುಳ್ಳು, ಇದೀಗ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ವರೆಗೂ ಬಂದು ನಿಂತಿದೆ ಎಂದು ಛೇಡಿಸಿದರು. ಜೂ.7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಲಿದ್ದು, ಅಂದು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಹೆಚ್ಚಿನ ಜನರು ಸೇರುವಂತೆ ನೋಡಿಕೊಳ್ಳಬೇಕು.
ಕೋವಿಡ್ 19 ಸಂದರ್ಭದಲ್ಲಿಯೂಅಭೂತ ಪೂರ್ವ ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು. ಎಲ್ಲರೂ ಮುಂದೆ ಕಾಂಗ್ರೆಸ್ ಸರ್ಕಾರ ತರಲು ಕಣ ಬದರಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಗಂಗಾಧರ್, ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಆರ್. ನವ್ಯಶ್ರೀ ಮಾತನಾಡಿದರು.
ಕೆಪಿಸಿಸಿ ವೀಕ್ಷಕರಾದ ಅನಿಲ್‌ಕುಮಾರ್, ಡಾ.ರಾಜು, ಅಲ್ಪಸಂಖ್ಯಾತ ಮುಖಂಡ ವಾಸಿಲ್ ಆಲಿಖಾನ್, ಮಹಿಳಾ ಘಟಕದ ಕಾವೇರಮ್ಮ ಮಾತನಾಡಿದರು. ಜಿ.ಪಂ. ಸದಸ್ಯರಾದ ಪ್ರಸನ್ನ, ವೀಣಾಕುಮಾರಿ, ಸುಗುಣ, ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು, ಮುಖಂಡರಾದ ಶರತ್‌ಚಂದ್ರ, ಹನುಮಂತಯ್ಯ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.