ನೂತನ ಸರ್ಕಾರಿ ಆಸ್ಪತ್ರೆ ಕಾಮಗಾರಿ ಕಳಪೆ

ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ತಾಪಂ ಸದಸ್ಯರು ಆಗ್ರಹ

Team Udayavani, Jun 14, 2019, 10:29 AM IST

rn-tdy-2..

ಮಾಗಡಿ ತಾಪಂ ಸಾಮಾನ್ಯ ಸಭೆಯಲ್ಲಿ ತಾಪಂ ಅಧ್ಯಕ್ಷ ಕೆ.ಎಚ್.ಶಿವರಾಜ್‌ ಅಭಿವೃದ್ಧಿ ಕುರಿತು ಚರ್ಚಿಸಿದರು.

ಮಾಗಡಿ: ಕುದೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಆಸ್ಪತ್ರೆ ಸುಣ್ಣ ಬಣ್ಣ ಕಾಣುವ ಮುನ್ನವೇ ಸೋರಲಾರಂಭಿಸಿದೆ. ಕಳಪ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಸದಸ್ಯರು ಎಂಜಿನಿಯರ್‌ ಅವರನ್ನು ಆಗ್ರಹಿಸಿದರು.

ತಾಪಂನಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯರಾದ ಸುರೇಶ್‌, ಧನಂಜಯ ನಾಯಕ್‌ ಹಾಗೂ ನಾರಾಯಣಪ್ಪ ಅವರು ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಗಳು ಬೇಜವಾ ಬ್ದಾರಿಯಿಂದ ನಡೆದು ಕೊಂಡಿದ್ದಾರೆ ಎಂದು ಆರೋಪಿಸಿದರು. ಕಾಲಕಾಲಕ್ಕೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರೆ ಗುಣಮಟ್ಟದ ಕಟ್ಟಡದ ಕಾಮಗಾರಿ ನಡೆಯುತ್ತಿತ್ತು ಎಂದು ತಿಳಿಸಿದರು.

ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಹಲವು ವರ್ಷದಿಂದ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಮರೂರು ಆಸ್ಪತ್ರೆಯಲ್ಲಿದ್ದ ವೈದ್ಯೆ ಚಂದ್ರಕಲಾ ಅವರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹಾಗೂ ಕೆಲಸದ ಒತ್ತಡದಿಂದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ಅಸಾಧ್ಯವಾಗಿದೆ. ಮರೂರು ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಪಂಗೆ ಪತ್ರ ಬರೆಯಲಾಗುವುದು ಎಂದು ತಾಪಂ ಅಧ್ಯಕ್ಷ ಕೆ.ಎಚ್.ಶಿವರಾಜ್‌ ತಿಳಿಸಿದರು.

ಆರೋಗ್ಯ ಕೇಂದ್ರ ಸ್ಥಾಪನೆಗೆ ಭೂಮಿ ಅಗತ್ಯ: ಆರೋಗ್ಯ ಇಲಾಖೆಯ ಹಿರಿಯ ಶಿಕ್ಷಣಾಧಿಕಾರಿ ರಂಗನಾಥ್‌ ಮಾತನಾಡಿ, ಸರ್ಕಾರ ಪಿಎಚ್ಸಿ ಮಂಜೂರು ಮಾಡಿದೆ. ಮಾಡಬಾಳ್‌, ಶ್ರೀಗಿರಿಪುರ, ಚಿಕ್ಕ ಕಲ್ಯಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 2 ಎಕರೆ ಭೂಮಿ ಬೇಕಿದೆ. ಗ್ರಾಪಂ ಭೂಮಿ ಮಂಜೂರು ಮಾಡಿದರೆ, ಪಿಎಚ್ಸಿ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ 2 ಲಕ್ಷ ಠೇವಣಿ ಇಡಬೇಕಿದೆ. ಕ್ಷಯರೋಗಿಗಳ ಔಷಧೋಪಚಾರಕ್ಕೆ 500 ರೂ. ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದರು.

ಅನ್‌ಲೈನ್‌ ಮೂಲಕ ಬಿತ್ತನೆ ಬೀಜ ವಿತರಣೆ: ಕೃಷಿ ಸಹಾಯಕ ನಿರ್ದೇಶಕ ಅಶೋಕ್‌ ಮಾತನಾಡಿ, ತಾಲೂಕಿನಲ್ಲಿ ರಾಗಿ ಪ್ರಮುಖ ಬೆಳೆಯಾಗಿದೆ. ಇನ್ನು ಮುಂದೆ ಅನ್‌ಲೈನ್‌ನಲ್ಲಿ ದಾಖಲೆ ನೋಂದಾಯಿಸಿ, ಜೈ ಕಿಸಾನ್‌ ಯೋಜನೆಯಡಿ ಪ್ರತಿ ಎಕರೆಗೆ 5 ಕೆ.ಜಿಯಂತೆ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು. ಇದಕ್ಕಾಗಿ ಎಂ.ಆರ್‌-1 ಮತ್ತು ಎಂ.ಆರ್‌-6 ಒಟ್ಟಾರೆ 252 ಕ್ವಿಂಟಲ್ ರಾಗಿ ದಾಸ್ತಾನು ಮಾಡಲಾಗಿದೆ. ಈಗಾಗಲೇ 25 ಕ್ವಿಂಟಲ್ ಸಹಾಯಧನದಲ್ಲಿ ವಿತರಣೆ ಮಾಡಿದೆ. ಪ್ರಸ್ತುತ 226 ಕ್ವಿಂಟಲ್ ದಾಸ್ತಾನು ಇದೆ. ತೊಗರಿ 500 ಕ್ವಿಂಟಲ್, ಅಲಸಂಧೆ 200 ಕ್ವಿಂಟಲ್, ಅವರೆ 50 ಕ್ವಿಂಟಲ್ ದಾಸ್ತಾನು ಮಾಡಿದ್ದು, ಬಹುತೇಕ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ: ತಾಲೂಕಿನ ರೈತರು ಸಿರಿಧಾನ್ಯ ಬೆಳೆಯಲು ಸರ್ಕಾರ ಪ್ರೋತ್ಸಾಹಿಸಿದೆ. ಹೆಕ್ಟರ್‌ಗೆ 10 ಸಾವಿರ ರೂ. ಸಹಾಯಧನ ನೀಡುತ್ತಿದೆ. ನೈಸರ್ಗಿಕ ಕೃಷಿಗೆ ಶ್ರೀಗಿರಿಪುರ ಆಯ್ಕೆ ಮಾಡಲಾಗಿದೆ. 41 ಸಾವಿರ ರೈತರ ಭೂಮಿಗೆ ಸಂಬಂಧಿಸಿದ್ದಂತೆ ಮಣ್ಣಿನ ಆರೋಗ್ಯ ಕಾರ್ಡ್‌ ವಿತರಣೆ ಮಾಡಿದ್ದೇವೆ. ಮಣ್ಣಿಗೆ ಅಗತ್ಯ ಲಘುಪೋಷಕಾಂಶ ನೀಡಲಾಗುತ್ತಿದೆ ಎಂದರು.

ತಾಪಂನಿಂದ ತೆಂಗಿನ ಸಸಿ ವಿತರಣೆಗೆ ಕ್ರಮ: ತಾಪಂನಿಂದ 5 ಸಾವಿರ ತೆಂಗಿನ ಸಸಿ ಬೆಳಸಲಾಗಿದೆ. ಸಭೆಯಲ್ಲಿ ಅನಮೋದನೆ ಯಾಗಿದ್ದು, ಶೀಘ್ರದಲ್ಲಿಯೇ ಅರ್ಹ ರೈತರಿಗೆ ವಿತರಣೆ ಮಾಡಲಾಗುವುದು ಎಂದು ತಾಪಂ ಅಧ್ಯಕ್ಷ ಕೆ.ಎಚ್.ಶಿವರಾಜ್‌ ತಿಳಿಸಿದರು.

ತೆಂಗಿನ ಸಸಿಗೆ ಬೇಡಿಕೆ ಹೆಚ್ಚಾಗಿದೆ. ಆದರೆ, ಸಸಿಗಳು ಖಾಲಿಯಾಗಿವೆ. ತರಕಾರಿ ಬೀಜ ಉಚಿತವಾಗಿ ರೈತರಿಗೆ ನೀಡಲಾಗುತ್ತಿದೆ ಎಂದು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ನಾಗರಾಜು ತಿಳಿಸಿದರು.

ಪಶುಭಾಗ್ಯ ಫ‌ಲಾನುಭವಿಗಳಿಗೆ ಅನ್ಯಾಯ: ಕಳೆದ 3 ವರ್ಷಗಳ ಹಿಂದೆ ಪಶುಭಾಗ್ಯ ಯೋಜನೆಯಡಿ ಮಂಜೂರಾ ಗಿದ್ದ ಸಹಾಯ ಧನವನ್ನು ಫ‌ಲಾನುಭವಿಗ ಳಿಗೆ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಸದಸ್ಯ ನಾರಾಯಣಪ್ಪ, ಹನುಮಂತರಾಯಪ್ಪ ಆರೋಪಿಸಿದರು.

ಪಶು ಇಲಾಖೆ ಸಹಾಯಕ ನಿರ್ದೇಶಕ ಜರ್ನಾಧನ್‌ ಪ್ರತಿಕ್ರಿಯಿಸಿ, ಕೆಲವೊಂದು ಬ್ಯಾಂಕ್‌ಗಳ ಅಧಿಕಾರಿಗಳು ಸಾಲ ಮಂಜೂರು ಮಾಡಿಲ್ಲ. ಬಡ್ಡಿ ಹಣವನ್ನು ವಾಪಸ್ಸು ಮಾಡಿಲ್ಲ, ಇದರಿಂದ ಫ‌ಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ತಾಪಂ ಉಪಾಧ್ಯಕ್ಷೆ ಅಂಬಿಕಾ, ಸದಸ್ಯರಾದ ಶಂಕರ್‌, ಹನುಮಯ್ಯ, ನರಸಿಂಹಮೂರ್ತಿ, ವೆಂಕಟೇಶ್‌, ಸುಗುಣ, ಸುಧಾ, ಗಂಗಮ್ಮ, ಸುಮಾ ರಮೇಶ್‌, ರತ್ನಮ್ಮ, ಇಒ ಚಂದ್ರ, ಆಶಾ, ತಿಮ್ಮರಾಯಪ್ಪ, ಮಂಗಳಾ ಹಾಜರಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.