ಎಲ್ಲ ಪಕ್ಷದಲ್ಲೂ ಕುಟುಂಬ ರಾಜಕಾರಣ ಇದೆ

Team Udayavani, Dec 25, 2022, 3:15 PM IST

tdy-10

ರಾಮನಗರ: ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜ ಕಾರಣ ಇದೆ. ಬಿಜೆಪಿ, ಕಾಂಗ್ರೆಸ್‌ ಇದಕ್ಕೆ ಹೊರತಾಗಿಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿರುಗೇಟು ನೀಡಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಟೆಕ್ವಾಂಡೋ ಸಂಸ್ಥೆ ಹಮ್ಮಿಕೊಂಡಿದ್ದ ಮ್ಯಾಟ್‌ ಹಾಗೂ ಕರಾಟೆ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಯಾವ ಪಕ್ಷದಲ್ಲಿ ವಂಶಪಾರಂಪರ್ಯತೆ ಇಲ್ಲ ಹೇಳಿ, ಎಲ್ಲರೂ ಅದೇ ಹಾದಿಯಲ್ಲಿದ್ದಾರೆ ಎಂದು ಹೇಳಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಮಾಜಿ ಡೀಸಿಎಂ ಕೆ.ಎಸ್‌.ಈಶ್ವರಪ್ಪ ಅವರ ಮಕ್ಕಳಿದ್ದಾರೆ. ಹಾಗೆಯೇ ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮನೆ ಯಲ್ಲೇ ನಾಲ್ಕು ಮಂದಿ ಸಂಸದ – ಶಾಸಕರಾಗಿದ್ದಾರೆ. ಹೀಗಾಗಿ ರಾಜಕೀಯದಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆಯೇ ಬರುವುದಿಲ್ಲ. ಕೆಲವರು ಜೆಡಿಎಸ್‌ನಲ್ಲಿ ಮಾತ್ರ ಕುಟುಂಬ ರಾಜಕಾರಣ ಎನ್ನುವಂತೆ ಚರ್ಚೆ ಮಾಡ್ತಾರೆ. ಅದರ ಬಗ್ಗೆ ಆತ್ಮಾವಲೋಕನ ಮಾಡಿ ಕೊಳ್ಳಲಿ ಎಂದು ತಿಳಿಸಿದರು.

ಬೇರೆಯವರಿಗೂ ಟಿಕೆಟ್‌ ನೀಡಿದ್ದೆವು: ರಾಮನಗರ ಜಿಲ್ಲೆಯಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರದ್ದು ವಂಶಪಾರಂಪರ್ಯ ರಾಜಕಾರಣ ಎಂಬ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ನಾವು ರಾಮನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಗಿ ಕೆ. ರಾಜುಗೆ ಟಿಕೆಟ್‌ ನೀಡಿದ್ದೆವು. ಆ ವ್ಯಕ್ತಿ ಕೃತಜ್ಞತೆ ಮರೆತು ಕಾಂಗ್ರೆಸ್‌ ಸೇರಿಕೊಂಡರು. ಚನ್ನಪಟ್ಟಣದಲ್ಲಿ ಈ ಹಿಂದೆ ಸಿಂ.ಲಿಂ.ನಾಗರಾಜು ಅವರಿಗೆ ಟಿಕೆಟ್‌ ನೀಡಿದ್ದೆವು. ಬಳಿಕ ಕಾರ್ಯಕರ್ತರು, ಪಕ್ಷದ ಮುಖಂಡರ ಒತ್ತಡಕ್ಕೆ ಮಣಿದು ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರದ ಅಭ್ಯರ್ಥಿ ಆಗಬೇಕಾಯಿತು ಎಂದು ಸಮರ್ಥಿಸಿಕೊಂಡರು.

ವಿರೋಧ ಪಕ್ಷಗಳಿಗೆ ಭಯ: ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್‌ ಪಂಚರತ್ನ ರಥಯಾತ್ರೆಯ ಸಮಾವೇಶ ದಿಂದ ಯೋಗೇಶ್ವರ್‌ ಹತಾಶರಾಗಿದ್ದಾರೆ. ಹಣ ಕೊಟ್ಟರೂ ರಾಷ್ಟ್ರೀಯ ಪಕ್ಷಗಳ ಕಾರ್ಯಕ್ರಮಗಳಿಗೆ ಜನ ಸೇರುತ್ತಿಲ್ಲ. ಆದರೆ, ಅದೇ ಜನ ಮಧ್ಯರಾತ್ರಿವರೆಗೂ ನಿಂತು ಕುಮಾರಸ್ವಾಮಿಗೆ ಸ್ವಾಗತ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ಕೊಟ್ಟು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಇದನ್ನೆಲ್ಲ ಕಂಡು ವಿರೋಧ ಪಕ್ಷದವರಿಗೆ ಭಯ ಹುಟ್ಟಿದೆ ಎಂದು ವಿವರಿಸಿದರು.

130 ಕೆರೆ ತುಂಬಿವೆ: ಮಾಜಿ ಸಚಿವ ಸಿ.ಪಿ.ಯೋಗೇ ಶ್ವರ್‌ 18 ವರ್ಷ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ದ್ದರೂ ಕ್ಷೇತ್ರದ ರಸ್ತೆಗಳು ಅಭಿವೃದ್ಧಿ ಆಗಿರಲಿಲ್ಲ. ಈಗ ಕುಮಾರಸ್ವಾಮಿ ಕ್ಷೇತ್ರದ ಶಾಸಕರಾದ ಬಳಿಕ, ಪ್ರತಿ ರಸ್ತೆ ಅಚ್ಚುಕಟ್ಟಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಕುಮಾರಸ್ವಾಮಿ ಕಾಲದಲ್ಲಿ 130 ಕೆರೆ ತುಂಬಿವೆ ಎಂದು ತಿಳಿಸಿದರು.

ಸರಿಯಾದ ಮಾಹಿತಿ ಇಲ್ಲ: ಮಾಜಿ ಸಿಎಂ ಎಚ್‌ಡಿಕೆ ಚನ್ನಪಟ್ಟಣಕ್ಕೆ ಒಂದೂ ವರೆ ಸಾವಿರ ಕೋಟಿ ರೂ. ಅನುದಾನ ತರುವ ಮೂಲಕ ಕ್ಷೇತ್ರಾಭಿವೃದ್ಧಿಗೆ ಶ್ರಮಿಸಿದ್ದಾರೆ. ಇದು ಯೋಗೇಶ್ವರ್‌ ಅವರಿಗೆ ಸರಿಯಾದ ಮಾಹಿ ತಿಯೇ ಇಲ್ಲ ಎಂದು ಲೇವಡಿ ಮಾಡಿದ ನಿಖೀಲ್‌, ರಾಜ್ಯದಲ್ಲಿ ಬಿಜೆಪಿಯವರು ಸಹ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಕೋವಿಡ್‌ ವಿಚಾರವಾಗಿ ಸರ್ಕಾರ ಏನೇ ನಿಯಮ ಮಾಡಿದರೂ ಅದು ಎಲ್ಲರಿಗೂ ಅನ್ವಯಿಸಬೇಕು ಎಂದು ಹೇಳಿದರು

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.