ಚೀಲೂರು ಗ್ರಾಮದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ

Team Udayavani, Mar 29, 2021, 12:19 PM IST

ಚೀಲೂರು ಗ್ರಾಮದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ

ಕನಕಪುರ: ಚರ್ಚೆಗೆ ಗ್ರಾಸವಾಗಿದ್ದ ಚೀಲೂರು ಗ್ರಾಮದ ಘಟನೆ ಸಂಬಂಧ ಸ್ಪಷ್ಟನೆ ನೀಡಲು ಬಂದಿದ್ದ ನಿಖಿಲ್ ಕುಮಾರ ಸ್ವಾಮಿಗೆ ಗ್ರಾಮದ ಜನರು ಭರ್ಜರಿ ಸ್ವಾಗತ ನೀಡಿದ್ದಾರೆ.

ತಾಲೂಕಿನ ಮರಳವಾಡಿ ಹೋಬಳಿಯ ಚೀಲೂರು ಗ್ರಾಮದಲ್ಲಿ ಮಾ.23ರ ಮಂಗಳವಾರ ನಡೆದ ಪೌರಾಣಿಕ ನಾಟಕ ಪ್ರದರ್ಶನಕ್ಕೆ ಆಹ್ವಾನದ ಮೇರೆಗೆ ಬಂದಿದ್ದರು. ಈ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕೆಂಡಾಮಂಡಲವಾಗಿದ್ದ ನಿಖಿಲ್ ಕುಮಾರಸ್ವಾಮಿ ನೀವು ಏನ್‌ ದಬ್ಬಾಕ್ಕಿದ್ದೀರಾ ಬಂದು ಹೇಳಿ ಎಂದು ಸವಾಲು ಹಾಕಿದರು. ಬಳಿಕ ಅಲ್ಲಿಂದ ನಿರ್ಗಮಿಸಿದರು.

ಈ ವಿಚಾರ ತಡವಾಗಿ ಬೆಳಕಿಗೆ ಬಂದುಚೆರ್ಚೆಗೆ ಗ್ರಾಸವಾಗಿ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿಸ್ಪಷ್ಟನೆ ನೀಡಲು ಭಾನುವಾರ ಚೀಲೂರು ಗ್ರಾಮಕ್ಕೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿಗೆ ಗ್ರಾಮದ ಮಹಿಳೆಯರುಆರತಿ ಎತ್ತಿ ಹಣೆಗೆ ತಿಲಕ ಇಟ್ಟುಬರಮಾಡಿಕೊಂಡರು. ಯುವ ಕಾರ್ಯಕರ್ತರು ಪಟಾಕಿ ಸಿಡಿಸಿ ನಿಖೀಲ್‌ಕುಮಾರ ಸ್ವಾಮಿ ಅವರನ್ನು ಹೆಗಲ ಮೇಲೆಹೊತ್ತು ಮೆರವಣಿಗೆ ಮಾಡಿ ಭರ್ಜರಿಯಾಗಿ ಸ್ವಾಗತ ಮಾಡಿದರು.

ದೇವರಿಗೆ ವಿಶೇಷವಾದ ಪೂಜೆ ಸಲ್ಲಿಸಿದ ಅವರು ನಂತರ ಮಾತನಾಡಿ, ಮೊನ್ನೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದರು. ನಾಟಕ ಪ್ರದರ್ಶನಕ್ಕೆ ಅತ್ಯಂತ ಪ್ರೀತಿಯಿಂದ ನೀವುನನ್ನನ್ನು ಬರ ಮಾಡಿಕೊಂಡಿದ್ರಿ. ನನ್ನಿಂದಲೇ ಗೊಂದಲ ಸೃಷ್ಟಿಯಾಯಿತು ಎಂಬ ನೋವು ಮನಸ್ಸಿನಲ್ಲಿ ಕಾಡುತ್ತಿತ್ತು. ಈ ವಿಚಾರದ ಬಗ್ಗೆಊರಿನ ಹಲವಾರು ಮುಖಂಡರಿಗೆ ಕರೆ ಮಾಡಿ ಸಲಹೆ ಪಡೆದುಕೊಂಡು ಮತ್ತೆ ಗ್ರಾಮಕ್ಕೆ ಭೇಟಿನೀಡಿ ಗೊಂದಲಕ್ಕೆ ತೆರೆ ಎಳೆಬೇಕು ಎಂದು ನಿರ್ಧಾರ ಮಾಡಿ ಬಂದಿದ್ದೇನೆ. ಮೊನ್ನೆ ನಡೆದಘಟನೆ ಮುಗಿದು ಹೋದ ಅಧ್ಯಾಯ ಅದನ್ನೇ ಮುಂದುವರಿಸೋದು ಬೇಡ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ನಾನು ಯಾವುದೇ ದುರುದ್ದೇಶ ಇಟ್ಟುಕೊಂಡು ಇಲ್ಲಿಗೆ ಬಂದಿಲ್ಲ.ದೇವೇಗೌಡರ ಕಾಲದಿಂದ ನೀವು ನಮ್ಮ ಪರ ನಿಂತಿದ್ದೀರಾ. ಕುಮಾರಣ್ಣ ಮೂಲತಃ ಹಾಸನದವರಾದ್ರೂ ರಾಜಕೀಯವಾಗಿ ರಾಮನಗರದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಅದಕ್ಕೆಲ್ಲಾ ಕಾರಣಕರ್ತರು ನೀವು. ಈಗ ಬೇಸಿಗೆ ಆರಂಭವಾಗಿದೆಕುಡಿಯುವ ನೀರಿನ ಸಮಸ್ಯೆ ಬಗ್ಗೆಹರಿಸಲುಈಗಾಗಲೇ ಕೆಲವು ಟ್ಯಾಂಕರ್‌ಗಳನ್ನು ಖರೀದಿಮಾಡಿದ್ದೇನೆ. ಎಲ್ಲಿ ನೀರಿನ ಸಮಸ್ಯೆ ಇದೆ ಅಂಥ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರುಪೂರೈಸುವ ವ್ಯವಸ್ಥೆ ಮಾಡಿದ್ದೇವೆ. ಪ್ರತಿಪಂಚಾಯ್ತಿ ವ್ಯಾಪ್ತಿಯಲ್ಲಿ ಏನು ಸಮಸ್ಯೆ ಇದೆಅಂತಾ ಪಟ್ಟಿ ಮಾಡಿ ಕೊಡಲು ನಮ್ಮಕಾರ್ಯಕರ್ತರಿಗೆ ಹೇಳಿದ್ದೇನೆ. ನಿಮ್ಮ ಮನೆ ಮಗನ ಹಾಗೆ ನಿಮ್ಮ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ಮತ್ತು ಹೊಣೆ ನನ್ನ ಮೇಲಿದೆ ಎಂದರು.

ಹಾರೋಹಳ್ಳಿ ಮತ್ತು ಮರಳವಾಡಿಹೋಬಳಿಯ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಚೀಲೂರು ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.