ಅನುದಾನ ಬಳಕೆಗೆ ಶಾಸಕರ ವಿರೋಧ


Team Udayavani, Jun 9, 2021, 9:57 AM IST

ಅನುದಾನ ಬಳಕೆಗೆ ಶಾಸಕರ ವಿರೋಧ

ರಾಮನಗರ: ಕೋವಿಡ್‌ ಹಿನ್ನೆಲೆಯಲ್ಲಿ 15ನೇ ಹಣ ಕಾಸು ಯೋಜನೆಯಡಿ ಸ್ಥಳೀಯ ಸಂಸ್ಥೆಗಳು ನಾಗರಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಆದೇಶವೇ ಇದೆ. ಆದರೆ, ರಾಮನಗರ ವಿಧಾನಸಭಾ ಕ್ಷೇತ್ರದ ಮಾಜಿ ಮತ್ತು ಹಾಲಿ ಶಾಸಕರು (ಪರೋಕ್ಷವಾಗಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ) ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ದೂರಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 15ನೇ ಹಣಕಾಸು ಯೋಜನೆಯಡಿ ಕೋವಿಡ್‌ ಹಿನ್ನೆಲೆಯಲ್ಲಿ ನಾಗರಿಕರಿಗೆ ಆಹಾರ್‌ ಕಿಟ್‌ ಸೇರಿದಂತೆ ಅಗತ್ಯ ನೆರವು ನೀಡಲು ಸರ್ಕಾರದ ಆದೇಶವಿದೆ. ಆದರೆ, ರಾಮನಗರ ವಿಧಾನಸಭಾ ಕ್ಷೇತ್ರದ ಮಾಜಿ ಮತ್ತು ಹಾಲಿ ಶಾಸಕರು ಗ್ರಾಪಂ ಪಿಡಿಒಗಳು, ಜಿಪಂ ಸಿಇಒಗೆ ಬೆದರಿಕೆ ಹಾಕಿ, 15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಬಾರದೆಂದು, ಹಾಗೊಮ್ಮೆ ಬಳಸಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ.

ಆದರೆ ತಾವು ಮತ್ತು ಸಂಸದರು ಸರ್ಕಾರದ ಆದೇಶವನ್ನು ಅಧಿಕಾರಿಗಳಿಗೆ ತೋರಿಸಿ ಅಗತ್ಯ ನೆರವನ್ನು ಕೊಡಿಸಿದ್ದಾಗಿ ತಿಳಿಸಿದರು. ಕೋವಿಡ್‌ನ‌ಲ್ಲೂ ಕಾಂಗ್ರೆಸ್‌ ಸೇವೆ: ಮೊದಲನೆ ಅಲೆಯ ವೇಳೆ ಕಾಂಗ್ರೆಸ್‌ ನಾಗರಿಕರಿಗೆ ತನ್ನ ಸಹಾಯ ಹಸ್ತವನ್ನು ಚಾಚಿತ್ತು. ಆರೋಗ್ಯ ಸೇವೆ ಕಾರ್ಯಕ್ರಮದಡಿ ಜನರ ಆರೋಗ್ಯ ಕಲೆ ಹಾಕಲಾಗಿತ್ತು. ಅಗತ್ಯವಿದ್ದವರಿಗೆ ವೈದ್ಯಕೀಯ ನೆರವು ನೀಡಲಾಗಿತ್ತು. ರೈತರಿಂದ ತರಕಾರಿ ಖರೀದಿಸಿ, ನಾಗರಿಕರಿಗೆ ಉಚಿತವಾಗಿ ವಿತರಿಸಲಾಗಿತ್ತು. ಎರಡನೇ ಅಲೆಯ ವೇಳೆ ಸೋಂಕಿತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ತಮ್ಮ ಚಾರಿಟಬಲ್‌ ಟ್ರಸ್ಟ್‌ ಮೂಲಕ ಮೆಡಿಕಲ್‌ ಕಿಟ್‌ ವಿತರಿಸಿದ್ದಾರೆ. ಅಲ್ಲದೆ, ಚಿಕಿತ್ಸೆಗಾಗಿ ಬೆಡ್‌, ಆಕ್ಸಿಜನ್‌ ಹೀಗೆ ಅಗತ್ಯ ನೆರವು ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರದ ವಿರುದ್ಧ ಕಿಡಿ: ಕೇಂದ್ರದಲ್ಲಿ ಕಳೆದ 7 ವರ್ಷದಿಂದ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ, ಜನರಿಗೆ ಸ್ಪಂದಿಸಿದ್ದು ಕಡಿಮೆ. ಮೊದಲನೆ ಅಲೆ ತಗ್ಗಿದ ನಂತರ ತಜ್ಞರು 2ನೇ ಅಲೆಯ ಬಗ್ಗೆ 2021ರ ಜನವರಿಯಲ್ಲೇ ಎಚ್ಚರಿಸಿದ್ದರು. ಆದರೆ, ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನಿರ್ಲಕ್ಷಿಸಿದ್ದೆ ಎರಡನೇ ಅಲೆಯ ಈ ಪ್ರಮಾಣದ ಭೀಕರತೆಗೆ ಕಾರಣವಾಗಿದೆ ಎಂದು ದೂರಿದರು.

ನಾಗರಿಕರಿಗೆ ಬೆಲೆ ಏರಿಕೆ ಬಿಸಿ: ತಾಪಂ ಮಾಜಿ ಅಧ್ಯಕ್ಷ ಕಾಂತರಾಜ ಪಟೇಲ್‌ ಮಾತನಾಡಿ. ಪೆಟ್ರೋಲ್‌-ಡೀಸಲ್‌ ಬೆಲೆಗಳು ಲೀಟರ್‌ಗೆ 100ರ ಗಡಿಯಲ್ಲಿವೆ. ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 150 ರೂ. ದಾಟಿದೆ. ಲಾಕ್‌ಡೌನ್‌ ಕಾರಣ ಜನರ ಆದಾಯ ಕುಸಿದಿದೆ. ಆದರೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿತಡೆಯಲಾಗುತ್ತಿಲ್ಲ. ಜನರ ಬವಣೆ ಸರ್ಕಾರಗಳಿಗೆ ಕಾಣುತ್ತಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಅನಿತಾ ಕುಮಾರಸ್ವಾಮಿಯವರು ಕೋವಿಡ್‌ ನಿಯಂತ್ರಣದ ವಿಚಾರದಲ್ಲಿ ಹೆಚ್ಚಿನ ಹೊಣೆ ಹೊರಬೇಕಿತ್ತು ಎಂದು ಹೇಳಿದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಬಿ.ಚೇತನ್‌ ಕುಮಾರ್‌, ನಗರಸಭೆ ಮಾಜಿ ಅಧ್ಯಕ್ಷ ಲೋಹಿತ್‌ ಬಾಬು, ಸಾಮಾಜಿಕ ಜಾಲತಾಣ ವಿಭಾಗದ ಶ್ರೀನಿ ವಾಸ್‌, ಪ್ರಮುಖರಾದ ಜಗದೀಶ್‌, ನರಸಿಂಹ ಮೂರ್ತಿ, ವಾಸಿಂ, ಆರಿಫ್ ಉಪಸ್ಥಿತರಿದ್ದರು

ಮಾಧ್ಯಮಗಳ ಕಾಳಜಿಗೆ ಶ್ಲಾಘನೆ :

ಕೋವಿಡ್‌ ಭೀಕರತೆಯ ಬಗ್ಗೆ ಜನ ಸಾಮಾನ್ಯರನ್ನು ಮಾಧ್ಯಮಗಳು ಜಾಗೃತಿ ಮೂಡಿಸಿವೆಯಲ್ಲದೆ, ಕಾಲಕಾಲಕ್ಕೆ ಎಚ್ಚರಿಕೆಯ ಸಂದೇಶಗಳನ್ನು ರವಾನಿಸಿದೆ. ತಜ್ಞರ ಮೂಲಕ ಜನ ಸಾಮಾನ್ಯರಲ್ಲಿದ್ದ ಅನುಮಾನಗಳನ್ನು ಪರಿಹಾರ ನೀಡಿವೆ. ಮಾಧ್ಯಮ ಪ್ರತಿನಿಧಿಗಳು ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ಜನರಿಗೆ ದಿನನಿತ್ಯದ ಆಗುಹೋಗುಗಳ ಬಗ್ಗೆ ವರದಿ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ರಾಜು ಶ್ಲಾಘಿಸಿದರು

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.