ರಾಮನಗರ: ಆಕ್ಸಿಜನ್, ಬೆಡ್ ಲಭ್ಯ: ಚಿಕಿತ್ಸೆಗೆ ಸಮಸ್ಯೆ ಇಲ್ಲ
ಜಿಲ್ಲಾಸ್ಪತ್ರೆ ನೂತನ ಕಟ್ಟಡ ದಲ್ಲಿ ಶೀಘ್ರ 131 ಹೆಚ್ಚುವರಿ ಬೆಡ್ ! ಮನೆ ಆರೈಕೆ ಸೋಂಕಿತರ ಮನೆಗಳಿಗೆ ಕಾರ್ಯಕರ್ತೆಯರ ಭೇಟಿ: ಡೀಸಿ
Team Udayavani, May 14, 2021, 2:15 PM IST
ರಾಮನಗರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆ ಮತ್ತು ನಿರ್ವಹಣೆಗೆ ಜಿಲ್ಲಾಡಳಿತ ಬದ್ಧವಾಗಿದ್ದು, ಆಮ್ಲಜನಕ ಮತ್ತು ಬೆಡ್‌ಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕಮಾರ್ ಕೆ. ತಿಳಿಸಿದರು.
ನಗರದಲ್ಲಿ ಸುದ್ದಿಗೋ ಷ್ಠಿ ನಡೆಸಿದ ಅವರು, ಕೋವಿಡ್ ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳು ಜಾರಿಯಲ್ಲಿದೆ ಎಂದರು.
ಬೆಡ್, ಆಕ್ಸಿಜನ್, ಐಸಿಯು ಎಷ್ಟಿದೆ?:
ಜಿಲ್ಲೆಯಲ್ಲಿ 394 ಆಕ್ಸಿ ಜನ್ ಸಹಿತ ಬೆಡ್‌ಗಳಿವೆ. ಈ ಪೈಕಿ ಸದ್ಯ 329 ಬೆಡ್‌ಗಳು ಭರ್ತಿಯಾಗಿವೆ. 71 ಐಸಿಯುಗಳಿದ್ದು, 43 ಭರ್ತಿಯಾಗಿದೆ. 39 ವೆಂಟಿಲೇಟರ್‌ಗಳ ಪೈಕಿ 23 ಭರ್ತಿಯಾಗಿದೆ ಎಂದರು.
ಜಿಲ್ಲೆ ಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲಾಸ್ಪತ್ರೆಯ ನೂತನ ಕಟ್ಟಡದಲ್ಲಿ 131 ಬೆಡ್ ಅಳವಡಿಸಲಾಗಿದೆ. ಕೇವಲ 15 ದಿನಗಳಲ್ಲಿ ಈ ವ್ಯವಸ್ಥೆಯನ್ನು ಸಿದ್ಧಪಡಿಸಲಾಗಿದೆ. ಇದೇ ಕಟ್ಟಡದಲ್ಲಿ ಹೆಚ್ಚುವರಿಯಾಗಿ 10 ವೆಂಟಿಲೇಟರ್ ಅಳವಡಿಸಲಾಗು ವುದು ಎಂದರು.
ಜಿಲ್ಲೆಯಲ್ಲಿರುವ ಕೈಗಾರಿಕೆಗಳಿಂದ 211 ಮೆಡಿಕಲ್ ಆಕ್ಸಿಜನ್ ಸಿಲಿಂಡರ್‌ಗಳನ್ನು ಪಡೆಯಲಾಗಿದೆ. ಈ ಸಿಲಿಂಡರ್‌ಗಳನ್ನು ಬಫರ್ ಸ್ಟಾಕ್ ಎಂದು ಪರಿಗಣಿಸಿ ಸದ್ಯ ಇರುವ ಆಕ್ಸಿಜನ್ ವ್ಯವಸ್ಥೆಗೆ ಹೆಚ್ಚು ವರಿಯಾಗಿ ಶೇಖರಿಸಲಾಗಿದೆ ಎಂದರು.
ಗಂಭೀರ ಸೋಂಕಿತರು ಆರ್‌ಆರ್ ಆಸ್ಪತ್ರೆಗೆ: ಬೆಂಗಳೂರು ಬಳಿಯ ರಾಜರಾಜೇಶ್ವರಿ ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರದೊಂದಿಗೆ ಎಸ್‌ಒಪಿಯಂತೆ ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿದೆ. ಈ ಆಸ್ಪತ್ರೆಗೆ ಬಹಳಗಂಭೀರವಾಗಿರುವ ರೋಗಿಗಳನ್ನು ಚಿಕಿತ್ಸೆಗೆ ಕಳುಹಿಸಿಕೊಡಲಾಗುತ್ತದೆ ಎಂದರು.
4 ಕೋವಿಡ್ ಕೇರ್ ಸೆಂಟರ್‌ಗಳು ಜಿಲ್ಲೆಯಲ್ಲಿ 4 ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಕೋವಿಡ್ ಲಕ್ಷಣಗಳಿಲ್ಲದ ಸೋಂಕಿತರು ಹಾಗೂ ಅಲ್ಪ ಪ್ರಮಾಣದ ಲಕ್ಷಣವುಳ್ಳವರ ಚಿಕಿತ್ಸೆಯನ್ನು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4 ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 405 ಹಾಸಿಗೆಗಳಿವೆ. ಸದ್ಯ 276 ಮಂದಿ ಇಲ್ಲಿ ನಿಗಾದಲ್ಲಿದ್ದಾರೆ ಎಂದರು.
ಭೇಟಿ: 2914 ಸೋಂಕಿತರಿಗೆ ಹೋಮ್ ಐಸೊ ಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಈ ಮಂದಿಯನ್ನು ಪರಿಶೀಲಿಸುತ್ತಿದ್ದಾರೆ. ಪ್ರತಿ ತಾಲೂಕಿನಲ್ಲಿ ಹೋಮ್ ಐಸೋಲೇಷನ್ ರೋಗಿಗಳ ಚಿಕಿತ್ಸೆಗಾಗಿ ಇಬ್ಬರು ಆರ್‌ಬಿಎಸ್‌ಕೆ ವೈದ್ಯರನ್ನು ನಿಯೋಜಿಸಲಾಗಿದೆ. ರೋಗಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಾರ್‌ರೂಂ ತೆರೆದು ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ನಿರಂ ಜನ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಪದ್ಮ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.