ಕಾವ್ಯದಲ್ಲಿ ಸಾಮಾಜಿಕ ಕಳಕಳಿ, ವರ್ತಮಾನ ಇರಲಿ


Team Udayavani, Jan 26, 2019, 10:45 AM IST

litr.jpg

ಚನ್ನಪಟ್ಟಣ: ಕಾವ್ಯದಲ್ಲಿ ಸಾಮಾಜಿಕ ಕಳಕಳಿ ಇರಬೇಕು. ಕವಿಗಳು ವರ್ತಮಾನ, ಭೂತ ಹಾಗೂ ಭವಿಷ್ಯಗಳನ್ನು ಮನಸಲ್ಲಿಟ್ಟುಕೊಂಡು ಕಾವ್ಯ ರಚಿಸಬೇಕು ಎಂದು ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಕವಿ ಮಂಜೇಶ್‌ ಬಾಬು ಅವರ ‘ಜೀವನ’ ಹನಿಗವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಕಾವ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವಾಗಬೇಕು. ಯುವ ಕವಿಗಳು ಪ್ರಸ್ತುತ ಸಮಾಜದ ಅವ್ಯವಸ್ಥೆಯನ್ನು ಬಿಂಬಿಸುವ ಕಾವ್ಯಗಳನ್ನು ರಚನೆ ಮಾಡಬೇಕು ಎಂದರು.

ಸ್ಥಳೀಯ ಕವಿಗಳನ್ನು ಗುರುತಿಸಿ: ಕಾವ್ಯ ರಚನೆಗೆ ಆಳವಾದ ಅಧ್ಯಯನ ಅಗತ್ಯ. ಹಿರಿಯ ಕವಿಗಳು ಹೇಗೆ ಕಾವ್ಯ ರಚನೆ ಮಾಡಿದ್ದಾರೆಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಬೇಕು. ಅವರನ್ನು ಮಾದರಿಯಾಗಿಸಿಕೊಂಡು ಕಾವ್ಯ ಸೃಷ್ಟಿಗೆ ಮುಂದಾಗಬೇಕು. ಸ್ಥಳೀಯ ಕವಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸವಾಗಬೇಕು. ಅವರ ಕಾವ್ಯ, ಕಾದಂಬರಿ, ನಾಟಕಗಳ ಪುಸ್ತಕಗಳು ಪ್ರಕಟವಾಗಬೇಕು. ಆಗ ಮಾತ್ರ ಉತ್ತಮ ಕವಿಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.

ತೋಚಿದ್ದನ್ನು ಗೀಚುವ ಮನೋಭಾವ ಇರಲಿ: ವಿಮರ್ಶಕ ಡಾ.ಭೈರಮಂಗಲ ರಾಮೇಗೌಡ ಮಾತನಾಡಿ, ಪರಿಸರ, ರೈತರ ಸಮಸ್ಯೆ, ಗ್ರಾಮೀಣರ ಬದುಕು, ಪ್ರಸಕ್ತ ಸನ್ನಿವೇಶದ ವಿಚಾರಧಾರೆಗಳನ್ನು ಸೇರ್ಪಡೆ ಮಾಡಿಕೊಂಡು ಕಾವ್ಯ ರಚನೆ ಮಾಡಬೇಕು. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃಷಿ ಮಾಡಬೇಕು, ತೋಚಿದ್ದನ್ನು ಗೀಚುವ ಮನೋಭಾವ ಇರಬಾರದು, ಕಾವ್ಯಕ್ಕೆ ಒಂದು ಘನತೆಯನ್ನು ಸೃಷ್ಟಿಸುವ ಕೆಲಸ ಯುವಕಗಳಿಂದ ಆಗಬೇಕು ಎಂದು ಹೇಳಿದರು.

ಹಿರಿಯದ ಹಾದಿಯಲ್ಲೇ ನಡೆಯಿರಿ: ಆದಿಚುಂಚನಗಿರಿ ಮಠದ ಶ್ರೀಅನ್ನದಾನೇಶ್ವರ ಸ್ವಾಮೀಜಿ ಮಾತನಾಡಿ, ಅಕ್ಷರದಿಂದ ಮಾತ್ರ ಎಲ್ಲವನ್ನೂ ಪಡೆಯಲು, ಸೃಷ್ಟಿಸಲು ಸಾಧ್ಯ. ನಿಟ್ಟಿನಲ್ಲಿ ಯುವಕಗಳು ಸಮಾಜದ ಸ್ವಾಸ್ಥ್ಯವನ್ನು ತಮ್ಮ ಸಾಹಿತ್ಯ, ಕಾವ್ಯದ ಮೂಲಕ ಸರಿಪಡಿಸಲು ಮುಂದಾಗಬೇಕು. ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಹಿರಿಯ ಕವಿಗಳನ್ನು ಸ್ಮರಣೆ ಮಾಡುವ ಮೂಲಕ ಅವರ ಹಾದಿಯಲ್ಲೇ ನಡೆಯಬೇಕು ಎಂದು ಸಲಹೆ ನೀಡಿದರು.

ಜೀವನ ಪುಸ್ತಕ ಕುರಿತುಸಾಹಿತಿ ಡಾ.ಸಿಪಿಲೆ ಸತೀಶ್‌ ಮಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಸಿಂ.ಲಿಂ.ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು. ಯುವ ಬರಹಗಾರರ ಬಳಗದ ಸತೀಶ್‌ ಜವರೇಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಸಿ.ಜಯಮುತ್ತು, ಸಾರ್ವಜನಿಕ ವಿದ್ಯಾಸಂಸ್ಥೆ ಕಾರ್ಯದರ್ಶಿ ಮೆಹರೀಶ್‌, ಸರ್ವೋದಯ ಪ್ರತಿಷ್ಠಾನದ ಅಧ್ಯಕ್ಷ ಎಸ್‌.ಟಿ.ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.