![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 17, 2023, 1:24 PM IST
ರಾಮನಗರ: ‘ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ. ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಇದು ರಾಜ್ಯದ ಏಕೈಕ ಕಾಂಗ್ರೆಸ್ ಸಂದ ಡಿಕೆ ಸುರೇಶ್ ಮಾತು.
ರಾಮನಗರದಲ್ಲಿ ರಾಜಕೀಯ ವೈರಾಗ್ಯದ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತವೆಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ಕೊಡುತ್ತೇನೆ. ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ. ಹಾಗಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎನ್ನುವುದು ನನ್ನ ಉದ್ದೇಶ ಎಂದರು.
ಸಂಸದರ ಬಗ್ಗೆ ಮಾಜಿ ಸಿಎಂ ಎಚ್ಡಿಕೆ ವ್ಯಂಗ್ಯ ವಿಚಾರಕ್ಕೆ ಮಾತನಾಡಿ, ಅವರಿಗೆ ವ್ಯಂಗ್ಯ ಬಿಟ್ಟು ಬೇರೆ ಏನೂ ಬರಲ್ಲ, ವ್ಯಂಗ್ಯ ಮಾಡಲಿ. ಅಧಿಕಾರದ ದಾಹ ಇದ್ದವರಿಗೆ ರಾಜಕಾರಣ ಬೇಕು. ನನಗಿರುವುದು ಅಭಿವೃದ್ಧಿಯ ದಾಹ. ಇನ್ನೂ ಒಂದು ವರ್ಷ ಸಮಯ ಇದೆ, ನಾನು ಅಭಿವೃದ್ಧಿ ಜಡೆ ಗಮನಕೊಟ್ಟಿದ್ದೀನೆ ಎಂದರು.
ಇದನ್ನೂ ಓದಿ:‘ಧೋನಿ ನನ್ನ ಅನುಮತಿ ಕೇಳಿದ್ದರು…’ CSK ತಂಡದಿಂದ ಹೊರಗುಳಿದ ಬಗ್ಗೆ ಗುಟ್ಟು ಬಿಚ್ಚಿಟ್ಟ ರೈನಾ
ಡಿ.ಕೆ.ಸುರೇಶ್ ಸೋಲಿಸಲು ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಹೊಂದಾಣಿಕೆ ಮಾಡಿಕೊಳ್ಳಲಿ, ಯಾರು ಬೇಕಾದರೂ ನಿಲ್ಲಲಿ. ನನಗಿರುವುದು ಒಂದೇ ಮತ, ಪ್ರಧಾನಿಗಿರುವುದೂ ಒಂದೇ ಮತ. ಆ ಮತವನ್ನ ಯಾರಿಗೆ ಹಾಕಬೇಕೆಂದು ಜನ ತೀರ್ಮಾನ ಮಾಡುತ್ತಾರೆ ಎಂದರು.
ಉಚಿತವಾಗಿ ಅಕ್ಕಿ ಕೇಳುತ್ತಿಲ್ಲ: ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನಿದೆ. ಅಕ್ಕಿ ಇರುವುದು ಸಾರ್ವಜನಿಕರ ವಿತರಣೆಗೆ. ಆದರೆ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚುಕೊಳ್ಳುತ್ತಿದೆ. ಎಷ್ಟೋ ಸಾರಿ ಅಕ್ಕಿ ಹಾಳಾಗಿ ನಷ್ಟವಾಗಿದೆ. ರಾಜ್ಯ ಸರ್ಕಾರ ಉಚಿತವಾಗಿ ಏನೂ ಅಕ್ಕಿ ಕೇಳುತ್ತಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲೇ ಕೊಡಿಯೆಂದು ಕೇಳುತ್ತಿದ್ದೇವೆ. ನಾವು ಅಕ್ಕಿ ಕೇಳುತ್ತಿರುವುದು ಬಡವರು, ಹಸಿದವರ ದೃಷ್ಟಿಯಿಂದ ಅನ್ನ ಕೊಡಿ ಅಂತಿದ್ದೇವೆ. ಇದು ಕೇಂದ್ರದ ಕಾರ್ಯಕ್ರಮವೂ ಇರಬಹುದು, ರಾಜ್ಯದ ಕಾರ್ಯಕ್ರಮವೂ ಇರಬಹುದು ಎಂದರು.
ಆಹಾರ ಭದ್ರತಾ ಕಾಯ್ದೆ ತಂದಿದ್ದೆ ಯುಪಿಎ ಸರ್ಕಾರ. ಆ ಕಾಯ್ದೆ ತರದಿದ್ದರೆ ದೇಶದ ಜನರಿಗೆ ಇವರು 5ಕೆಜಿ ಅಕ್ಕಿ ಕೊಡಲು ಆಗುತ್ತಿತ್ತಾ? ಹಿಂದೆ ಸಿದ್ದರಾಮಯ್ಯನವರು ಉಚಿತ ಅಕ್ಕಿ ಕೊಟ್ಟಿದ್ದರು. ಆಗಲೂ ಬಡವರ ಹಸಿವನ್ನ ನೀಗಿಸಿದ್ದೆವು. ಈಗಲೂ 10ಕೆ.ಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದೇವೆ. ಇದರಿಂದ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದರು.
ಬಿಜೆಪಿ ಗೆ ಮತಹಾಕಿದರೂ ಅಕ್ಕಿ, ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತದೆ. ಆದರೆ ಹಸಿದ ವರ್ಗಕ್ಕೆ ಕೇಂದ್ರ ಅನ್ಯಾಯ ಮಾಡುತ್ತಿದೆ. ಇದರಲ್ಲಿ ರಾಜಕೀಯ ಮಾಡುವುದು ಬೇಡ. ಬಡವರಿಗೆ ಅಕ್ಕಿಕೊಡಿ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.