ವಸತಿ ಶಾಲೆಗಳಿಗೆ ಕಳಪೆ ಆಹಾರ ವಸ್ತು ಪೂರೈಕೆ
ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ತಾಪಂ ಅಧ್ಯಕ್ಷ ಗಾಣಕಲ್ ನಟರಾಜ್ ಆರೋಪ
Team Udayavani, Jun 28, 2019, 9:08 AM IST
ರಾಮನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಳಪೆ ರಾಗಿಯನ್ನು ಪೂರೈಸಲಾಗುತ್ತಿದೆ ಎಂದು ತಾಪಂ ಅಧ್ಯಕ್ಷ ಗಾಣಕಲ್ ನಟರಾಜ್ ಆರೋಪಿಸಿದರು.
ರಾಮನಗರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಸೇರಿದಂತೆ ಸರ್ಕಾರಿ ಹಾಸ್ಟೆಲ್ಗಳಿಗೆ ಕಳಪೆ ಆಹಾರ ಪದಾರ್ಥಗಳನ್ನು ಪೂರೈಸಲಾಗುತ್ತಿದೆ. ರಾಸಾಯನಿಕಗಳನ್ನು ಬಳಸಿ ಬಣ್ಣ ಕಟ್ಟಿರುವ ರಾಗಿಯನ್ನು ಪೂರೈಸಲಾಗುತ್ತಿದೆ ಎಂದು ತಾಪಂ ಅಧ್ಯಕ್ಷ ಗಾಣಕಲ್ ನಟರಾಜ್ ಆರೋಪಿಸಿದರು.
ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅವರು ಬಣ್ಣ ಕಟ್ಟಿರುವ ರಾಗಿಯ ಸ್ಯಾಂಪಲ್ಗಳನ್ನು ಪ್ರದರ್ಶಿಸಿ ದೂರಿದರು. ಮೊರಾರ್ಜಿ ವಸತಿ ಶಾಲೆಗೆ ಪೂರೈಕೆಯಾಗಿರುವ ಬಣ್ಣ ಕಟ್ಟಿರುವ ರಾಗಿಯನ್ನು ಪೂರೈಸಲಾಗಿದೆ ಎಂದು ಸ್ಯಾಂಪಲ್ಗಳನ್ನು ಪ್ರದರ್ಶಿಸಿ ಜಿಪಂ ಅಧ್ಯಕ್ಷರು ಮತ್ತು ಸಿಇಒ ಅವರಿಗೆ ಕೊಟ್ಟರು.
ಕ್ರಮಕ್ಕೆ ಸೂಚಿಸಿದರು ಪ್ರಯೋಜನವಿಲ್ಲ: ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳನ್ನು ಸೇವಿಸುವ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆಗಳು ಉದ್ಬವಿಸಿದರೆ ಹೊಣೆ ಯಾರು ಎಂದು ಪ್ರಶ್ನಿಸಿದರು. ರಾಮನಗರ ತಾಲೂಕಿನಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೂ ನಾಲ್ಕು ತಿಂಗಳಿನಿಂದ ಸತತವಾಗಿ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿರುವುದಾಗಿ, ಅಲ್ಲಿನ ಪ್ರಾಂಶುಪಾಲರು, ಶಿಕ್ಷಕರು, ನಿಲಯ ಪಾಲಕರಿಗೆ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕ್ರಮಕೈಗೊಳ್ಳಿ ಎಂದು ಸೂಚಿಸಿದರು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ: ಜಿಲ್ಲಾ ಪಂಚಾಯ್ತಿ ಸದಸ್ಯ ಎಸ್. ಗಂಗಾಧರ್ ಮಾತನಾಡಿ, ಸರ್ಕಾರಿ ಶಾಲೆಗಗಳಿಗೆ ಪೂರೈಕೆ ಆಗುತ್ತಿರುವ ಆಹಾರ ಪದಾರ್ಥಗಳು ಸಹ ಕಳಪೆಯಾಗಿವೆ ಎಂದು ದೂರಿದರು. ಕಳಪೆ ಆಹಾರ ಪದಾರ್ಥಗಳನ್ನು ಪೂರೈಸುತ್ತಿರುವ ಏಜೆನ್ಸಿಗಳು ಮತ್ತು ಅದನ್ನು ಪಡೆಯುತ್ತಿರುವ ವಸತಿ ನಿಲಯಗಳ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಅಧಿಕಾರಿಗಳಿಗೆ ಮಾಹಿತಿ ಇಲ್ಲ: ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವೀಣಾಕುಮಾರಿ ಮಾತನಾಡಿ, ಜಿಲ್ಲಾ ಪಂಚಾಯ್ತಿ ಸದಸ್ಯರ ತಂಡವು ಹಲವು ವಸತಿ ಶಾಲೆಗಳಿಗೆ ಭೇಟಿ ನೀಡಿ ಸಂಸದರಿಗೆ ವರದಿ ಸಲ್ಲಿಸಿದ್ದೇವೆ. ಆಹಾರ ಪದಾರ್ಥಗಳು ಎಲ್ಲಿಂದ ಪೂರೈಕೆಯಾಗುತ್ತಿವೆ ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ, ನಾವು ಪೋನ್ ಮಾಡಿದರೂ ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ ಎಂದು ದೂರಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾತನಾಡಿ ತನಿಖೆ ಮಾಡಿ ವರದಿ ಸಲ್ಲಿಸುವುದಾಗಿ ಹೇಳಿದಾಗ ಸಿಡಿಮಿಡಿಗೊಂಡ ಶಾಸಕ ಎ.ಮಂಜುನಾಥ್ ನಾಲ್ಕು ತಿಂಗಳಾದರು ಆಹಾರ ಪದಾರ್ಥ ಪೂರೈಸುತ್ತಿರುವವರು ಯಾರು ಎಂದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿ, ಬೇಜವಾಬ್ದಾರಿ ಬಿಡಿ ಎಂದರು. ಅಧ್ಯಕ್ಷತೆಯನ್ನು ಜಿಪಂ ಅಧ್ಯಕ್ಷ ಎಂ.ಎನ್.ನಾಗರಾಜು ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.