ಋತುಸ್ರಾವ ಬಗ್ಗೆ ಜಿಲ್ಲಾದ್ಯಂತ ಜನಜಾಗೃತಿ ಸಪ್ತಾಹ

ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಈ ಸಮಸ್ಯೆ ನಿಯಂತ್ರಿಸಬಹುದಾಗಿದೆ

Team Udayavani, May 28, 2022, 6:11 PM IST

ಋತುಸ್ರಾವ ಬಗ್ಗೆ ಜಿಲ್ಲಾದ್ಯಂತ ಜನಜಾಗೃತಿ ಸಪ್ತಾಹ

ರಾಮನಗರ: ಮಹಿಳೆಯರಲ್ಲಿ ಮುಟ್ಟಿನ ಪ್ರಕ್ರಿಯೆ ನೈಸರ್ಗಿಕ ಸಹಜ ಪ್ರಕ್ರಿಯೆಯಾಗಿದ್ದು, ಸಮುದಾಯದಲ್ಲಿ ಇದರ ಬಗ್ಗೆ ತಪ್ಪುಗ್ರಹಿಕೆ ಇದೆ. ಇದನ್ನುಹೋಗಲಾಡಿಸಲು ಅರಿವು ಕಾರ್ಯಕ್ರಮ ಆಯೋಜಿಸಿ ದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎ ಸ್‌. ಗಂಗಾಧರ್‌ ಸಲಹೆ ನೀಡಿದರು.

ರಾಮನಗರ ತಾಲೂಕು ಸುಗ್ಗನಹಳ್ಳಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯ ದಿನ ಹಾಗೂ ಜಾಗೃತಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತ ನಾಡಿ, ಮೇ 28ರಂದು ಮುಟ್ಟಿನ ನೈರ್ಮಲ್ಯ ದಿನವನ್ನು ಆಚರಿಸಲಾಗುವುದು. ಈ ಹಿನ್ನೆಲೆ  ಜಿಲ್ಲಾದ್ಯಂತ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಟ್ಟಿನ ಸಮಯದಲ್ಲಿ ನೈರ್ಮಲ್ಯ ನಿರ್ವಹಣೆ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ಸದು
ದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ ಎಂದರು.

ಸಾಹಸ್‌ ಸಂಸ್ಥೆಯ ಯೋಜನಾ ಸಂಯೋಜಕಿ ನಯನ ಮಾತನಾಡಿ, ಜನನೇಂದ್ರಿಯ ಭಾಗದ ಅಶುಚಿತ್ವ, ಶೌಚಾಲಯದ ಶುಚಿತ್ವ ಕಾಪಾಡಿಕೊಳ್ಳದಿರುವುದು, ಕಲುಷಿತ ನೀರು ಬಳಕೆ, ಒದ್ದೆಯಾದ ಪ್ಯಾಡ್‌ ಹೆಚ್ಚು ಸಮಯ ಬಳಸುವುದರಿಂದ ಸಮಸ್ಯೆ ಕಂಡುಬರುತ್ತವೆ. ಇತರೆ ಜನನೇಂದ್ರಿಯ ಸೋಂಕಿನಿಂದಲೂ ಅನಾರೋಗ್ಯಕ್ಕೆ ಅವಕಾಶವಾಗುತ್ತದೆ ಎಂದು ಎಚ್ಚರಿಸಿದರು.

ಸ್ವಚ್ಛತೆ ಕಾಪಾಡಿಕೊಳ್ಳಿ: ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಈ ಸಮಸ್ಯೆ ನಿಯಂತ್ರಿಸಬಹುದಾಗಿದೆ. ಶೌಚಕ್ಕೆ ಶುದ್ಧ ನೀರು ಬಳಸುವುದು, ಶೌಚಾಲಯ ಶುಚಿಯಾಗಿಡುವುದು, ಮುಟ್ಟಿನ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ಪ್ಯಾಡ್‌, ಬಟ್ಟೆ ಬದಲಿಸಿಕೊಳ್ಳುವುದು, ಪ್ರತಿದಿನ ಒಳ ಉಡುಪುಗಳನ್ನು ಬದಲಾಯಿಸುವುದು, ಅಲ್ಲದೆ ಅವುಗಳನ್ನು ಚೆನ್ನಾಗಿ ಒಗೆದು ಒಣಗಿಸಿ ಮರುಬಳಕೆ ಮಾಡಬೇಕು ಎಂದರು.

ಅತಿಯಾದ ರಕ್ತಸ್ರಾವ, ರಕ್ತಹೀನತೆಗೆ ದಾರಿ: ಜಿಲ್ಲಾ ಎಸ್‌ಬಿಸಿಸಿ ಸಂಯೋಜಕ ಸುರೇಶ್‌ ಬಾಬು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಇಂದಿಗೂ ಮುಟ್ಟಿನ ಸಮಯದಲ್ಲಿ ಅಪವಿತ್ರವೆಂದು ಭಾವಿಸಿ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಜೊತೆಗೆ ಇಂತಹ ಸಂದರ್ಭಗಳಲ್ಲಿ ಆತಂಕ, ಭಯ, ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಅತಿಯಾದ ರಕ್ತಸ್ರಾವದಿಂದ ಮಹಿಳೆಯರಲ್ಲಿ ರಕ್ತಹೀನತೆ ಕಂಡುಬರುತ್ತದೆ. ಹೀಗಾಗಿ, ಪೌಷ್ಟಿಕ ಆಹಾರ ಸೇವನೆ ಅಗತ್ಯವಾಗಿ ಪಾಲಿಸಬೇಕು ಎಂದರು. ಮುಖ್ಯಶಿಕ್ಷಕಿ ಗೀತಾ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಮಂಗಲ, ಶಿಕ್ಷಕ ಶಿವಕುಮಾರ್‌, ಗೌರಮ್ಮ, ಜಯರಾಮಯ್ಯ, ಸಾಹಸ ಸಂಸ್ಥೆಯ ತಾತಯ್ಯ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.