ಹಗಲು ವೇಳೆ ತ್ರಿಫೇಸ್ ವಿದ್ಯುತ್ ನೀಡಲು ಚಿಂತನೆ
Team Udayavani, Jun 19, 2022, 3:13 PM IST
ಚನ್ನಪಟ್ಟಣ: ರೈತರ ಹಲವಾರು ವರ್ಷಗಳ ಬೇಡಿಕೆಯಾಗಿರುವ ತ್ರಿಫೇಸ್ ವಿದ್ಯುತ್ ಅನ್ನು ಹಗಲು ವೇಳೆ ನೀಡಲು ಚಿಂತನೆ ನಡೆದಿದೆ ಎಂದು ಬೆಸ್ಕಾಂ ಇಇ ಶಿವಕುಮಾರ್ ತಿಳಿಸಿದರು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚನ್ನಪಟ್ಟಣ ನಗರ ಉಪ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಹಮ್ಮಿಕೊಳ್ಳುವ ವಿದ್ಯುತ್ ಅದಾಲತ್ ಕಾರ್ಯಕ್ರಮಕ್ಕೆ ಬೈರಾಪಟ್ಟಣ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಂದಾಯ ಅದಾಲತ್ ಮಾದರಿಯಲ್ಲಿಯೇ ಪ್ರತಿ ತಿಂಗಳ ಮೂರನೇ ಶನಿ ವಾರ ವಿದ್ಯುತ್ ಅದಾಲತ್ ಕಾರ್ಯ ಕ್ರಮ ಹಮ್ಮಿ ಕೊಳ್ಳಲಾಗುತ್ತಿದ್ದು, ಇದಕ್ಕೆ ಬೈರಾ ಪಟ್ಟಣದಿಂದ ಚಾಲನೆ ನೀಡಲಾಗುತ್ತಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆ ಆಲಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಮ್ಮ ಗ್ರಾಮಗಳಿಗೆ ಬರಲಿದ್ದಾರೆ. ನಿಮ್ಮ ವ್ಯಾಪ್ತಿಯ ವಿದ್ಯುತ್ ಕಾರ್ಯಪಾಲಕ ಎಂಜಿನಿಯರ್ ಹಾಗೂ ಅಧಿಕಾರಿಗಳು ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದರು.
ವಿದ್ಯುತ್ ಕಂಬ ಸ್ಥಳಾಂತರ: ಬೈರಾ ಪಟ್ಟಣದ ತೋಟಗಾರಿಕೆ ಇಲಾಖೆಯ ಫಾರಂ ಬಳಿ ಇರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವುದು ಸೇರಿದಂತೆ ರೈಲ್ವೆ ಹಳಿಗಳ ಹಾಸು-ಪಾಸು ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು. ರೈತರಿಗೆ ಅನುಕೂಲವಾಗುವಂತೆ ಇನ್ನು ಮುಂದೆ ಹಗಲು ವೇಳೆಯಲ್ಲಿ ತ್ರಿಫೇಸ್ ವಿದ್ಯುತ್ ಕೊಡುವ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.
ಹಲವು ವರ್ಷಗಳ ಬೇಡಿಕೆ: ರಾತ್ರಿ ವೇಳೆ ತ್ರಿ ಫೇಸ್ ವಿದ್ಯುತ್ ನೀಡುವುದರಿಂದ ಬೆಳೆ ಗಳಿಗೆ ನೀರು ಹಾಯಿಸುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಹಗಲು ವೇಳೆ ಯಲ್ಲಿ ತ್ರಿಫೇಸ್ ವಿದ್ಯುತ್ ನೀಡಬೇಕು ಎಂಬುದು ರೈತರ ಹಲವು ವರ್ಷಗಳ ಬೇಡಿಕೆಯಾಗಿದೆ. ಬೆಸ್ಕಾಂ ಜಾಗೃತ ದಳದ ನಿರೀಕ್ಷಕ ವಿಕಾಸ್ ಗೌಡ, ಬೆಸ್ಕಾಂ ಎಇಇ ಉಮೇಶ್, ಚನ್ನಪಟ್ಟಣ ಎಇಇ ಚಂದನಾ, ಮಳೂರು ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.