ಕಾರ್ಯದರ್ಶಿ ಹುದ್ದೆ ನೇಮಕ ವಿರೋಧಿಸಿ ಪ್ರತಿಭಟನೆ
Team Udayavani, Jun 7, 2020, 6:34 AM IST
ಚನ್ನಪಟ್ಟಣ: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಅಪರಾಧ ಹಿನ್ನೆಲೆ ಹೊಂದಿರುವವರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ತಾಲೂಕಿನ ಕನ್ನಸಂದ್ರ ಗ್ರಾಮಸ್ಥರು ಸಂಘದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಂಘದ ನಿವೃತ್ತ ಕಾರ್ಯದರ್ಶಿ ಚಂದ್ರಯ್ಯರ ಪುತ್ರ ಜಯಂತ್ ಎಂಬುವರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆ ವಿಚಾರದಲ್ಲಿ ಸಹಕಾರಿ ಸಂಘಗಳ ನಿಯಮ ಗಾಳಿಗೆ ತೂರಲಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಗುಪ್ತವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಲು ಉತ್ಪಾದಕರ ಪ್ರೋತ್ಸಾಹಧನ ಧನ ಹಾಗೂ ಬೋನಸ್ ದುರುಪಯೋಗದ ಗಂಭೀರ ಆರೋಪ ಹೊತ್ತಿರುವ ನಿವೃತ್ತ ಕಾರ್ಯದರ್ಶಿ ಚಂದ್ರಯ್ಯರ ಪುತ್ರ ಜಯಂತ್ಗೆ ಕಾರ್ಯದರ್ಶಿ ಹುದ್ದೆ ನೀಡಿರುವುದು ಸರಿಯಲ್ಲ.
ಅವರಿಗೆ ಅನುಕೂಲವಾಗುವಂತೆ ಕಡತ ಸಿದಪಡಿಸಲಾಗಿದೆ ಎಂದು ಆರೋಪಿಸಿದರು. ಪೋ›ತ್ಸಾಹಧನ ಹಾಗೂ ಬೋನಸ್ ಅಕ್ರಮದ ಬಗ್ಗೆ ಆರೋಪ ಬಂದ ಸಂದರ್ಭದಲ್ಲಿ ತಂದೆ ಚಂದ್ರಯ್ಯ ರಕ್ಷಣೆಗೆ ಬಂದ ಪುತ್ರ ಜಯಂತ್ ಸಂಘದ ಕಚೇರಿ ಯಲ್ಲಿದ್ದ ಪೀಠೊಪಕರಣ ಧ್ವಂಸಗೊಳಿಸಿ, ಅಸಭ್ಯ ವಾಗಿ ವರ್ತಿಸಿದ್ದರು. ಕಾರ್ಯದರ್ಶಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಅವರನ್ನು ಕಾರ್ಯದರ್ಶಿಯಾಗಿ ನೇಮಿಸಿದರೆ ಇನ್ನಷ್ಟು ಅಕ್ರಮ ನಡೆಸುತ್ತಾರೆ. ಹೀಗಾಗಿ ಕೂಡಲೇ ಬೇರೆಯವರನ್ನು ನೇಮಕ ಮಾಡಬೇಕೆಂದು ಆಗ್ರಹಪಡಿಸಿದರು.
ಸಂಘದ ಮಾಜಿ ಅಧ್ಯಕ್ಷ ಕೆ.ಎಂ. ಗುರು, ಪುಟ್ಟಸಿದ್ದೇಗೌಡ, ಮಾಜಿ ನಿರ್ದೇಶಕ ವಿನೋದ್, ಮಾಜಿ ಸದಸ್ಯೆ ಚಿಕ್ಕತಾಯಮ್ಮ, ಪುಟ್ಟಲಿಂಗಮ್ಮ, ಕಮಲಮ್ಮ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.