ಹಕ್ಕು ಪತ್ರಕ್ಕೆ ಆಗ್ರಹಿಸಿ ಇರುಳಿಗರ ಪ್ರತಿಭಟನೆ
Team Udayavani, Feb 28, 2021, 12:04 PM IST
ರಾಮನಗರ: ಅರಣ್ಯ ಹಕ್ಕು ಕಾಯ್ದೆ – 2006ರ ಪ್ರಕಾರ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ, ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಇರುಳಿಗ ಸಮುದಾಯದ ಕುಟುಂಬಗಳು ಸತತ 6ನೇ ದಿನವೂ ವಾಸ್ತವ್ಯ ಮುಂದುವರೆಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಅಹೋರಾತ್ರಿ ವಾಸ್ತವ್ಯ ಹೂಡಿದ್ದು, ಅಲ್ಲೇ, ಅಡುಗೆ ಮಾಡಿ ನ್ಯಾಯಕ್ಕಾಗಿ ದಿನ ದೂಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣ ಮೂರ್ತಿ, ಕಳೆದ 8 ವರ್ಷಗಳಿಂದ ಅರಣ್ಯ ಭೂಮಿ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಜಿಲ್ಲಯಲ್ಲಿ ಬುಡಕಟ್ಟು ಜನಾಂಗದ ಮನವಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ರಾಷ್ಟ್ರೀಯ ಉದ್ಯಾನ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ವಾಸಿಸುವ ಜನರಿಗೆ ಬೇರೆ ಕಡೆ ಭೂಮಿ ನೀಡಿ, ಸ್ಥಳಾಂತರಿಸಬೇಕೆಂಬ ಆದೇಶವಿತ್ತು. ಇದನ್ನೇ ಅಸ್ತ್ರವಾಗಿ ಬಳಸಿ ಕೊಂಡು ಅರಣ್ಯ ಇಲಾಖೆ, ರಾಜ್ಯ ಮತ್ತು ಸಾಮಾನ್ಯ ಅರಣ್ಯ ಪ್ರದೇಶದಿಂದ ಬುಡಕಟ್ಟು ಜನಾಂಗದವರನ್ನು ಒಕ್ಕಲೆಬಿಸಲಾಗಿತ್ತು ಎಂದರು.
ಅರಣ್ಯ ಹಕ್ಕು ಕಾಯ್ದೆ – 2006 ಜಾರಿಗೆ ಬಂದಿದೆ. ಅರಣ್ಯ ಹಕ್ಕು ಕಾಯ್ದೆ ಸೆಕ್ಷನ್ 3(1)ಎಂ ಪ್ರಕಾರ ಹಿಂದೆ ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿ ಸಿರುವ ಜಾಗದಲ್ಲಿಯೇ, ಅರಣ್ಯ ಭೂಮಿ ಒಳಗೊಂಡಂತೆ ಅಲ್ಲಿಯೇ, ಪುನರ್ ವಸತಿಕಲ್ಪಿಸಲು ಅವಕಾಶವಿದ್ದರೂ, ಬುಡಕಟ್ಟು ಸಮುದಾಯಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.2019ರಲ್ಲಿ ಸರ್ವೋತ್ಛ ನ್ಯಾಯಾಲಯಬುಡಕಟ್ಟು ಜನಾಂಗಕ್ಕೆ ಕಾಯ್ದೆಯನ್ವಯ ಹಕ್ಕು ಪತ್ರ ಕೊಡುವಂತೆ ಸೂಚಿಸಿದೆ. ಅದಕ್ಕೂ ಅಧಿಕಾರಿಗಳು ಮನಣೆ ನೀಡುತ್ತಿಲ್ಲ. ಜಮೀನಿನ ಬದು, ಒರಳುಕಲ್ಲು, ಪೂಜಾ ಸ್ಥಳ 1993-94ರಲ್ಲಿ ರಾಮನಗರ ತಹಶೀಲ್ದಾರ್ ಕಚೇರಿ ಹಿಂಬರಹ, ಸ್ಮಶಾನ ಮುಂತಾದ ಸಾಕ್ಷಗಳಿ ದ್ದರೂ, ಮನವಿ ಪರಿಗಣಿಸುತ್ತಿಲ್ಲ ಎಂದರು.
ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಫೆ.23ರಂದು ಸ್ಥಳ ಪರಿಶೀಲಿಸಬೇಕಿತ್ತು. ಆದರೆ, ಬೆರಳೆಣಿಕೆಯಷ್ಟು ಮಂದಿ ಅಧಿಕಾರಿಗಳು ಮಾತ್ರ ಬಂದಿದ್ದರಿಂದ ತಮಗೆ ಮತ್ತೆ ನ್ಯಾಯ ದೊರಕುವುದು ಮರಿಚೀಕೆಯಾಗಿದೆ. ಹೀಗಾಗಿ ಮತ್ತೆ ಪ್ರತಿಭಟನೆ ಮುಂದುವರಿಯುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.