Suspended: ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅಮಾನತ್ತು
Team Udayavani, Feb 21, 2024, 12:14 PM IST
ರಾಮನಗರ: 40 ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಕೀಲರ ವಿರುದ್ಧ ದಾಖಲು ಮಾಡಿದ್ದ ಎಫ್ ಐಆರ್ ರದ್ದು ಮಾಡುವಂತೆ ವಕೀಲರ ಸಂಘ ಕಳೆದ ಮೂರೂ ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ ಇದಕ್ಕೆ ರಾಜಕೀಯ ನಾಯಕರೂ ಕೈಜೋಡಿಸಿದ್ದು ಸದನದಲ್ಲೂ ಈ ವಿಚಾರ ಮುನ್ನೆಲೆಗೆ ಬಂದಿತ್ತು ಇದರ ಮುಂದಿನ ಭಾಗವಾಗಿ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ವಕೀಲರು ಗುರುವಾರ ವಿಧಾನಸೌಧ ಚಲೋಗೆ ಸಿದ್ದತೆ ಮಾಡಿಕೊಂಡಿದ್ದರು.
ಇದರ ನಡುವೆ ವಿಧಾನ ಸಭೆಯಲ್ಲಿ ಗೃಹಸಚಿವ ಜಿ.ಪರಮೇಶ್ವರ್ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತು ಮಾಡಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಮೂರೂ ದಿನಗಳಿಂದ ನಡೆಯುತ್ತಿದ್ದ ವಕೀಲರ ಧರಣಿ ಕೊನೆಗೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವರು ವಿವಾದದ ಕೇಂದ್ರ ಬಿಂದು ವಾಗಿರುಗ ವಕೀಲ ಚಾನ್ ಪಾಷಾ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಪಿಎಸ್ ಐ ಅಮಾನತ್ತು ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಕೀಲರು ಸಂಭ್ರಮಾಚರಣೆ ನಡೆಸಿದರು.
ಇದನ್ನೂ ಓದಿ: Arrested: ಸಾಲ ವಸೂಲಿ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.