ರಾಹುಲ್ ಆಗಮನದಿಂದ ಕೈಗೆ ಶಕ್ತಿ
Team Udayavani, Apr 9, 2018, 4:13 PM IST
ಮಾಗಡಿ: ರಾಜ್ಯಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ 14, 15,16 ಹಾಗೂ 17ನೇ ವಾರ್ಡ್‌ನಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಕೊಟ್ಟಂತ ಗರಿಬೀ ಹಠವೋ, ಉಳುವವನೇ ಭೂ ಒಡೆಯ ಕಾನೂನು ಜಾರಿಗೆ ತರುವ ಮೂಲಕ ಬಡವರಿಗೆ ಭೂಮಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಕೊಟ್ಟಿದ್ದರು. ಒಮ್ಮೆ ಇಂದಿರಾ ಗಾಂಧಿ ಮಾಗಡಿಗೂ ಆಗಮಿಸಿದ್ದರು. ಅವರ ಕುಡಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ವಾರದಿಂದಲೂ ರಾಜ್ಯದಲ್ಲಿ ಮಿಂಚಿನ ಜನಾಶೀರ್ವಾದ ಯಾತ್ರೆ ನಡೆಸುವ ಮೂಲಕ ಯುವಶಕ್ತಿಗೆ ಹೆಚ್ಚಿನ ಶಕ್ತಿ ತುಂಬಿದ್ದಾರೆ ಎಂದರು.
ಈ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ. ಕಾಂಗ್ರೆಸ್ ಪಕ್ಷದಿಂದಲೇ ಬಡವರಿಗೆ ದೀನ ದಲಿತರಿಗೆ, ಶೋಷಿತರಿಗೆ ಸಾಮಾಜಿಕ ನ್ಯಾಯ ಸಿಗುವುದು. ಬೇರೆ ಯಾವ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷದಿಂದಲೂ ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ನಾಯಕರಿಗೆ ಟೀಕಿಸಿದರು.
ಕಾಂಗ್ರೆಸ್‌ಗೆ ಮತ್ತೆ ಅಧಿಕಾರ: ಕಾಂಗ್ರೆಸ್ ಪಕ್ಷ ಎಲ್ಲಾ ಜಾತಿ, ಧರ್ಮ ವರ್ಗದವರಿಗೂ ವಿಶೇಷ ಕಾರ್ಯಕ್ರಮಗಳನ್ನು ಕೊಟ್ಟಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಪಶುಭಾಗ್ಯ, ಕೃಷಿ ಭಾಗ್ಯ, ಆರೋಗ್ಯ ಭಾಗ್ಯ ಸೇರಿದಂತೆ ಹತ್ತಾರು ಜನಪರವಾದ ಕಾರ್ಯಕ್ರಮಗಳು ಜನಮನಸದಲ್ಲಿ ಅತ್ಛ ಅಳಿಯದಂತೆ ಉಳಿದಿವೆ. ಈ ಬಾರಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರ ಹಿಡಿದು ರಾಜ್ಯವನ್ನು ದೇಶದ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಕೆಲಸ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತೆ ಗೆಲುವು ಖಚಿತ: ಕ್ಷೇತ್ರದಲ್ಲಿ ನೂತನ ಪುರಸಭಾ ನೂತನ ಕಟ್ಟಡ, ಕೆಎಸ್‌ಆರ್‌ಟಿಸಿ ಡಿಪೋ, ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ಸರ್ಕಾರಿ ಕಚೇರಿ ಸಂಕೀರ್ಣ, ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿದ್ದು, ನಾಡಪ್ರಭು ಕೆಂಪೇಗೌಡ ಕೋಟೆ ಜೀರ್ಣೋದ್ಧಾರ, ಶಾದಿ ಮಹಲ್, ಸೋಮೇಶ್ವರಸ್ವಾಮಿ ದೇವಾಲಯ ಜಿರ್ಣೋದ್ಧಾರ, ಗೌರಮ್ಮನಕೆರೆ, ಹೊಂಬಾಳಮ್ಮನಕೆರೆ ಅಭಿವೃದ್ಧಿ,
ಮಂಚನಬೆಲೆ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸೇರಿದಂತೆ ಅನೇಕ ಜನಪರವಾದ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಮನ್ನಣೆ ಗಳಿಸಿದ್ದೇನೆ. ಆದ್ದರಿಂದಲೇ ಜನ ತನ್ನನ್ನು ನಾಲ್ಕು ಬಾರಿ ಶಾಸಕನನ್ನಾಗಿ ಮಾಡಿದ್ದಾರೆ. ಐದನೇ ಬಾರಿಯೂ ತನ್ನನ್ನು ಕಾಂಗ್ರೆಸ್ ಪಕ್ಷದಿಂದ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಎಚ್.ಸಿ.ಬಾಲಕೃಷ್ಣ ವ್ಯಕ್ತಪಡಿಸಿದರು.
ಹಾರ ತುರಾಯಿ ಸ್ವಾಗತ: ವಾರ್ಡ್‌ಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಭೇಟಿ ನೀಡುತ್ತಿದ್ದಂತೆ ಅಲ್ಲಲ್ಲಿ ಪಟಾಕಿ ಸಿಡಿಸಿ, ಹಾರ ಹಾಕಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವುದು ಮಜ್ಜಿಗೆ, ಪಾನಕ ಜೂಸ್ ವಿತರಿಸುವುದು ಸರ್ವೇ ಸಾಮಾನ್ಯವಾಗಿತ್ತು.
ವಿಎಸ್‌ಎಸ್‌ಎನ್ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ, ಪುರಸಭಾ ಮಾಜಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ನಾಗೇಂದ್ರ, ಸದಸ್ಯರಾದ ಮಂಡಿ ಗುರುಸ್ವಾಮಿ, ಪ್ರವೀಣ್, ರಿಯಾಜ್, ಮೂರ್ತಿ, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಎಂ.ಅರ್.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಎಸ್.ಕಾಂತರಾಜು, ಎಲ್.ನಂಜಯ್ಯ, ಕುಮಾರ್, ರಂಗನಾಥ್, ಶಿವರಾಜು, ಜಯರಾಂ, ವೆಂಟಕೇಶ್, ನಾಗೇಶ್, ರಾಜು, ವಿಜಯಕುಮಾರ್ ಇತರರು ಇದ್ದರು.
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಇಲ್ಲಿನ ಮತದಾರರು ಕಂಕಣ ಬದ್ಧರಾಗಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ. ತಾನು 20 ವರ್ಷಗಳ ಕಾಲ ಶಾಸಕನಾಗಿದ್ದುಕೊಂಡು ಜನರ ಆಶೋತ್ತರಗಳನ್ನು ಈಡೇರಿಸಿದ್ದೇನೆ
-ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.