ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ; ಶೀಘ್ರವೇ ನಿರ್ಮಾಣ ಕಾಮಗಾರಿ ಆರಂಭ: ಡಿಸಿಎಂ
Team Udayavani, Feb 10, 2021, 1:18 PM IST
ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಬುಧವಾರ ಬೆಳಿಗ್ಗೆ ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿದ ಅವರು, ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ರೈತರ ಹೋರಾಟ ಪ್ರತಿಷ್ಠೆ ಆಗದಿರಲಿ; ಪ್ರಧಾನಿ ಮೋದಿ ಇಂಟಲಿಜೆಂಟ್ ಶಾರ್ಪ್ ಮ್ಯಾನ್: ದೇವೇಗೌಡ
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉಪ ಮುಖ್ಯಮಂತ್ರಿ; ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.
ಭೂಮಿ ವರ್ಗಾಯಿಸಲಾಗಿದೆ:
ಈಗಾಗಲೇ 216 ಎಕರೆ ಭೂಮಿಯನ್ನು ಆರೋಗ್ಯ ವಿವಿಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರಕಾರಿ ಜಮೀನು. ಸ್ವಾಧೀನ ಮಾಡಿಕೊಂಡಿರವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ. ಸ್ಬಾಧೀನದಲ್ಲಿ ಇರುವ ಜಮೀನಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳನ್ನು ಆರಂಭಿಸಲು ಅವರೂ ಉತ್ಸುಕರಾಗಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಸಿ.ಪಿ.ಯೋಗೀಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಡಿ.ಕೆ. ಶಿವಕುಮಾರ್, ಅನಿತಾ ಕುಮಾರಸ್ವಾಮಿ, ಮಾಗಡಿ ಮಂಜುನಾಥ್ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲರೂ ಈ ಯೋಜನೆಯನ್ನು ಬೇಗ ಕಾರ್ಯಗತ ಮಾಡುವಂತೆ ಹೇಳುತ್ತಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರಕಾರದ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಶಾಸಕಿ ಅನಿತಾ ಕುಮಾರಸ್ವಾಮಿ, ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಮ್ಯಾಗ್ನೆಟ್ ಮ್ಯಾನ್ ಆಗಲು ಹುಚ್ಚು ಸಾಹಸ : ಈತನ ಹೊಟ್ಟೆಯಲ್ಲಿ ಸಿಕ್ಕಿದ್ದು ಏನು ಗೊತ್ತಾ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.