Politics: ಜಿಲ್ಲೆಯಲ್ಲೂ ರಾಮಮಂದಿರ ಪಾಲಿಟಿಕ್ಸ್‌


Team Udayavani, Jan 17, 2024, 2:39 PM IST

Politics: ಜಿಲ್ಲೆಯಲ್ಲೂ ರಾಮಮಂದಿರ ಪಾಲಿಟಿಕ್ಸ್‌

ರಾಮನಗರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಅಜೆಂಡಾದೊಂದಿಗೆ ಜಿಲ್ಲೆಯಲ್ಲಿ ಕಮಲ ಅರಳಿಸುವ ಉದ್ದೇಶದಿಂದ ಬಿಜೆಪಿ ಪಾಳಯ ಬಿಟ್ಟಿದ್ದ ರಾಮಾಸ್ತ್ರ ಗುರಿತಲುಪುವಲ್ಲಿ ವಿಫಲಗೊಂಡಿತ್ತು. ಇದೀಗ ಲೋಕಸಭಾ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ ರಾಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ದೇಶದಲ್ಲಿ ಇದೀಗ ರಾಮಮಂದಿರದ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ನಡುವೆಯೇ ರಾಮನಗರ ಜಿಲ್ಲೆಯಲ್ಲೂ ಮಂದಿರ ಪಾಲಿಟಿಕ್ಸ್‌ ಪ್ರಾರಂಭಗೊಂಡಿದೆ. ದೇಶದಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿದಿರುವ ಕಾಂಗ್ರೆಸ್‌ ಪಕ್ಷದ ಇಲ್ಲಿ ಜಿಲ್ಲೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡುತ್ತಿದ್ದು, ಇದು ರಾಜಕೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ.

ಏನಿದು ಮಂದಿರ ಪಾಲಿಟಿಕ್ಸ್‌: ಈ ಹಿಂದೆ ಕ್ಲೋಸ್‌ ಪೇಟೆ ಎಂದು ಕರೆಸಿಕೊಂಡಿದ್ದ ಇಂದಿನ ರಾಮನಗರಕ್ಕೆ ಮಾಜಿ ಸಿಎಂ ಕೆಂಗಲ್‌ ಹನುಮಂತಯ್ಯ ರಾಮನಗರ ಎಂದು ನಾಮಕರಣ ಮಾಡಿದ್ದರು. ಇದಕ್ಕೆ ಮುಖ್ಯಕಾರಣ ರಾಮ ಈ ಜಾಗದಲ್ಲಿ ಕೆಲಕಾಲ ನೆಲೆಸಿದ್ದ ಎಂಬುದು. ಇದರ ಸಾಕ್ಷಿಯಾಗಿ ರಾಮದೇವರ ಬೆಟ್ಟದಲ್ಲಿ ರಾಮನ ದೇವಾಲಯ ಕಟ್ಟಿ ಪೂಜಿಸಲಾಗುತ್ತಿದ್ದು, ರಾಮದೇವರ ಬೆಟ್ಟ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವೆನಿಸಿದೆ.

2023ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌, ರಾಮದೇವರ ಬೆಟ್ಟದ ತಪ್ಪಲಿನಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಘೋಷಿಸುವ ಜತೆಗೆ, 100 ರಿಂದ 120 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಭವನ ಕಟ್ಟುವುದಾಗಿ ನೀಲಕ್ಷೆಯನ್ನು ಬಿಡುಗಡೆ ಮಾಡಿದ್ದರು. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆಯನ್ನು ಮಾಡಲಾಗಿತ್ತು. ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲೂ ಸಂಗತಿ ಇತ್ತು. ಆದರೆ, ಜಿಲ್ಲೆಯಲ್ಲಿ ರಾಮಮಂದಿರದ ವಿಚಾರ ಬಿಜೆಪಿಗೆ ಟ್ರಂಪ್‌ಕಾರ್ಡ್‌ ಆಗಲೇ ಇಲ್ಲ. ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಮಮಂದಿರ ನಿರ್ಮಾಣ ಯೋಜನೆಯ ಬಗ್ಗೆ ಮೌನಕ್ಕೆ ಶರಣಾಗಿತ್ತು. ದೇಶದಲ್ಲಿ ರಾಮಮಂದಿರದ ವಿಷಯ ಸದ್ದುಮಾಡುತ್ತಿರುವ ಬೆನ್ನಲ್ಲೇ ಜಿಲ್ಲೆಯಲ್ಲಿ ಕಾಂಗ್ರೆಸ್‌ ಚುನಾಯಿತ ಪ್ರತಿನಿಧಿಗಳು ರಾಮನಗರದಲ್ಲಿ ನಾವೇ ರಾಮಮಂದಿರ ಕಟ್ಟುತ್ತೇವೆ ಎಂದು ಹೇಳುವ ಮೂಲಕ ಮಂದಿರ ಪಾಲಿಟಿಕ್ಸ್‌ಗೆ ಚಾಲನೆ ನೀಡಿದ್ದಾರೆ.

ಕೈ ಜನಪ್ರತಿನಿಧಿಗಳಿಂದ ರಾಮನ ಜಪ: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದರು. ಈ ಬಗ್ಗೆ ಜಾಗದ ಸರ್ವೇ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಬಿಜೆಪಿಯವರು ಏನೂ ಮಾಡಿಲ್ಲ, ನಮ್ಮ ಸರ್ಕಾರ ರಾಮಮಂದಿರ ನಿರ್ಮಾಣ ಮಾಡಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಇನ್ನು ಮಾಗಡಿ ಶಾಸಕ ಬಾಲಕೃಷ್ಣ ರಾಮಮಂದಿರ ಬಿಜೆಪಿಯವರ ಆಸ್ತಿಯಲ್ಲ, ಜನರಿಗೆ ಸೇರಿದ್ದು, ನಮ್ಮ ಪಕ್ಷ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಕಟ್ಟಲಿದೆ ಎಂದು ಪುನರುಚ್ಚರಿಸಿದ್ದಾರೆ.

ರಾಮಭಕ್ತರ ಸೆಳೆಯುವ ತಂತ್ರವೇ?: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಅಂತರ ಕಾಯ್ದು ಕೊಂಡಿರುವ ಕಾಂಗ್ರೆಸ್‌ ರಾಮನಗರದಲ್ಲಿ ಮಾತ್ರ ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಉತ್ಸಾಹ ತೋರುತ್ತಿದೆ. ಇದರ ಹಿಂದೆ ರಾಮಭಕ್ತರ ಮತಗಳು ಬಿಜೆಪಿಗೆ ಟ್ರಂಪ್‌ಕಾರ್ಡ್‌ ಆಗದಂತೆ ತಡೆಯುವ ತಂತ್ರಗಾರಿಕೆ ಅಡಕವಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಬಿಜೆಪಿ ಅಯೋಧ್ಯೆ ಮಂತ್ರಾಕ್ಷತೆಯನ್ನು ಮನೆಮನೆಗೆ ಹಂಚುವ ಕಾರ್ಯಕ್ರಮದ ಮೂಲಕ ರಾಮಭಕ್ತರ ಮನಗೆಲ್ಲುವ ತಂತ್ರವನ್ನು ಸದ್ದಿಲ್ಲದೆ ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ರಾಮಾಸ್ತ್ರವನ್ನು ಪ್ರಯೋಗಿಸಿದೆ.

ಕನಕೋತ್ಸವ ಮಾದರಿಯಲ್ಲಿ ರಾಮೋತ್ಸವ: ಇನ್ನೂ ಒಂದು ಹೆಜ್ಜೆ ಮುಂದೆ ಇರಿಸಲು ಸಿದ್ಧವಾಗಿರುವ ಕೈಪಾಳಯ ಫೆಬ್ರವರಿ ತಿಂಗಳಲ್ಲಿ ಕನಕಪುರದಲ್ಲಿ ಪ್ರತಿವರ್ಷ ಕನಕೋತ್ಸವ ನಡೆಸುವ ಮಾದರಿಯಲ್ಲಿ ರಾಮನಗರದಲ್ಲಿ 3 ದಿನಗಳ ಕಾಲ ರಾಮೋತ್ಸವ ನಡೆಸಲು ಸಿದ್ದತೆ ಮಾಡಿಕೊಂಡಿದೆ. ಈ ಮೂಲಕ ಜಿಲ್ಲೆಯ ಜನರಲ್ಲಿ ಕಾಂಗ್ರೆಸ್‌ ರಾಮನಪರ ಇದೆ ಎಂಬ ಸಂದೇಶವನ್ನು ರವಾನಿಸುವ ಮೂಲಕ ರಾಮಭಕ್ತರ ಮತಗಳು ಬಿಜೆಪಿ ಪಾಲಾಗುವುದನ್ನು ತಪ್ಪಿಸುವ ತಂತ್ರಗಾರಿಗೆ ಅಳವಡಿಸಿಕೊಂಡಿದೆ. ಒಟ್ಟಾರೆ ಬಿಜೆಪಿ ಪ್ರಯೋಗಿಸಿದ್ದ ರಾಮಬಾಣ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗುರಿತಪ್ಪಿತ್ತು. ಇದೀಗ ಕಾಂಗ್ರೆಸ್‌ ಇದೇ ಬಾಣವನ್ನು ಪ್ರಯೋಗಿಸುತ್ತಿದ್ದು, ಇದು ರಾಮಭಕ್ತರ ಮನೆಗಲ್ಲುವಲ್ಲಿ ಸಹಕಾರಿಯಾದೀತೆ ಎಂದು ಕಾದುನೋಡಬೇಕಿದೆ.

ದೇವರು ಧರ್ಮದ ಹೆಸರಿನಲ್ಲಿ ನಮ್ಮ ಪಕ್ಷ ಎಂದೂ ರಾಜಕೀಯ ಮಾಡುವುದಿಲ್ಲ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಈಭಾಗದ ಭಕ್ತರ ಆಸೆ, ಅದನ್ನು ಈಡೇರಿಸುವುದಾಗಿ ನಾವು ಮಾತು ಕೊಟ್ಟಿದ್ದೆವು. ಅದನ್ನು ಕಾರ್ಯಗತ ಗೊಳಿಸಲು ಮುಂದಾಗಿದ್ದೆವು. ಚುನಾವಣೆ ಸಮೀಪ ಬಂದಾಗ ರಾಮಮಂದಿರ ಕಟ್ಟುತ್ತೇವೆ ಎನ್ನುವ ಕಾಂಗ್ರೆಸ್‌ ಶಾಸಕರು, ಸಂಸದರು, ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಯಾಕೆ ಹಿಂದಕ್ಕೆ ಪಡೆದರು. ● ಎಂ.ಎನ್‌.ಆನಂದಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ

ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಏನು ಮಾಡಿದ್ದರೋ ಗೊತ್ತಿಲ್ಲ. ಆ ಜಾಗ ಮೀಸಲು ಅರಣ್ಯ ಪ್ರದೇಶಕ್ಕೆ ಸೇರಿದ್ದು, ಮುಜರಾಯಿ ಇಲಾಖೆಗೆ ಎಷ್ಟು ಜಾಗ ಸಿಗುತ್ತದೆ ಎಂಬುದನ್ನು ಸರ್ವೇಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಮಾಹಿತಿ ದೊರೆತ ತಕ್ಷಣ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ● ಡಿ.ಕೆ.ಸುರೇಶ್‌, ಸಂಸದ.

ರಾಮ ಯಾವೊಂದು ಪಕ್ಷದ ಆಸ್ತಿಯಲ್ಲ, ಶಾಸಕ ಇಕ್ಬಾಲ್‌ ಹುಸೇನ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ರಾಮದೇವರ ಬೆಟ್ಟದಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ 20 ಎಕರೆ ಜಾಗ ಗುರುತಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚೆಮಾಡಿದ್ದು, ಚರ್ಚೆ ಸಮಯದಲ್ಲಿ ನಾನೂ ಜತೆಯಲ್ಲಿದ್ದೆ. ರಾಮನಗರದಲ್ಲಿ ರಾಮಮಂದಿರವನ್ನು ನಮ್ಮ ಸರ್ಕಾರ ನಿರ್ಮಾಣ ಮಾಡಲಿದೆ. ● ಎಚ್‌ .ಸಿ.ಬಾಲಕೃಷ್ಣ, ಶಾಸಕ, ಮಾಗಡಿ.

ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಕಾಂಗ್ರೆಸ್‌ ಪಕ್ಷ ಸಿದ್ಧವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಸಚಿವರ ಜತೆ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು. ● ಇಕ್ಬಾಲ್‌ ಹುಸೇನ್‌, ರಾಮನಗರ ಶಾಸಕ

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.