ಡಿಕೆ-ಎಚ್‌ಡಿಕೆ ಕೋಟೆಯಲ್ಲಿ ರಾಮಮಂದಿರ ಜಪ


Team Udayavani, Feb 18, 2023, 12:23 PM IST

tdy-8

ರಾಮನಗರ: ದಕ್ಷಿಣ ಭಾರತದ ಮಟ್ಟಿಗೆ ಬಿಜೆಪಿಗೆ ಹೆಬ್ಬಾಗಿಲು ಆಗಿರುವ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಅಲಂಕರಿಸಲೇಬೇಕೆಂಬ ಹಠಕ್ಕೆ ಬಿದ್ದಿರುವ ಕೇಸರಿ ಪಕ್ಷ, ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದು, ಮುಂಬರುವ ಚುನಾವಣೆ ಸೇರಿದಂತೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಾಜಕೀಯ ವಾಕ್ಸಮರಕ್ಕೆ ಅಣಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ವಿಧಾನಸಭೆ ಚುನಾವಣೆಗೆ ದಿನಗಣನೆ ಇರುವಾಗಲೇ ರಾಮನಾಮ ಜಪಿಸುವ ಮೂಲಕ ಜಿಲ್ಲೆಯಲ್ಲೇ ತಮ್ಮದೇಯಾದ ಹಿಡಿತ ಹೊಂದಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತವರು ಜಿಲ್ಲೆಯಲ್ಲಿ ಬಿಜೆಪಿ ಹೊಸ ದಾಳ ಉರುಳಿಸಿದೆ.

ಅಸ್ತಿತ್ವಕ್ಕಾಗಿ ಬಿಜೆಪಿ ಹರಸಾಹಸ: ರಾಮ ಜಪದ ಮೂಲಕ ಚುನಾವಣೆಯಲ್ಲಿ ಹಿಂದುತ್ವದ ಮೂಲಕ ಹಿಡಿತ ಸಾಧಿಸುವ ಯೋಚನೆಯನ್ನ ಬಜೆಟ್‌ನಲ್ಲಿ ಬಿಜೆಪಿ ಬಿಟ್ಟುಕೊಟ್ಟಿಲ್ಲ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿಗಳ ಕೇಂದ್ರ ಸ್ಥಾನವೆಂದೇ ಹೇಳಲಾಗುವ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಯೋಜನೆಗಳ ಮಹಾಪೂರವನ್ನೇ ಹರಿಸಬಹುದು, ಆ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಟಾಂಗ್‌ ನೀಡಿ ಬಿಜೆಪಿ ಅಭ್ಯರ್ಥಿ ಮತ್ತು ನಾಯಕರ ಬೆನ್ನಿಗೆ ನಿಲ್ಲುವ ನಿರೀಕ್ಷೆ ಹೊಂದಲಾಗಿತ್ತು. ಆದರೆ, ಅದೆಲ್ಲವು ಹುಸಿಯಾಗುವ ಮೂಲಕ ಜಿಲ್ಲೆಗೆ ನಿರಾಸೆ ಮೂಡಿಸಿದೆ.

ಬಿಜೆಪಿ ಕಾರ್ಯಕರ್ತರಿಗೆ ಬೇಸರ: ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿಯೇ ತೀರುತ್ತೇವೆ ಎಂದು ಸವಾಲುಗಳ ಮೇಲೆ ಸವಾಲು ಹಾಕುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್‌ ಹಾಗೂ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕರಾದ ಸಿ.ಪಿ.ಯೋಗೇಶ್ವರ್‌ ಅವರ ನಿರೀಕ್ಷೆಯಂತೆ ಜಿಲ್ಲೆಗೆ ಯೋಜನೆಗಳ ಮಹಾಪೂರ ಹರಿಸಿ ಎದುರಾಳಿ ಪಕ್ಷದ ಹೈಕಮಾಂಡ್‌ ಎಂದೇ ಬಿಂಬಿತವಾಗಿರುವ ಎಚ್‌ಡಿಕೆ ಮತ್ತು ಡಿಕೆ ಬ್ರದರ್ನ್ನು ಕಟ್ಟಿ ಹಾಕುವ ಯಾವುದೇ ಪ್ರಯತ್ನ ನಡೆಸಿಲ್ಲ ಎಂಬುದು ಕಾರ್ಯಕರ್ತರಿಗೆ ಬೇಸರಕ್ಕೆ ಕಾರಣ ಎನ್ನಲಾಗಿದೆ. ರಾಮನಗರದ ಐತಿಹಾಸಿಕ ಪ್ರಸಿದ್ಧ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಮೂಲಕ ದಕ್ಷಿಣ ಅಯೋಧ್ಯೆ ನಿರ್ಮಾಣವಾಗಿಸುವ ಕನಸು ಬಿಜೆಪಿಗರದ್ದಾಗಿದೆ.

ರಾಮದೇವರ ಬೆಟ್ಟಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಸ್ವಯಂ ಶ್ರೀರಾಮಚಂದ್ರ ಅಣತಿಯಂತೆ ವಿಶ್ವಕರ್ಮರು ಕೋದಂಡ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ ಎನ್ನುವ ಐತಿಹ್ಯವಿದೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ರಾಮನ ಜಪ ಮಾಡುತ್ತಿದೆ ಎನ್ನುವ ಆರೋಪಗಳ ನಡುವೆ ರಾಮ ಮಂದಿರ ನಿರ್ಮಾಣ ಘೋಷಣೆ ಮೂಲಕ ಸರ್ಕಾರ ತನ್ನ ಹೇಳಿಕೆಗೆ ಅಧಿಕೃತ ಮುದ್ರೆ ಒತ್ತಿದೆ. ಆದರೆ, ಇದಕ್ಕೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬುದು ಬಜೆಟ್‌ ತಿಳಿಸದಿದ್ದು, ರಾಮಮಂದಿರ ನಿರ್ಮಾಣಕ್ಕೆ ಅನುದಾನದ ಮಹಾಪೂರವೇ ಹರಿಯಲಿದೆ ಎನ್ನವ ನಂಬಿಕೆ ಸ್ಥಳೀಯರದ್ದು .

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಇರುವಾಗ ಮಂಡನೆ ಮಾಡಿದ ಬಜೆಟ್‌ ಇದಾಗಿದ್ದು, ಇದಕ್ಕೆ ಯಾವುದೇ ರೀತಿಯ ಮಹತ್ವ ಇಲ್ಲ. ಮೇ ತಿಂಗಳಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಏಪ್ರಿಲ್‌, ಮೇ ತಿಂಗಳನಲ್ಲಿ ಸಂಬಳ ಕೊಡಲು ಬಜೆಟ್‌ ಮಂಡನೆ ಮಾಡಿದ್ದಾರೆ. ರಾಮಮಂದಿರ ಘೋಷಣೆ ಮಾಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರಲ್ಲ, ನನ್ನದೇ ಸರ್ಕಾರ, ನಾನೇ ರಾಮಮಂದಿರವನ್ನು ಪೂರ್ಣಗೊಳಿಸುತ್ತೇನೆ. ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ರಾಮಮಂದಿರ ನಿರ್ಮಾಣ ಬಿಜೆಪಿ ಆದ್ಯತೆಯಾಗಿದ್ದು, ಚುನಾವಣೆ ಇದೆ ಎನ್ನುವ ಕಾರಣಕ್ಕಲ್ಲ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸದಾ ಕೆಲಸ ಮಾಡುತ್ತಿದ್ದು, ಚುನಾವಣೆ ಬಣ್ಣ ಕಟ್ಟುವುದು ಬೇಡ. ರಾಮಮಂದಿರ ನಿರ್ಮಾಣ ಐತಿಹಾಸಿಕ ನಿರ್ಮಾಣದ ನಿರ್ಧಾರ ಸ್ವಾಗತಾರ್ಹವಾಗಿದೆ. ಹುಲುವಾಡಿ ದೇವರಾಜ್‌, ಬಿಜೆಪಿ ಜಿಲ್ಲಾಧ್ಯಕ್ಷ

-ಎಂಎಚ್‌.ಪ್ರಕಾಶ್‌, ರಾಮನಗರ

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-by-Poll

By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್‌.ಡಿ.ಕುಮಾರಸ್ವಾಮಿ

DK-Shivakuamar

By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

HDK-election

By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Nikhil—Somanna

By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

CPY-1

By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.