Ramanagar; ಈಜಲು ಹೋಗಿ ನೀರು ಪಾಲಾದ ಬಾಲಕ: ಹೆದರಿ ಓಡಿದ ಸ್ನೇಹಿತರು
Team Udayavani, Aug 14, 2023, 6:02 PM IST
ರಾಮನಗರ: ಸ್ನೇಹಿತರ ಜೊತೆ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರುಪಾಲಾದ ಘಟನೆ ರಾಮನಗರ ತಾಲ್ಲೂಕಿನ ದ್ಯಾವರಸನೇಗೌಡನದೊಡ್ಡಿ ಬಳಿ ನಡೆದಿದೆ.
ಮೃತ ಬಾಲಕನನ್ನು ರಾಮನಗರ ಟೌನ್ ನ ವಿನಾಯಕನಗರ ನಿವಾಸಿ ಕಿಶೋರ್ (14 ವರ್ಷ) ಎಂದು ಗುರತಿಸಲಾಗಿದೆ. ಎಂಟನೇ ತರಗತಿ ಓದುತ್ತಿದ್ದ ಕಿಶೋರ್ ರವಿವಾರ ಮಧ್ಯಾಹ್ನ ಸ್ನೇಹಿತರ ಜೊತೆ ಈಜಲು ಹೋಗಿದ್ದ.
ಅರ್ಕಾವತಿ ನದಿಯಲ್ಲಿ ಈಜುತ್ತಿದ್ದ ಕಿಶೋರ್ ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತು ಭಯದಲ್ಲಿ ಜಾಗ ಖಾಲಿ ಮಾಡಿದ್ದರು. ಕಿಶೋರ್ ಮನೆಯವರಿಗೂ ವಿಚಾರ ತಿಳಿಸಿರಲಿಲ್ಲ. ಇತ್ತ ಮಗನಿಗಾಗಿ ಹುಡುಕಾಡಿದ್ದ ಪೋಷಕರು ಮಗ ಕಾಣೆಯಾಗಿದ್ದಾನೆ ಎಂದು ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದು ಬೆಳಿಗ್ಗೆ ಕಿಶೋರ್ ಬಗ್ಗೆ ಸ್ನೇಹಿತರ ಬಳಿ ಪೊಲೀಸರು ವಿಚಾರಿಸಿದಾಗ ನೀರಿನಲ್ಲಿ ಮುಳುಗಿ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದರು.
ಇದನ್ನೂ ಓದಿ:FIR .. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ: ಉಪ್ಪಿ ಮಾರ್ಮಿಕ ಟ್ವೀಟ್
ಹೀಗಾಗಿ ಅರ್ಕಾವತಿ ನದಿಯಲ್ಲಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದಾಗ ಕಿಶೋರ್ ಮೃತ ದೇಹ ಪತ್ತೆಯಾಗಿದೆ.
ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.