Ramanagara; ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ; ಪೊಲೀಸ್ ಬಂದೋಬಸ್ತ್
Team Udayavani, Feb 19, 2024, 2:39 PM IST
ರಾಮನಗರ: ಸುಳ್ಳು ಎಫ್ಐಆರ್ ದಾಖಲು ಮಾಡಿರುವ ಪಿಎಸ್ಐ ಅಮಾನತ್ತು ಮಾಡುವಂತೆ ಆಗ್ರಹಿಸಿ ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ ನಡೆಯುತ್ತಿದ್ದು, ಕೋರ್ಟ್ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿದ್ದು, ಡಿಸಿ ಕಚೇರಿವರೆಗೆ ನಡೆಯಲಿದೆ.
40 ವಕೀಲರ ಮೇಲೆ ರಾಮನಗರದ ಐಜೂರು ಠಾಣೆಯಲ್ಲಿ ಎಫ್ಐಆರ್ ದಾಖಲು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪಿಎಸ್ಐ ತನ್ವೀರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದರ್ಶ್ ಅಗರ್ವಾಲ್, ಬೆಂಗಳೂರು ಪರಿಷತ್ ಅಧ್ಯಕ್ಷ ವಿಶಾಲ್ ರಘು ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಗುತ್ತಿದ್ದು, ಸಾವಿರಾರು ವಕೀಲರು ಭಾಗಿಯಾಗಿದ್ದಾರೆ,
ಪ್ರತಿಭಟನೆ ಸಂಬಂಧ ಹೈ ಅಲರ್ಟ್ ಆಗಿರುವ ಜಿಲ್ಲಾ ಪೊಲೀಸರು, ಅಹಿತಕರ ಘಟನೆ ನಡೆಯದಂತೆ 900 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತಾ ಕಾರ್ಯಕ್ಕೆ ಓರ್ವ ಎಸ್ಪಿ, ಇಬ್ಬರು ಎಎಸ್ಪಿ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ. ಮೂರು ಮಂದಿ ಡಿವೈಎಸ್ಪಿ, 13 ಮಂದಿ ಸಿಪಿಐ, 45 ಪಿಎಸ್ಐ, 60 ಎಎಸ್ಐ, 700 ಮಂದಿ ಪೊಲೀಸ್ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಮೂರು ತುಕಡಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಎರಡು ತುಕಡಿ ಕೆಎಸ್ಆರ್ ಪಿ ಪಡೆ ನಿಯೋಜನೆ ಮಾಡಲಾಗಿದೆ. ಚಲನ ವಲನಗಳ ಕಣ್ಗಾವಲಿನ ಉದ್ದೇಶಕ್ಕೆ 40 ಹ್ಯಾಂಡಿಕ್ಯಾಮ್, 2 ಡ್ರೋಣ್, 100 ಕ್ಯಾಮರಾ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.