ಬಾಲಕಿ ಅತ್ಯಾಚಾರ ಆರೋಪಿಗೆ ಗಲ್ಲು ಶಿಕ್ಷೆ

Team Udayavani, Jan 25, 2018, 6:00 AM IST

court 600.jpg

ರಾಮನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಂದು ಹಾಕಿದ್ದ ಆರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಂಗಳೂರಿನ ಗೋರಿಪಾಳ್ಯದ ನಿವಾಸಿ ಸಲೀಂ (35) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2012ರಲ್ಲಿ ತಾವರಕೆರೆಯ ಜನತಾ ಕಾಲೋನಿಯ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ. ಅತ್ಯಾಚಾರಕ್ಕೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು  50 ಸಾವಿರ ದಂಡ ವಿಧಿಸಿರುವ ನ್ಯಾಯಾಲಯ ಕೊಲೆ ಮಾಡಿದ್ದಕ್ಕೆ ಮರಣ ದಂಡನೆ ವಿಧಿಸಿದೆ.
2012ರ ಆಗಸ್ಟ್‌ 15ರಂದು ಸಲೀಂ ಬೆಂಗಳೂರು ದಕ್ಷಿಣ ತಾಲೂಕು ತಾವರಕೆರೆಯ ಜನತಾ ಕಾಲೋನಿಯಲ್ಲಿ ವಾಸವಿರುವ ತನ್ನ ಸಹೋದರಿ ಮನೆಗೆ ಬಂದಿದ್ದ. ಆದರೆ, ಆತನ ಸಹೋದರಿ ತವರು ಮನೆಗೆ ತೆರಳಿದ್ದರು.

ಅದೇ ಮನೆಯಲ್ಲಿಯೇ ಉಳಿದುಕೊಂಡಿದ್ದ ಸಲೀಂ, ಸಂಜೆ ಪಕ್ಕದ ಮನೆಯ ಬಾಲಕಿಗೆ ಹಣ ಕೊಟ್ಟು ಬೀಡಿ ತರಲು ಅಂಗಡಿಗೆ ಕಳುಹಿಸಿದ್ದಾನೆ. ಆ ಬಾಲಕಿ ಬೀಡಿ ತೆಗೆದುಕೊಂಡು ಮನೆಗೆ ವಾಪಸ್‌ ಬಂದಾಗ ಸಲೀಂ ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿದ್ದಾನೆ. ನಂತರ  ಪರಾರಿಯಾಗಲು ಯತ್ನಿಸಿದ ಆತನನ್ನು  ಸ್ಥಳೀಯರು  ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ತಾವರೆಕೆರೆಯ ಇನ್ಸ್‌ ಪೆಕ್ಟರ್‌ ರವಿ ಆರೋಪ ಪಟ್ಟಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬುಧವಾರ ತೀರ್ಪು ಮತ್ತು ಶಿಕ್ಷೆ ಪ್ರಮಾಣ ಘೋಷಿಸಿದ್ದಾರೆ.

ಇಟ್ಟಿಗೆ ಎಸೆದ
ನ್ಯಾಯಾಧೀಶರು ಪ್ರಕಟಿಸಿದ ಶಿಕ್ಷೆ ಪ್ರಮಾಣ ಕೇಳಿ ಸಲೀಂ ವಿಚಲಿತನಾಗಿದ್ದ. ಪೊಲೀಸರು ಆತನನ್ನು ನ್ಯಾಯಾಲಯದಿಂದ ಹೊರಕ್ಕೆ ಕರೆತಂದ ವೇಳೆ  ಮಾಧ್ಯಮ ಪ್ರತಿನಿಧಿಗಳು ಸರ್ಕಾರಿ ಅಭಿಯೋಜಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದನ್ನು  ಕಂಡು ಕೋಪಗೊಂಡು ಕಲ್ಲೊಂದನ್ನು ಮಾಧ್ಯಮಗಳ ಪ್ರತಿನಿಧಿಗಳತ್ತ ತೂರಿದ್ದಾನೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.