ರಾಯಣ್ಣ ಅಪ್ರತಿಮ ವೀರ
Team Udayavani, Jan 27, 2020, 5:41 PM IST
ಮಾಗಡಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜೀವ ತೆತ್ತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ತಾಲೂಕು ಅಧ್ಯಕ್ಷ ಎಂ.ಸಿ.ರಾಜಣ್ಣ ತಿಳಿಸಿದರು.
ಮಾಗಡಿ ಪಟ್ಟಣದ ಕುರುಬರ ಸಂಘದ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತ್ಮಾತ ದಿನದ ಪ್ರಯುಕ್ತ ಸಂಗೊಳ್ಳಿ ರಾಯಣ್ಣ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ರಕ್ತದ ಕಣಕಣದಲ್ಲಿ ದೇಶ ಪ್ರೇಮ, ದೇಶಭಕ್ತಿ ತುಂಬಿತ್ತು. ಕಿತ್ತೂರು ರಾಣಿ ಚೆನ್ನಮ್ಮ ಸೇನೆಯ ಅಧಿಪತಿ ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರ. ಬೆಳಗಾವಿ ಜಿಲ್ಲೆ ಬೈರಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣ ಕುರುಬ ಸಮಾಜದಲ್ಲಿ ಹುಟ್ಟಿದವನು. ಕೇವಲ 32 ವರ್ಷಗಳ ಕಾಲ ಬದುಕಿ ವೀರ ಮರಣ ಹೊಂದಿದ್ದು, ನಮ್ಮೆಲ್ಲರ ದುರಂತ. ಅವರಂತೆ ನಾವೆಲ್ಲರೂ ದೇಶಭಕ್ತಿ, ದೇಶಪ್ರೇಮ ಬೆಳೆಸಿಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸುಭದ್ರ ರಾಷ್ಟ್ರ ಕಟ್ಟೋಣ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಶಿವಕುಮಾರ್ ಮಾತನಾಡಿ, ಬಡವರ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದ ಬ್ರಿಟಿಷರ ವಿರುದ್ಧವೇ ಸಿಡಿದು ನಿಂತ ಕ್ರಾಂತಿಕಾರ ವೀರ ಸಂಗೊಳ್ಳಿ ರಾಯಣ್ಣ, ಗೆರಿಲ್ಲಾ ಯುದ್ಧ ದ ಹರಿಕಾರ ಎಂದೇ ಖ್ಯಾತಿಹೊಂದಿದ್ದ ರಾಯಣ್ಣನ ಸಾಧನೆ, ದೇಶ ಸೇವೆ ಅಪ್ರತಿಮವಾದುದು ಎಂದು ಹೇಳಿದರು.
ಸಂಘದ ಕಾರ್ಯಾಧ್ಯಕ್ಷ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಎಚ್.ಆರ್. ಮಂಜುನಾಥ್, ನಿರ್ದೇಶಕರಾದ ಯಶೋಧಮ್ಮ, ರಾಜಣ್ಣ, ಚೆನ್ನರಾಜು, ಬಿರೇಶ್, ನಿರಂಜನ್ ಉಮಾಶೆಂಕರ್, ಶಿವರಾಜು, ಬಲರಾಮು, ರಕ್ಷಿತ್, ಶಿವ ಪ್ರಸಾದ್, ವಕೀಲ ರಾಜಯ್ಯ, ಎಚ್. ಆರ್.ರುದ್ರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.