ಶೀಘ್ರ ಕಸ ವಿಲೇವಾರಿಗೆ ಗ್ರಾಮಸ್ಥರ ಮನವಿ
ಬೆಳಗುಂಬ ಗ್ರಾಮ ಪಂಚಾಯ್ತಿ ಗಮನಕ್ಕೆ
Team Udayavani, May 13, 2019, 3:47 PM IST
ಮಾಗಡಿ: ತಾಲೂಕಿನ ಕಸಬಾ ಹೋಬಳಿ ಪಣಕನಕಲ್ಲು ಗ್ರಾಮದ ಶಾಲೆ ಸಮೀಪದ ಸಣ್ಣ ನೀರಿನ ಟ್ಯಾಂಕ್ ಬಳಿ ರಾಶಿ ಕಸದಿಂದಾಗಿ ದುರ್ನಾತ ಬರುತ್ತಿದೆ. ಆದರೆ ಇದಕ್ಕೆ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದು, ಶೀಘ್ರ ಕಸ ವಿಲೇವಾರಿ ಮಾಡಬೇಕೆಂದು ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ. ಬೆಳಗುಂಬ ಗ್ರಾಪಂ ಪಿಡಿಒ ನಿರ್ಲಕ್ಷ್ಯ ಧೋರಣೆ ವ್ಯಕ್ತಿಯಾಗಿದ್ದಾರೆ. ನೀರು ಪೂರೈಕೆ ಯಾಗುತ್ತಿರುವ ಕುಡಿಯುವ ನೀರಿನ ಸಣ್ಣ ಟ್ಯಾಂಕ್ ಬಳಿ ಕಸ ಸುರಿಯುತ್ತಿದ್ದರೂ ಪಿಡಿಒ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಣ್ಣ ಟ್ಯಾಂಕ್ ಮತ್ತು ಶಾಲೆ ಬಳಿಯೇ ಕಸರಾಶಿ ರಾಶಿ ಬೀಳುತ್ತಿದ್ದರೂ ಪಿಡಿಒ ಎಚ್ಚೆತ್ತುಕೊಂಡಿಲ್ಲ. ಅಲ್ಲದೆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯ ಒದಗಿಸು ವಲ್ಲಿ ವಿಫಲರಾಗಿ ದ್ದಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಗ್ರಾಮದ ಅಭಿವೃದ್ಧಿಯನ್ನು ಹೇಗೆ ನಿರೀಕ್ಷಿಸುವುದು? ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟ ತಾಪಂ ಇಒ ಹಾಗೂ ಜಿಪಂ ಸಿಇಒ ಸ್ಥಳಕ್ಕೆ ಭೇಟಿ ನೀಡಿ, ಕಸ ವಿಲೇವಾರಿ ಮಾಡಿಸಿ, ಕುಡಿಯುವ ನೀರಿನ ವ್ಯವಸ್ಥಿತ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಪಿಡಿಒ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
● ರಾಜಣ್ಣ, ಗಿರೀಶ್, ನಾಗರಾಜು, ಪಣಕನಕಲ್ಲು ನಿವಾಸಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.