ಬೆಂಬಲ ಬೆಲೆಗೆ ರಾಗಿ ಖರೀದಿ ಪುನಾರಂಭಿಸಿ


Team Udayavani, Feb 11, 2022, 12:22 PM IST

ಬೆಂಬಲ ಬೆಲೆಗೆ ರಾಗಿ ಖರೀದಿ ಪುನಾರಂಭಿಸಿ

ಮಾಗಡಿ: ರೈತರ ಬೆಳೆದಿರುವ ರಾಗಿಯನ್ನು ಖರೀದಿ ಮಾಡಬೇಕು. ಸರ್ಕಾರ ಸಣ್ಣ, ದೊಡ್ಡ ರೈತರೆಂದು ತಾರತಮ್ಯ ಮಾಡಬಾರದು ಎಂದು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ನೇತೃತ್ವದಲ್ಲಿ ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲೂಕಿನ ಸೋಮೇಶ್ವರಸ್ವಾಮಿ ವೃತ್ತದಲ್ಲಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಬೆಂಬಲ ಬೆಲೆಗೆ ರಾಗಿಖರೀದಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿ ರಸ್ತೆತಡೆ ಪ್ರತಿಭಟನಾ ಧರಣಿ ನಡೆಸಿದರು. ತಾಲೂಕಿನ ಪ್ರಮುಖ ಬೆಳೆ ರಾಗಿ. ಸರ್ಕಾರಿ ಇಂತಿಷ್ಟು ರಾಗಿ ಖರೀದಿಸಿದ್ದು, ಜ.21ರಿಂದಲೇ ಖರೀದಿ ನಿಲ್ಲಿಸಿದೆ. ಕೂಡಲೆ ಸರ್ಕಾರ ಬೆಂಬಲ ಬೆಲೆಗೆ ರಾಗಿ ಖರೀದಿ ಮುಂದುವರೆಸಬೇಕೆಂದು ಒತ್ತಾಯಿಸಿದರು.

ಸಣ್ಣ, ದೊಡ್ಡ ರೈತರೆಂಬ ತಾರತಮ್ಯ ಬಿಡಿ: ಬಹುತೇಕ ರೈತರು ಈಗ ರಾಗಿ ಕಣ ಮಾಡುತ್ತಿ ರುವುದು. ಈ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆಗೆ ಮಾರಾಟಮಾಡಲಾಗದ ಪರಿಸ್ಥಿತಿಯಲಿ Éದ್ದಾರೆ. ಸಣ್ಣ ರೈತರುಬೆಳೆದ ರಾಗಿ ತಮ್ಮ ಕುಟುಂಬಕ್ಕೆ ಇಟ್ಟುಕೊಂಡು ಉಳಿದರಾಗಿಯನ್ನು ಮಾರಾಟ ಮಾಡುತ್ತಾರಷ್ಟೆ. ಆದರೆ ದೊಡ್ಡರೈತರು ಬೆಳೆದ ಅಷ್ಟು ರಾಗಿಯನ್ನು ಅವರೇಊಟಮಾಡಲಾಗು ತ್ತದೆಯೇ ಎಂದು ಪ್ರಶ್ನಿಸಿದ ಅವರು, ದೊಡ್ಡ ರೈತರು ಬೆಳೆದ ರಾಗಿಯನ್ನು ಸಹ ಸರ್ಕಾರಬೆಂಬಲ ಬೆ ಲೆಗೆ ಖರೀದಿಸಬೇಕು. ರಾಗಿ ಖರೀದಿ ವಿಚಾರದಲ್ಲಿ ದೊಡ್ಡ ಮತ್ತು ಸಣ್ಣ ರೈತರೆಂದು ತಾರತಮ್ಯಮಾಡಬಾರದು. ಎಲ್ಲರನ್ನು ರೈತರೆಂದೇ ಪರಿಗಣಿಸಬೇಕು.ಆಕಾಶದ ಮಳೆ, ಭೂಮಿ ಬೆಳೆ ನಂಬಿ ರೈತರು ಬದುಕುಕಟ್ಟಿಕೊಂಡಿರುವುದು. ಪ್ರಕೃತಿ ವಿಕೋಪದಂತಹ ಕಷ್ಟಗಳನ್ನು ಎದುರಿಸುತ್ತಿದ್ದೇವೆ. ಇಂಥ ಪರಿಸ್ಥಿತಿಯಲ್ಲಿ ರಾಗಿ ಖರೀದಿ ವಿಚಾರವಾಗಿ ಸರ್ಕಾರ ಮಧ್ಯ ಪ್ರವೇಶಿರಾಗಿ ಖರೀದಿ ಮಾಡಬೇಕೆಂದು ಒತ್ತಾಯಿಸಿದರು.

ಡೀಸಿಗೆ ಶಿಫಾರಸ್ಸು: ರಸ್ತೆ ತಡೆ ಪ್ರತಿಭಟನಾಕಾರರ ಸ್ಥಳಕ್ಕೆ ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಭೇಟಿ ನೀಡಿ ಮಾತನಾಡಿದ ಅವರು, ರೈತರು ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಶಿಫಾರಸ್ಸುಮಾಡಲಾಗಿದೆ. ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ರೈತರ ರಾಗಿ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ರೈತರಲ್ಲಿ ವಿಶ್ವಾಸ ಮೂಡಿಸಿದ ಅವರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾದರು.

ಸುಮಾರು ಅರ್ಧಗಂಟೆಗಳ ಕಾಲ ರಸ್ತೆ ತಡೆಯಾಗಿತ್ತು. ಇದರಿಂದ ಸಂಚಾರ ಅಸ್ತವ್ಯಸ್ಥ ಉಂಟಾಗಿತ್ತು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ಸುಗಮಸಂಚಾರಕ್ಕೆ ಕ್ರಮ ವಹಿಸಿದ್ದರು. ರೈತ ಸಂಘದಕಾರ್ಯದರ್ಶಿ ರವಿ ಕುಮಾರ್‌, ಹನುಮಂತರಾಯಪ್ಪ,ನಾರಾಯಣಪ್ಪ, ಶಿವಣ್ಣ, ಕುಮಾರ್‌, ರಮೇಶ್‌, ಸುರೇಶ್‌ಬುಡಾನ್‌ಸಾಬ್‌, ಗಂಗಯ್ಯ ಸೇರಿದಂತೆ ನೂರಾರು ರೈತರು ರಸ್ತೆ ತಡೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

I was hit by conspiracy…: Nikhil Kumaraswamy shed tears during the campaign.

ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್‌ ಕುಮಾರಸ್ವಾಮಿ

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

1-HDK

Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.