Ramanagara: ಟೋಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ… ರಸ್ತೆ ತಡೆ, ಹಲವರು ವಶಕ್ಕೆ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳ
Team Udayavani, Jun 24, 2023, 1:31 PM IST
ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಶನಿವಾರ ಪ್ರತಿಭಟನೆ ನಡೆಯಿತು.
ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಬಳಿ ಪ್ರತಿಭಟನೆ ನಡೆದಿದ್ದು. ಪ್ರತಿಭಟನಾಕಾರರು ಹೆದ್ದಾರಿ ಪ್ರಾಧೀಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .
ಶೇ 22 ರಷ್ಟು ಟೋಲ್ ದರವನ್ನು ಹೆಚ್ಚಳ ಮಾಡಿರೋ ಹೆದ್ದಾರಿ ಪ್ರಾಧೀಕಾರ. ಈ ಕೂಡಲೇ ಹೆಚ್ಚಾಗಿರುವ ಟೋಲ್ ದರ ಇಳಿಸುವಂತೆ ರಸ್ತೆಯಲ್ಲೇ ಮಲಗಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ. ಕನ್ನಡಪರ ಕಾರ್ಯಕರ್ತರಿಂದ ಉರುಳುಸೇವೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ರಸ್ತೆ ತಡೆಗೆ ಯತ್ನ ಹಲವರ ಬಂಧನ:
ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ರಸ್ತೆ ತಡೆಯಲು ಮುಂದಾದ ಘಟನೆ ನಡೆದಿದೆ ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನೂ ಓದಿ: ಸಹೋದರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ಸಹೋದರನನ್ನೇ ಚಾಕುವಿನಿಂದ ಇರಿದು ಹತ್ಯೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.