ಜಲಪಾತದಂತಾದ ರಸ್ತೆ ಮಾರ್ಗ: ಸಂಚಾರ ಅಸ್ತವ್ಯಸ್ತ
Team Udayavani, Aug 27, 2022, 11:29 PM IST
ರಾಮನಗರ: ಜಿಲ್ಲಾದ್ಯಂತ ಸುರಿಯಲಾರಂಭಿಸಿರುವ ಮಳೆಗೆ ನಿಜಕ್ಕೂ ಜನತೆ ಹೈರಾಣಾಗಿದ್ದಾರೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರ ಪ್ರದೇಶಗಳಲ್ಲೇ ಮನೆಗೆ ನೀರು ನುಗ್ಗಲಾರಂಬಿಸಿದ್ದು ಹಲವೆಡೆ ಅವಾಂತರಗಳನ್ನ ಸೃಷ್ಟಿಸಿದೆ. ಅಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ಯಂತೂ ಮಳೆಗೆ ಕೆರೆಯಂತಾಗಿ ರೂಪುಗೊಂಡಿದೆ.
ನಗರದ ಟಿಪ್ಪುನಗರದಲ್ಲಿ ಬ್ರಿಡ್ಜ್ ಕಟ್ಟಿಕೊಂಡಿದ್ದು, ನೀರಿನ ಹರಿವು ಕಷ್ಟವಾಗಿದ್ದು, ಸುರಿದ ಧಾರಾಕಾರ ಮಳೆಗೆ ನೀರು ಮನೆಗಳಿಗೆ ನುಗ್ಗಲಾರಂಭಿಸಿದೆ. 23ನೇ ವಾರ್ಡ್ ಟಿಪ್ಪುನಗರದಲ್ಲಿ ಬರುವ ಸೀರಳ್ಳ ತುಂಬಿ ಹರಿಯುತ್ತಿದ್ದು, ಆ ಭಾಗದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನತೆ ರಾತ್ರಿ ನಿದ್ರೆ ಇಲ್ಲದೆ ನೀರು ಮನೆಗೆ ನುಗ್ಗದಂತೆ ನೋಡಿಕೊಳ್ಳುವುದೇ ಆಗಿತ್ತು. ಅಲ್ಲದೆ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿಟ್ಟಿದ್ದ ಪಡಿತರ ಸೇರಿದಂತೆ ಆಹಾರ ಸಾಮಗ್ರಿ ಹಾಗೂ ಬಟ್ಟೆ ಬರೆ ಎಲ್ಲವೂ ನೀರಿನಲ್ಲಿ ತೋಯ್ದು ಕೆಲವು ಕಡೆ ಕೊಚ್ಚಿಕೊಂಡು ಹೋದ ದೃಶ್ಯ ಸಾಮಾನ್ಯವಾಗಿತ್ತು.
ಮನೆಗಳಿಗೆ ನುಗ್ಗಿದ ನೀರು: ವಾರ್ಡ್ ನಂ 21ರ ಅರ್ಕೇ ಶ್ವರ ಕಾಲೋನಿಯಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಸೇತುವೆಯ ಕೆಳಭಾಗ ನೀರು ತುಂಬಿ ಹುಣಸನಹಳ್ಳಿ, ಕೊತ್ತಿಪುರ ಸೇರಿದಂತೆ ಇತರ ಮಾರ್ಗದ ಕೆಳ ಸೇತುವೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಅಲ್ಲದೆ, ನಗರದ ಕೊಳಚೆ ನೀರು ಮನೆಗಳಿಗೆ ಹೆಚ್ಚಾಗಿ ನುಗ್ಗಿದ್ದು ದುರ್ನಾತ ಹೊಡೆ ಯಲಾರಂಭಿಸಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿ ದ್ದಾರೆ. ಚನ್ನಮಾನಹಳ್ಳಿ ಬಳಿಯ ಕೆರೆ ಕೋಡಿ ಹೊಡೆದು ನೀರು ಕನಕಪುರ ರಸ್ತೆಯತ್ತ ನುಗ್ಗಿದೆ. ಇದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅರ್ಚಕಹಳ್ಳಿ ಬಳಿಯ ರಂಗರಾಯರದೊಡ್ಡಿ ಕೆರೆ ಕೋಡಿ ಹೊಡೆದ ಪರಿಣಾಮ ಬೆಂಗಳೂರು-ಮೈಸೂರು ರಸ್ತೆಗೆ ನೀರು ನುಗ್ಗಿದ್ದು, ಕೆಲ ಕಾಲ ಪ್ರವಾಹದಂತ ಅನುಭವ ನೀಡಿತ್ತು.
ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ
ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತು ಕೆರೆಯಂತಾಗಿದ್ದರಿಂದ ಜೀವ ಕೈಯಲ್ಲಿಡಿದು ವಾಹನ ಚಾಲಕರು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಜಿಲ್ಲಾಡಳಿತ ಬೆಂಗಳೂರು ಮತ್ತು ಮೈಸೂರು ನಡುವಣ ಸಂಚಾರಕ್ಕೆ ರಸ್ತೆ ಬಳಸದಂತೆ ಎಚ್ಚರಿಕೆ ನೀಡಿದ್ದು, ಪರ್ಯಾಯ ಮಾರ್ಗವಾಗಿ ಕನಕಪುರ ಮಾರ್ಗ ಅಥವಾ ಮಾಗಡಿ ಮಾರ್ಗದ ರಸ್ತೆಗಳಲ್ಲಿ ಸಂಚಾರಕ್ಕೆ ಬಳಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ವಿಶೇಷವಾಗಿ ಬೆಂಗಳೂರಿನಿಂದ-ಮೈಸೂರಿಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅವೈಜ್ಞಾನಿಕ ಕಾಮಗಾರಿಯಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳಪೆ ಕಾಮಗಾರಿಯಾಗಿದ್ದು, ರಸ್ತೆ ನಿರ್ಮಾಣದ ವೇಳೆ ಬಿದ್ದ ನೀರು ಮೋರಿ ಅಥವಾ ರಾಜಕಾಲುವೆಗೆ ನೇರವಾಗಿ ಹೋಗುವಂತೆ ಕಾಮಗಾರಿ ನಿರ್ಮಿಸುವಲ್ಲಿ ವಿಫಲವಾಗಿದ್ದೆ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.