ಬೆಲೆ ಏರಿಕೆಯಿಂದ ಗ್ರಾಮೀಣ ಜನರಿಗೆ ಸಂಕಷ್ಟ
ಬಡ ವರ್ಗದವರು ಏಳಿಗೆಗಾಗಿ ಸಹಾಯ ಧನ ನೀಡಲು ಸಿದ್ಧರಿದ್ದೇವೆ
Team Udayavani, Jul 8, 2022, 6:35 PM IST
ಚನ್ನಪಟ್ಟಣ: ಬೆಲೆ ಏರಿಕೆಯಿಂದ ಗ್ರಾಮೀಣ ಭಾಗದ ಜನರು ಅಗತ್ಯ ವಸ್ತುಗಳ ಖರೀದಿ ಮಾಡಿ, ಜೀವನ ನಡೆಸುವುದೇ ದೊಡ್ಡದಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸನ್ನ ಪಿ.ಗೌಡ ತಿಳಿಸಿದರು.
ತಾಲೂಕಿನ ತಿಟ್ಟಮಾರನಹಳ್ಳಿ, ಮೈಲನಾಯಕನಹಳ್ಳಿ, ಮೈನನಾಯಕನ ಹೊಸಹಳ್ಳಿ, ಕಳ್ಳಿ ಹೊಸೂರು ಹಾಗೂ ತೊರೆ ಹೊಸೂರು ಗ್ರಾಮಗಳಲ್ಲಿ ನಡೆದ ಕಾಂಗ್ರೆಸ್ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಪ್ರಯುಕ್ತ ಕರಿ ತಿಮ್ಮಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾಂಗ್ರೆಸ್ ಸೇರ್ಪಡೆಯಾದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಹಾಗೂ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಸೇರಿದಂತೆ
ಹಲವಾರು ಮಂದಿ ಸಚಿವರು, ಕರುನಾಡಿನ ಜನರ ಕಷ್ಟಗಳನ್ನು ತಿಳಿದು, ಅವರ ಜೀವನದ ಅವಶ್ಯಕತೆಯಾದ ಅನ್ನಭಾಗ್ಯ, ಕ್ಷೀರಭಾಗ್ಯ ಹಾಗೂ ಇಂದಿರಾ ಕ್ಯಾಂಟಿನ್‌ಗಳನ್ನು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದರು.
ಇದರಿಂದ ಜನರ ಜೀವನಕ್ಕೆ ಸುಗಮವಾದ ದಾರಿ ಕಲ್ಪಿಸಿಕೊಟ್ಟಿದ್ದರು. ಆದರೆ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜೀವನಕ್ಕೆ ದಾರಿಯಾಗಿದ್ದ ಯೋಜನೆಗಳನ್ನು ಹಂತ ಹಂತವಾಗಿ ಕೆಳಗಿಳಿಸಲು ಮುಂದಾಗುತ್ತಿದ್ದಾರೆ ಎಂದು ದೂರಿದರು.
ಕಸದ ಸಮಸ್ಯೆ ಹೆಚ್ಚಳ: ನಗರ ಪ್ರದೇಶ ಸೇರಿದಂತೆ ಗ್ರಾಮಾಂತರಗಳಲ್ಲಿ ಕಸದ ಸಮಸ್ಯೆ ಪ್ರತಿ ನಿತ್ಯ ಉಲ್ಬಣಗೊಳ್ಳುತ್ತಿದ್ದರೂ, ಇಲ್ಲಿಯವರೆಗೂ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ. ಇಂತಹ ಸಮಸ್ಯೆಗಳ ಪರಿಹಾರಕ್ಕಾಗಿ ಕಾಂಗ್ರೆಸ್ ಪಕ್ಷವೇ ಹೊರತು, ಯಾವ ಪಕ್ಷವಲ್ಲ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ.ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷ
ಬೆಂಬಲಿಸಬೇಕು ಎಂದು ಹೇಳಿದರು.
ಸಹಾಯ ಧನ ನೀಡಲು ಸಿದ್ಧ: ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಬಡ ವರ್ಗದವರು ಏಳಿಗೆಗಾಗಿ ಸಹಾಯ ಧನ ನೀಡಲು ಸಿದ್ಧರಿದ್ದೇವೆ. ಜನರು ನೇರವಾಗಿ ನನ್ನನ್ನು ಸಂಪರ್ಕಿಸಬಹುದು. ಕಾಂಗ್ರೆಸ್ ಪಾರ್ಟಿಯ ಹಿರಿಯ ಮುಖಂಡರು ಒಗ್ಗಟ್ಟಾಗಿ ಚುನಾವಣೆಯಲ್ಲಿ ಹೋರಾಡಿ, ಅಭ್ಯರ್ಥಿಯ ಗೆಲುವುಗಾಗಿ ಶ್ರಮ ವಹಿಸಬೇಕು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಸರ್ಕಾರ ರಚನೆ ಮಾಡುವುದು ಖಂಡಿತ ಎಂದು ಭವಿಷ್ಯ ನುಡಿದರು.
ಕೆಪಿಸಿಸಿ ಸದಸ್ಯ ಟಿ.ಕೆ.ಯೋಗೇಶ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ಪ್ರಮೋದ್, ನಗರ ಘಟಕದ ಅಧ್ಯಕ್ಷ ಸುನೀಲ್ ಕುಮಾರ್, ತಾಲೂಕು ಮಾಜಿ ಅಧ್ಯಕ್ಷ ಹಾಪ್‌ಕಾಮ್ಸ್ ಶಿವಮಾದು, ಮಹಿಳಾ ಘಟಕದ ಅಧ್ಯಕ್ಷೆ ಕೆ.ಟಿ.ಲಕ್ಷ್ಮಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಕೂರು ಪುಟ್ಟರಾಜು, ಗ್ರಾಪಂ ಸದಸ್ಯ ಹರೂರು ಕೆಂಪರಾಜು, ಮುಖಂಡರಾದ ವಲ್ಲೇಶ್, ಕಾವೇರಮ್ಮ, ಕೋಕಿಲರಾಣಿ, ರೇಣುಕಮ್ಮ ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.