ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಸುಸೂತ್ರ


Team Udayavani, Jun 19, 2020, 6:10 AM IST

dwitiya-test

ರಾಮನಗರ: ಜಿಲ್ಲೆಯಲ್ಲಿ ಗುರುವಾರ ದ್ವಿತೀಯ ಪಿಯುಸಿ ಇಂಗ್ಲಿಷ್‌ ಭಾಷೆ ಪರೀಕ್ಷೆ ಯಶಸ್ವಿಯಾಗಿ ನೆರೆವೇರಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಶ್ರಮಿಸಿವೆ. ಕೋವಿಡ್‌-19 ಭೀತಿಯ ನಡುವೆ  ಸರ್ಕಾರ ಸೂಚಿಸಿದ ಎಲ್ಲ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ, ದ್ವಿತೀಯ ಪಿಯು ಇಂಗ್ಲೀಷ್‌ ಪರೀಕ್ಷೆ ನಡೆಸಿದರು. ಪರೀಕ್ಷೆ ಅಕ್ರಮಗಳಿಗೆ ಅವಕಾಶವಾಗಲಿಲ್ಲ. ಹೀಗಾಗಿ ಡಿಬಾರ್‌ ಪ್ರಕರಣಗಳು ವರದಿಯಾಗಿಲ್ಲ.

488 ವಿದ್ಯಾರ್ಥಿಗಳು ಗೈರು: ಜಿಲ್ಲಾದ್ಯಂತ ಹರಡಿ ಕೊಂಡಿದ್ದ 12 ಪರೀಕ್ಷೆ ಕೇಂದ್ರಗಳಲ್ಲಿ 8,413 ವಿದ್ಯಾರ್ಥಿಗಳು ಪೈಕಿ 7925, ಅನ್ಯ ಜಿಲ್ಲೆಗಳ 264 ವಿದ್ಯಾರ್ಥಿಗಳ ಪೈಕಿ 244, ಮತ್ತು ಅನ್ಯ ರಾಜ್ಯ ಗಳ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ  ಬರೆದರು. 488 ವಿದ್ಯಾರ್ಥಿಗಳು ಗೈರಾಗಿದ್ದರು.

ಒಬ್ಬ ವಿದ್ಯಾರ್ಥಿನಿಗೆ ಅವಕಾಶವಿಲ್ಲ: ಜಿಲ್ಲೆಯ ಮಾಗಡಿಯಲ್ಲಿ ಒಬ್ಬ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶವಾಗಲಿಲ್ಲ ಎಂದು ಪಿಯು ಡಿಡಿ ನರಸಿಂಹಮೂರ್ತಿ ತಿಳಿಸಿದರು. ಕಾರಣ ಆಕೆ ಮನೆಯಲ್ಲಿ ಒಬ್ಬರಿಗೆ ಕೋವಿಡ್‌-19  ಸೋಂಕು ಕಾಣಿಸಿಕೊಂಡಿದ್ದರಿಂದ ಉಳಿದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಈ ಕ್ರಮವಹಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಮನಗರದಲ್ಲಿ ಕಂಟೈನ್‌ಮೆಂಟ್‌ ವಲಯ ದಿಂದ ಬಂದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿ ಯಲ್ಲಿ ಪರೀಕ್ಷೆ ಬರೆಸಲಾಗಿದೆ.

ಥರ್ಮ ಲ್‌ ಸ್ಕ್ರೀನಿಂಗ್‌: ಎಲ್ಲ 12 ಪರೀಕ್ಷಾ ಕೇಂದ್ರ ಗಳಲ್ಲೂ ಆರೋಗ್ಯ ಸಹಾಯಕರು ಪ್ರತಿ ವಿದ್ಯಾ ರ್ಥಿಯನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಿ ದ ನಂತರವಷ್ಟೇ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಹ್ಯಾಂಡ್‌ ಸ್ಯಾನಿಟೈಸರ್‌  ವ್ಯವಸ್ಥೆಯಿತ್ತು. ಕಳೆದ ವರ್ಷಗಳಿಗಿಂತ ಹೆಚ್ಚಿನ ಕೊಠಡಿ ಪರೀಕ್ಷೆಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರಿಂದ ಹೆಚ್ಚಿನ ಕೊಠಡಿಗಳ ಅವಶ್ಯಕತೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳಿಗೆ  ಅವಕಾಶವಾಗದಂತೆ ಎಲ್ಲ ಪರೀಕ್ಷಾ ಕೇಂದ್ರ ಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಯಲ್ಲಿತ್ತು. ಡಿಡಿಪಿಯು ನರಸಿಂಹ ಮೂರ್ತಿಯ ಅವರು, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಆರಂಭದಲ್ಲಿ ಸಾಮಾಜಿಕ ಅಂತರ ಮಾಯ!: ಪ್ರತಿ ಪರೀಕ್ಷೆ ಕೇಂದ್ರದಲ್ಲೂ 700ರಿಂದ 800 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ  ಎಂದು ಈ ಮೊದಲೆ ತಿಳಿವಳಿಕೆಮೂಡಿಸಿದ್ದರು. ಪರೀಕ್ಷೆ ಬರೆಯುವ ಧಾವಂತದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಮರೆತರು. ಇನ್ನೊಂದೆಡೆ ಒಂದೆರೆಡು ಪರೀಕ್ಷಾ ಕೇಂದ್ರ  ಹೊರತು ಪಡಿಸಿ ಉಳಿದ ಕೇಂದ್ರಗಳ ಸಿಬ್ಬಂದಿ ಸಹ ಈ ಬಗ್ಗೆ  ಅವರಲ್ಲಿ ಎಚ್ಚರಿಕೆ ಮೂಡಿಸಲಿಲ್ಲ. ಬೆಳಿಗ್ಗೆ 9 ಗಂಟೆಗೆ ಬಂದ ವಿದ್ಯಾರ್ಥಿಗಳು ಗುಂಪುಗುಂಪಾಗಿ ಚರ್ಚೆ ನಡೆಸಿದ್ದು, ತಾವು ಪರೀಕ್ಷೆ ಬರೆಯಬೇಕಾದ ಕೊಠಡಿ ಸಂಖ್ಯೆಯನ್ನು ಹುಡುಕುವ ಪ್ರಯತ್ನದಲ್ಲಿ ಸಾಮಾಜಿಕ ಅಂತರ ಮರೆತರು.  ಪರೀಕ್ಷೆ ನಂತರವೂ ಈ ನಿಯಮ ಗಾಳಿಗೆ ತೂರಿದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.