ಜೀತದಾಳುಗಳ ಪುನರ್ವಸತಿಗೆ ಆಗ್ರಹ


Team Udayavani, Jan 28, 2017, 3:48 PM IST

Guru-1.jpg

ಚನ್ನಪಟ್ಟಣ: ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸುವಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಜೀತ ವಿಮುಕ್ತಿ ಕರ್ನಾಟಕ ತಾಲೂಕು ಘಟಕದ ವತಿಯಿಂದ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಬಿ.ಎಂ.ರಸ್ತೆಯಲ್ಲಿ ಮೆರವಣಿಗೆ ಹೊರಟ ಜೀವಿಕ ಸಂಘಟನೆ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು. 

ಜಿಲ್ಲಾ ಸಂಚಾಲಕ ವಕೀಲ ಕುಮಾರ್‌ ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ನ್ಯಾಯ, ಸಮಾನತೆ ಸ್ವಾತಂತ್ರ್ಯ, ಸೋದರತ್ವ ನೀಡಲಾಗಿದೆ. ಸಂವಿಧಾನ ಜಾರಿಗೆ ಬಂದು 68 ವರ್ಷ ಕಳೆದರೂ ಜಿಲ್ಲೆಯಲ್ಲಿ ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಜೀತ ವಿಮುಕ್ತಿ ಕರ್ನಾಟಕ ಸಂಘಟನೆ ವತಿಯಿಂದ 1994ರಿಂದ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಮನವಿ ಸಲ್ಲಿಸುತ್ತಿದ್ದರೂ ಇದುವರಗೂ ಯಾರೂ ಸ್ಪಂದಿಸಿಲ್ಲ. ಪ್ರತಿಭಟನೆ ಮೂಲಕ ಒತ್ತಡ ತರುತ್ತಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಇದು ನಮ್ಮ ಸಂವಿಧಾನದಲ್ಲಿನ ಆಡಳಿತದ ಕಾರ್ಯವೈಖರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಲಾಮ ಪದ್ಧತಿಯ ಸ್ವರೂಪವಾದ ಜೀತ ಪದ್ಧತಿ ರಾಜ್ಯ ಮತ್ತು ರಾಮನಗರ ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿದೆ. ಜೀತ ವ್ಯವಸ್ಥೆ ಕರಾಳ ಪದ್ಧತಿಯಾಗಿದ್ದು, ಇಂದು ಕೂಡ ಕೆಲ ಭೂಮಾಲೀಕರು ಮನುಷ್ಯರನ್ನು ಪಶುವಂತೆ ನಡೆಸುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ನ್ಯಾಯ ಒದಗಿಸದೆ ಅನ್ಯಾಯ ಮಾಡುತ್ತಿವೆ. ಭೂಮಾಲೀಕರ ಜತೆ ಸೇರಿ ಕಂದಾಯ ಅಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ತನಿಖೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಸರ್ಕಾರಿ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಂಘಟನೆ ವತಿಯಿಂದ ಧರಣಿ ನಡೆಸಲಾಗುತ್ತಿದೆ ಎಂದರು. 

ಸಂಘಟನೆಯ ರಾಜ್ಯ ಸಂಚಾಲಕ ಹನುಮಂತಯ್ಯ ಮಾತನಾಡಿ, ಜೀವಿಕ ಸಂಘಟನೆಯ ಕಾರ್ಯಕರ್ತರು 2001ರಿಂದ 2016ರ ತನಕ 240 ಮಂದಿ ಜೀತದಾಳುಗಳನ್ನು ಗುರುತಿಸಿದ್ದು, ಅವರ ಬಿಡುಗಡೆ ಮತ್ತು ಪುನರ್ವಸತಿಗಾಗಿ ಮನವಿ ಸಲ್ಲಿಸುತ್ತಾ ಬಂದಿದೆ. ಆದಾಗ್ಯೂ ಇದುವರೆಗೂ ಯಾವುದೇ ಕ್ರಮ ತಗೆದುಕೊಂಡಿಲ್ಲ. ಬಿಡುಗಡೆ ಭಾಗ್ಯ ಲಭ್ಯವಾಗಿಲ್ಲ. ಸರ್ಕಾರದ 2015ರ ಸುತ್ತೋಲೆ ಪ್ರಕಾರ ಅರ್ಜಿ ಸಲ್ಲಿಸಿದ ಒಂದು ತಿಂಗಳೊಳಗೆ ತನಿಖೆ ಮಾಡಿ ಬಿಡುಗಡೆ ಪತ್ರ ನೀಡಬೇಕು. ಜೀವಿಕ ಮನವಿ ಮಾಡಿದರು ತಾಲೂಕು ಆಡಳಿತ ಈ ಬಗ್ಗೆ ಇದುವರಗೆ ನಿಜವಾದ ಜೀತದಾಳುಗಳನ್ನು ಗುರುತಿಸುವಲ್ಲಿ ವಿಫ‌ಲವಾಗಿದೆ. ಜತೆಗೆ ಅವರಿಗೆ ಯಾವುದೇ ಪುನರ್ವಸತಿ ಒದಗಿಸದೆ ಮೌನವಹಿಸಿದೆ. ಪರಿಶಿಷ್ಟ ಸಮುದಾಯವನ್ನು ಕತ್ತಲ್ಲಿಟ್ಟಿದೆ ಎಂದು ಆರೋಪಿಸಿದರು.

ಶಿರಸ್ತೇದಾರ ಮುನಿರಾಜಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುನಿರಾಜಯ್ಯ, ಜೀವಿಕ ಸಂಘಟನೆ ಪದಾಧಿಕಾರಿಗಳು ನೀಡಿರುವ ಮನವಿ ಪತ್ರವನ್ನು ಕೂಡಲೇ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು. ಜೀವಿಕ ಜಿಲ್ಲಾ ಸಂಚಾಲಕ ಹಂಗಹನುಮಯ್ಯ, ತಾಲೂಕು ಮಹಿಳಾ ಸಂಚಾಲಕಿ ಬಿ.ಕೆ.ಯಶೋಧಾ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಡಿಎಸ್‌ಎಸ್‌ ತಾಲೂಕು ಸಂಚಾಲಕ ಸೇಟು, ಹೋಬಳಿ ಸಂಚಾಲಕಿ ಗಂಗಾ, ತಾಲೂಕು ಸಂಚಾಲಕ ಎಚ್‌.ಎಸ್‌.ಸಿದ್ದಯ್ಯ, ಗ್ರಾಪಂ ಸದಸ್ಯ ಜಯರಾಮು, ಮಮತಾ, ಶಂಕರ್‌, ಗಂಗಾಧರ್‌, ಸಿದ್ದಯ್ಯ ಇತರರಿದ್ದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.