ಸರ್ಕಾರಿ ನೌಕರರ ಮೌನ ಪ್ರತಿಭಟನೆ
Team Udayavani, Jul 11, 2020, 6:37 AM IST
ರಾಮನಗರ: ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ನಗರದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಕಂದಾಯ ನೌಕರರ ಸಂಘದ ಜಿಲ್ಲಾ ಘಟಕ ಗಳು ಮೌನ ಪ್ರತಿಭಟನೆ ನಡೆಸಿದವು. ನಗರದ ಸರ್ಕಾರಿ ಕಚೇರಿಗಳ ಸಂಕೀರ್ಣದ (ಡೀಸಿ ಕಚೇರಿ) ಆವರಣದಲ್ಲಿ ಜಮಾಯಿಸಿ ದ ಜಿಲ್ಲಾ ಸಂಘದ ಪದಾಧಿಕಾರಿಗಳು ತಮ್ಮ ಆಕ್ರೋಶ ಹೊರಹಾಕಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳು ಮೃತ ತಹಶೀಲ್ದಾರ್ ಚಂದ್ರ ಮೌಳೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ತೋಳಿಗೆ ಕಪ್ಪುಬಟ್ಟೆ ಕಟ್ಟಿದ್ದ ನೂರಾರು ಸರ್ಕಾರಿ ನೌಕರರು ಅಗಲಿ ದ ಅಧಿಕಾರಿಗೆ ಶ್ರದಾಂಜಲಿ ಅರ್ಪಿಸಿದರು. ನಂತರ ಸುದ್ದಿಗಾರರೊಂದಿಗೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ಮಾತನಾಡಿದರು.
ಕೋಲಾರ ಜಿಲ್ಲೆಯ ಬಂಗಾರುಪೇಟೆ ತಾಲೂಕು ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಬಂಗಾರುಪೇಟೆ ತಾಲೂಕು ಕಾಮಸಮುದ್ರ ಹೋಬಳಿ, ತೋಪನಹಳ್ಳಿ ಗ್ರಾಮದ ರಾಮಮೂರ್ತಿ ಹಗೂ ವೆಂಕಟಾ ಪತಿ ಎಂಬುವರ ಜಮೀನು ವ್ಯಾಜ್ಯದ ಸಂಬಂಧ ಪೊಲೀಸ್ ರಕ್ಷಣೆಯಲ್ಲಿ ಜಂಟಿ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಆರೋಪಿ ವೆಂಕಟಪತಿ, ಪೊಲೀಸರ ಸಮ್ಮುಖದಲ್ಲೇ ಏಕಾಏಕಿ ತಹಶೀಲ್ದಾರರನ್ನು ಚಾಕುವಿ ನಿಂದ ಇರಿದು ಹತ್ಯಗೈದಿದ್ದಾರೆ.
ಈ ಕೃತ್ಯವನ್ನು ರಾಜ್ಯದ ಎಲ್ಲ ಸರ್ಕಾರಿ ನೌಕರರು ತೀವ್ರವಾಗಿ ಖಂಡಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಂದಾಯ, ಭೂ ಮಾಪನ, ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಸೇರಿ ದಂತೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿ ಗಳು ಕರ್ತವ್ಯ ನಿರ್ವಹಿಸುವ ವೇಳೆ ಇಂತಹ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿದೆ. ಇಂತಹ ಘಟನೆ ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಯಾಗಬೇಕಾಗಿದೆ ಎಂದು ಆಗ್ರಹಿಸಿದರು.
ಕೃತ್ಯ ಎಸಗಿದ ಅಪರಾಧಿಯನ್ನು ತಕ್ಷಣ ಬಂಧಿಸಬೇಕು. ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ನೇಮಕಾತಿ ನೀಡಬೇಕು. ಸರ್ಕಾರಿ ನೌಕರರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳು ನೀಡಿದ ಮನವಿಯನ್ನು ಜಿಲ್ಲಾಧಿ ಕಾರಿ ಎಂ.ಎಸ್.ಅರ್ಚನಾ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸರ್ಕಾರಿ ನೌರಕರರ ಸಮಘದ ಕಾರ್ಯದರ್ಶಿ ಎಂ. ರಾಜೇಗೌಡ, ಖಜಾಂಚಿ ಟಿ.ನರಸಯ್ಯ, ರಾಜ್ಯ ಪರಿಷತ್ ಸದಸ್ಯ ಕೆ.ಸತೀಶ್ ಪದಾಧಿಕಾರಿ ಗಳಾದ ಶಿವಸ್ವಾಮಿ, ರಾಜಶೇಖರ್, ಕರ್ನಾಟಕ ಕಂದಾಯ ಇಲಾಖಾ ನೌಕರರ ಸಂಘದ ಜಿಲ್ಲಾ ಸಂಘದ ಅಧ್ಯಕ್ಷ ಎನ್.ರಮೇಶ್, ಪ್ರಮುಖರಾದ ಹರ್ಷ ಎಂ, ಹೆಚ್. ಜಗದೀಶ್, ಎ.ಎಸ್. ಧರೇಶ್‌ಗೌಡ, ಮೋಹನ್ ಎಂ.ಎನ್., ಚಂದ್ರೇಗೌಡ ಸಿ. ಎಸ್.ತಂಗರಾಜು, ವೆಂಕಟೇಶ್ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.