ಎಸ್‌ಎಸ್ ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭ
Team Udayavani, Jun 1, 2021, 11:40 AM IST
ರಾಮನಗರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಜಿಲ್ಲೆಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭವಾಗಿದೆ. ಇಲಾಖೆಯ ಸೂಚನೆಯಂತೆ ಬಹುತೇಕ ಪೋಷಕರು ತಮ್ಮ ಮಕ್ಕಳ ಜೊತೆಗೆ ಇದ್ದು ಪರೀಕ್ಷೆ ಬರೆಸಿರುವುದಾಗಿ ತಿಳಿಸಿದ್ದಾರೆ.
ಕೋವಿಡ್‌ಕರ್ಫ್ಯೂಇರುವಕಾರಣಶಾಲೆಗಳಿಗೆ ರಜೆಇದೆ.ಎಸ್ ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಎರಡು ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಪರೀಕ್ಷೆ ಸೋಮವಾರದಿಂದ ಆರಂಭವಾಗಿದೆ.ಮೊದಲದಿನಪ್ರಥಮಭಾಷೆಪರೀಕ್ಷೆ ನಡೆದಿದೆ.
ಬೆಳಗ್ಗೆ 10 ಗಂಟೆಯ ವೇಳೆಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಪೋಷಕರ ಮೊಬೈಲ್ ತಲುಪಿದೆ. ಮೊಬೈಲ್‌ನಲ್ಲಿ ಬಂದ ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಂಡು ಪೋಷಕರ ಸಮ್ಮುಖದಲ್ಲಿ ಉತ್ತರ ಬರೆದಿದ್ದಾರೆ. ನೆಟ್‌ವರ್ಕ್ ತೊಂದರೆಯಿಂದ ಕೆಲವರಿಗೆ ಪ್ರಶ್ನೆ ಪತ್ರಿಕೆ ತಲುಪುವುದು ತಡವಾಗಿರುವ ಬಗ್ಗೆ ಆಯಾ ಶಾಲೆಗಳ ಮುಖ್ಯಶಿಕ್ಷಕರಿಗೆ ಪೋಷಕರು ಕರೆ ಮಾಡಿ ವಿಚಾರಿಸಿದ್ದಾರೆ. ಮನೆಯಲ್ಲೇ ಉತ್ತರ ಬರೆಯುತ್ತಿರುವ ಚಿತ್ರಗಳನ್ನು ಪೋಷಕರು ತಮ್ಮ ಮಗುವಿನ ಶಾಲೆಯ ಮುಖ್ಯಶಿಕ್ಷಕರಿಗೆ ರವಾನಿಸಿದ್ದಾರೆ.
ಇನ್ನು5ವಿಷಯಗಳ ಪರೀಕ್ಷೆ ಪ್ರತಿದಿನ ನಡೆಯಲಿದೆ. ಸೋಮವಾರ ಎಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂಬ ಮಾಹಿತಿ ಇದ್ದಷ್ಟೆ ಸಂಗ್ರಹವಾಗಬೇಕಾದಿದೆ. ಸರ್ಕಾರಿ, ಖಾಸಗಿ ಅನುದಾನಿತ, ಅನು ದಾನರಹಿತ ಶಾಲಾ ವಿದ್ಯಾರ್ಥಿಗಳು ಸಹ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.