ಬಾರ್ ರಕ್ಷಣೆ: ಸರಕಾರದಿಂದ ಕಾನೂನು ತಜ್ಞರ ಮೊರೆ
Team Udayavani, Jul 5, 2017, 3:05 AM IST
ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಕಾನೂನು ತಜ್ಞರ ಮೊರೆ ಹೋಗಲು ರಾಜ್ಯ ಸರಕಾರ ತೀರ್ಮಾನಿಸಿದೆ. ಗೃಹಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸಹಿತ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹೆದ್ದಾರಿ ವ್ಯಾಪ್ತಿಯ 500 ಮೀಟರ್ ವ್ಯಾಪ್ತಿಯ ಮದ್ಯ ದಂಗಡಿಗಳನ್ನು ಮುಚ್ಚಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದಿಂದ ಬೆಂಗಳೂರು ನಗರದ ಬಾರ್‌ಗಳನ್ನು ಉಳಿಸಿಕೊಳ್ಳಲು ವಾರದೊಳಗೆ ಸೂಕ್ತ ದಾರಿ ಕಂಡುಕೊಂಡು ಮಾಹಿತಿ ನೀಡುವಂತೆ ಕಾನೂನು ಇಲಾಖೆ, ಲೋಕೋಪಯೋಗಿ, ಅಬಕಾರಿ, ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.
ಇದರ ಜತೆಗೆ ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳ ರಸ್ತೆಗಳೆಂದು ಡಿನೋಟಿಫೈ ಮಾಡಿದ ಪಂಜಾಬ್ ಸರಕಾರದ ಕ್ರಮ ಸರಿಯಾಗಿದೆ ಎಂಬ ರೀತಿಯಲ್ಲಿ ಸುಪ್ರೀಂಕೋರ್ಟ್ ನೀಡಿದ ಅಭಿಪ್ರಾಯದ ಬಗ್ಗೆಯೂ ಚರ್ಚಿಸಿದ ಮುಖ್ಯಮಂತ್ರಿ, ಅದನ್ನು ಆಧರಿಸಿ ಸರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮಸೂದೆ ಬೇಕೇ? ಅಧ್ಯಾದೇಶದಿಂದ ಸಾಧ್ಯವೇ?: ಪಂಜಾಬ್ ಸರಕಾರ ವಿಧಾನಸಭೆಯಲ್ಲಿ ಮಸೂದೆ ಮೂಲಕ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದಂತೆ ರಾಜ್ಯ ಸರಕಾರವೂ ವಿಧಾನಮಂಡಲದಲ್ಲಿ ಮಸೂದೆ ರೂಪಿಸುವವರೆಗೆ ಕಾಯಬೇಕೇ ಅಥವಾ ಅಧ್ಯಾದೇಶ ಮೂಲಕ ಈ ಪ್ರಕ್ರಿಯೆ ಕೈಗೊಳ್ಳಲು ಸಾಧ್ಯವೇ ಎಂಬುದನ್ನು ಕಾನೂನು ತಜ್ಞರ ಜತೆ ಸಮಾಲೋಚಿಸಿ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಸಲಹೆ ಮಾಡಿದ್ದಾರೆ. ಅಲ್ಲದೆ, ಈ ಕುರಿತು ಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನಾತ್ಮಕ ಹಾಗೂ ಶಾಸನಾತ್ಮಕ ಪರಿಹಾರ ಕೈಗೊಳ್ಳುತ್ತಿರುವ ಬಗೆಗೂ ಮಾಹಿತಿ ತರಿಸಿಕೊಂಡು ವರದಿ ನೀಡಿ. ಅದರಂತೆ ಮುಂದಿನ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ಸರಕಾರದ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದರೊಂದಿಗೆ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಯಾವ ಕ್ರಮ ಅನುಸರಿಸುತ್ತಾರೆ ಎಂಬುದನ್ನೂ ಪರಿ ಶೀಲಿಸಲಾಗುತ್ತಿದೆ. ಅದನ್ನು ಆಧರಿಸಿ ನಮ್ಮ ರಾಜ್ಯದಲ್ಲಿ ಏನು ಮಾಡಬಹುದು ಎಂಬುದನ್ನು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.