ಮಲೇರಿಯಾ ಮುಕ್ತ ಜಿಲ್ಲೆಗೆ ಶ್ರಮಿಸಿ: ಸಿಇಒ ಇಕ್ರಂ

Team Udayavani, Jul 16, 2020, 12:36 PM IST

ಮಲೇರಿಯಾ ಮುಕ್ತ ಜಿಲ್ಲೆಗೆ ಶ್ರಮಿಸಿ: ಸಿಇಒ ಇಕ್ರಂ

ಸಾಂದರ್ಭಿಕ ಚಿತ್ರ

ರಾಮನಗರ: 2019ನೇ ಸಾಲಿನಲ್ಲಿ 5 ಮತ್ತು 2020ರಲ್ಲಿ ಈವರೆಗೆ 2 ಮಲೇರಿಯಾ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಇನ್ನಷ್ಟು ಶ್ರಮಿಸಿದರೆ ಬಹುಶಃ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಶೂನ್ಯಕ್ಕೆ ತರಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂದಾಗಬೇಕು ಎಂದು ಜಿಪಂ ಸಿಇಒ ಇಕ್ರಂ ತಾಕೀತು ಮಾಡಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಮಲೇರಿಯಾ ವಿರೋಧ ಮಾಸಾಚರಣೆ ಮತ್ತು ಡೆಂಗ್ಯೂ ದಿನಾಚರಣೆ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ, ರೋಗಗಳು ಸೊಳ್ಳೆಗಳಿಂದ ಹರಡುತ್ತದೆ. ಸೊಳ್ಳೆಗಳು ನಿಂತ ನೀರಿನಲ್ಲಿ ಬೆಳೆಯುವುದರಿಂದ ಸಾರ್ವಜನಿಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳ ಬೇಕಾಗಿದೆ. ಈ ವಿಚಾರದಲ್ಲಿ ಜನ ಜಗೃತಿ ಅಗತ್ಯವಿದೆ ಎಂದರು.

ಕೋವಿಡ್‌-19 ನಿಯಂತ್ರಿಸುವ ಬಗ್ಗೆ, ಕಸ ವಿಲೇವಾರಿ ಆಟೋಗಳಲ್ಲಿ ಪ್ರಚಾರ ಕೈಗೊಳ್ಳಲಾಗುತ್ತಿದೆ. ಕೋವಿಡ್‌ -19 ಜೊತೆಗೆ ಮಲೇರಿಯಾ ಇತರೆ ಸಾಂಕ್ರಾಮಿಕ ರೋಗ ತಡೆ ಬಗ್ಗೆ ಪ್ರಚಾರ ಕೈಗೊಳ್ಳಿ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಾರ್ವ ಸಮೀಕ್ಷೆ ಕೈಗೊಳ್ಳಿ. ಅದರೊಂದಿಗೆ ಜಾಗೃತಿ ಕರಪತ್ರ ವಿತರಿಸಿ ಎಂದು ಸಲಹೆ ಕೊಟ್ಟರು. ನಗರದ ಸ್ಥಳೀಯ ಸಂಸ್ಥೆಗಳು, 3 ದಿನಗಳಿಗೊಮ್ಮೆ ವ್ಯವ ಸ್ಥಿತವಾಗಿ ಫಾಗಿಂಗ್‌ ಮಾಡುವಂತೆ ಆರೋಗ್ಯ ಇಲಾಖೆ
ಅಧಿಕಾರಿಗಳು ಸಲಹೆ ಮಾಡಬೇಕು. ಮೀನುಗಾರಿಕೆ ಇಲಾಖೆ ಅವರು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯವಾಗಿ ಕಾರ್ಯ ನಿರ್ವಹಿಸಿ ಕೆರೆ ಹಾಗೂ ತೊಟ್ಟಿಗಳಲ್ಲಿ ಲಾರ್ವ ಬೆಳೆಯ ದಂತೆ ತಡೆಯಲು ವಿಶೇಷ ಮೀನು ಬಿಡುವಂತೆ ತಿಳಿಸಿದರು.

ಪಶುಸಂಗೋಪನೆ ಇಲಾಖೆ ಅವರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗಲೆಲ್ಲ ಮಲೇರಿಯಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನೀರು ಸಂಗ್ರಹಣೆಗೆ ಅವಕಾಶವಾಗದಂತೆ ತಿಳಿವಳಿಕೆ ಮೂಡಿಸಿ, ರೋಗ ಹರಡುವ ಸನ್ನಿವೇಶಗಳು ಕಂಡರೆ ತಕ್ಷಣ ಆರೋಗ್ಯ ಇಲಾಖೆಗೆ ತಿಳಿಸಿ ಎಂದು ಸೂಚಿಸಿದರು.

ಕೆಎಂಎಫ್ ಅಡಿ ಕಾರ್ಯನಿರ್ವಸುತ್ತಿರುವ ಸೊಸೈಟಿಗಳ ಎದುರು ಜಾಗೃತಿ ಪೋಸ್ಟರ್‌ ಅಳವಡಿಸಿದಲ್ಲಿ ಹೆಚ್ಚಿನ ಪ್ರಚಾರ ದೊರಕುತ್ತದೆ. ತಾಲೂಕು ಮಟ್ಟದಲ್ಲಿ ಸಭೆ
ಆಯೋಜಿಸಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಚರ್ಚಿಸುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್‌, ಆರೋಗ್ಯ ಇಲಾಖೆ ಡಾ.ಪ್ರಸನ್ನಕುಮಾರ್‌, ಡಾ.ಪದ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-by-Poll

By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್‌.ಡಿ.ಕುಮಾರಸ್ವಾಮಿ

DK-Shivakuamar

By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

HDK-election

By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Nikhil—Somanna

By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

CPY-1

By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.