ಭಾನುವಾರದ ಲಾಕ್‌ಡೌನ್‌ ಯಶಸ್ವಿ

Team Udayavani, Jul 6, 2020, 7:02 AM IST

kanakapura locj

ರಾಮನಗರ: ಕೋವಿಡ್‌-19 ಸೋಂಕು ಹರಡುವಿಕೆಗೆ ಬ್ರೇಕ್‌ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾನುವಾರ್‌ ಲಾಕ್‌ಡೌನ್‌ ಘೋಷಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆ ಭಾನುವಾರ ಸ್ತಬಟಛಿವಾಗಿತ್ತು. ಶನಿವಾರ ರಾತ್ರಿ 8 ರಿಂದ ಜಿಲ್ಲೆಯಲ್ಲಿ  ವ್ಯಾಪಾರ ಹಾಗೂ ವಹಿವಾಟು ಸ್ಥಗಿತಗೊಂಡಿತು. ಭಾನುವಾರ ಹೇಗೂ ಸರ್ಕಾರಿ ಕಚೇರಿ ಗಳು, ಬ್ಯಾಂಕುಗಳು ರಜೆಯಿದ್ದವು.

ರಾಮನಗರದಲ್ಲಿ ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಬಂದ್‌  ಆಗಿದ್ದವು. ಅವಶ್ಯಕ ವಸ್ತುಗಳ ಅಂಗಡಿಗಳು, ಪೆಟ್ರೋಲ್‌ ಬಂಕ್‌ಗಳು ಮಾತ್ರ ತೆರೆದಿದ್ದವು. ಬೆಂಗಳೂರು ಮೈಸೂರುಡಿ ರಾಷ್ಟ್ರೀಯ ಹೆದ್ದಾರಿ ಬಿಕೋ ಎನ್ನುತ್ತಿತ್ತು. ಆದರೆ ನಗರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಕಡಿವಾಣ  ಇರಲಿಲ್ಲ. ಕೆಲವು ಕಡೆ ಪೊಲೀಸರು ವಿನಾಕಾರಣ ಅಲೆದಾಡದಿರುವಂತೆ ಎಚ್ಚರಿ ಸಿದ್ದು ಕಂಡು ಬಂತು. ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ಕೂಡ ಲಾಕ್‌ಡೌನ್‌ ಯಶಸ್ವಿಯಾಯಿತು.

ಗುರು ಪೂರ್ಣಿಮೆ: ನಗರದ ನ್ಯಾಯಾಲಯ ರಸ್ತೆಯಲ್ಲಿ ರುವ ಸಾಯಿಬಾಬ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯಕ್ತ ವಿಶೇಷ ಪೂಜೆಗಳು ನಡೆದವು. ಆದರೆ ಭಕ್ತರ ದರ್ಶನಕ್ಕೆ ಅವಕಾಶವಿರಲಿಲ್ಲ. ಮಹಾಆರತಿ ವೀಡಿಯೋ ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡಿತು. ಸಾಯಿ ಭಕ್ತರು ಸಾಮಾಜಿಕ ಜಾಲತಾಣಗಳಲ್ಲೇ ಮಹಾ ಆರತಿ ಕಣ್ತುಂಬಿಕೊಂಡರು. ಗುರುಪೂರ್ಣಿಮೆ ಪ್ರಯುಕ್ತ ವಿಶೇಷ ಅಲಂಕಾರ ಈ ಬಾರಿ ಸಾಯಿಬಾಬ ಮೂರ್ತಿ ಮತ್ತು ಮಂಟಪಕ್ಕೆ  ಸೀಮಿತವಾಗಿತ್ತು.

ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ
ಕನಕಪುರ: ಕೋವಿಡ್‌-19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಭಾನುವಾರದ ಲಾಕ್‌ಡೌನ್‌ಗೆ ತಾಲೂಕಿನ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ಮತ್ತು ಸಾವು ನೋವು  ದಿನೆದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿವಾರ ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಾಗಿದೆ. ಅಗತ್ಯ ವಸ್ತು ಹೊರತುಪಡಿಸಿ ಉಳಿದಂತೆ ಎಲ್ಲ ಬಂದ್‌ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಗತ್ಯ ವಸ್ತುಗಳು ಹೊರತುಪಡಿಸಿ, ಉಳಿದೆಲ್ಲ ಸೇವೆಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಾರ ವಹಿವಾಟು ಇಲ್ಲದೆ ಬಿಕೋ ಎನ್ನುತ್ತಿತ್ತು. ಲಾಕ್‌ಡೌನ್‌ನಿಂದ ರೇಷ್ಮೆ ಮಾರುಕಟ್ಟೆ ಸೇವೆಗೂ  ಅವಕಾಶವಿಲ್ಲದೆ ಬಂದ್‌ ಆಗಿದೆ. ಯಾವುದೇ ರೇಷ್ಮೆ ಬೇಳೆ ಮಾರುಕಟ್ಟೆಗೆ ಬರಂದಿರಲಿಲ್ಲ. ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದು, ಸಾರಿಗೆ ಸೇವೆ ಸಂಪೂರ್ಣ ಸ್ಥಗಿತಗೊಂಡಿತ್ತು.

ಬಾರ್‌ಗಳು ಬಾಗಿಲು ಮುಚ್ಚಿದ್ದು, ಈ ಎಲ್ಲ ಸೇವೆಗಳು  ಸೋಮವಾರದವರೆಗೂ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರ ಓಡಾಟವಿಲ್ಲದೆ ನಗರ ಸಂಪೂರ್ಣ ಬಿಕೋ ಎನ್ನುತ್ತಿತ್ತು. ಉಳಿದಂತೆ ಅಗತ್ಯ ವಸ್ತುಗಳಾದ ದಿನಸಿ ಹಾಲು ತರಕಾರಿ ಮಾಂಸದ ಅಂಗಡಿ ಔಷಧ ಮಳಿಗೆ,  ಆಸ್ಪತ್ರೆಗಳ ಸೇವೆಗೆ ಅವಕಾಶ ಕಲ್ಪಿಸಿದ್ದು, ಹೋಟೆಲ್‌ಗ‌ಳು ಪಾರ್ಸೆಲ್‌ ಸೇವೆ ಎಂದಿನಂತೆ ಕಾರ್ಯ ನಿರ್ವಹಿಸಿದವು. ಕೆಲವು ವಾಹನ ಸವಾರರು ಅನಗತ್ಯವಾಗಿ ಓಡಾಟ ಕಂಡು ಬಂತು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಆದೇಶಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಲಾಕ್‌ಡೌನ್‌ ಬುಹುತೇಕ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.